ಬೆಳಗಾವಿ | ವರದಕ್ಷಿಣೆ ಪಡೆದರೆ ₹11 ಲಕ್ಷ ದಂಡ: ಬಂಜಾರಾ ಸಮಾಜದ ಐತಿಹಾಸಿಕ ನಿರ್ಣಯ

Date:

ವರದಕ್ಷಿಣೆಗಾಗಿ ಹೆಣ್ಣುಮಕ್ಕಳು
ದೌರ್ಜನ್ಯಕ್ಕೊಳಗಾಗಿ ಜೀವ ಕಳೆದುಕೊಳ್ಳುತ್ತಿರುವ ಘಟನೆಗಳ ನಡುವೆ, ಬೆಳಗಾವಿ ಜಿಲ್ಲೆಯ ಬಂಜಾರಾ ಸಮಾಜ ವರದಕ್ಷಿಣೆ ವಿರುದ್ಧ ದಿಟ್ಟ ಹೆಜ್ಜೆ ಇಟ್ಟಿದೆ. ಇನ್ನು ಮುಂದೆ ಸಮಾಜದಲ್ಲಿ ವರದಕ್ಷಿಣೆ ನೀಡುವುದಕ್ಕೂ, ಪಡೆಯುವುದಕ್ಕೂ ಸಂಪೂರ್ಣ ನಿಷೇಧ ಹೇರಲಾಗಿದ್ದು, ನಿಯಮ ಉಲ್ಲಂಘಿಸಿ ವರದಕ್ಷಿಣೆ ಸ್ವೀಕರಿಸಿದವರಿಗೆ ₹11 ಲಕ್ಷ ದಂಡ ವಿಧಿಸುವ ನಿರ್ಣಯ ಕೈಗೊಳ್ಳಲಾಗಿದೆ.

- Advertisement -

ಜುಲೈ 30ರಂದು ಬೆಳಗಾವಿ ಜಿಲ್ಲೆಯ ಯರಗಟ್ಟಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ 35 ತಾಂಡಾಗಳ ಬಂಜಾರಾ ಸಮಾಜದ ಗುರು-ಹಿರಿಯರು ಹಾಗೂ ಮುಖಂಡರು ಈ ಕುರಿತು ಠರಾವ್ ಅಂಗೀಕರಿಸಿದರು. ವರದಕ್ಷಿಣೆ ಮಾತ್ರವಲ್ಲದೆ ಬಾಲ್ಯವಿವಾಹಕ್ಕೂ ಕಡಿವಾಣ ಹಾಕಲು ನಿರ್ಧರಿಸಲಾಗಿದ್ದು, ಮದುವೆ ಮತ್ತು ನಿಶ್ಚಿತಾರ್ಥ ಸಮಾರಂಭಗಳನ್ನು ಸರಳವಾಗಿ ನಡೆಸುವಂತೆ ಕರೆ ನೀಡಲಾಗಿದೆ. ಮದುವೆಗಳಲ್ಲಿ ಡಿಜೆ ಬಳಕೆಗೂ ನಿರ್ಬಂಧ ವಿಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಕಳೆದ ಎರಡು ತಿಂಗಳಿನಿಂದ ಸಮಾಜದ ಮುಖಂಡರು ಜಿಲ್ಲೆಯ 35 ತಾಂಡಾಗಳಿಗೆ ಭೇಟಿ ನೀಡಿ ವರದಕ್ಷಿಣೆಯಿಂದಾಗುವ ಕೌಟುಂಬಿಕ ಹಾಗೂ ಸಾಮಾಜಿಕ ಸಮಸ್ಯೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು. ಇದರ ಪರಿಣಾಮವಾಗಿ ಸಮಾಜದ ಜನರು ವರದಕ್ಷಿಣೆ ಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ತೊಟ್ಟಿದ್ದಾರೆ.

ಹೆಣ್ಣು ಭ್ರೂಣಹತ್ಯೆ ಸಂಪೂರ್ಣ ನಿಲ್ಲಬೇಕು, ಹೆಣ್ಣುಮಕ್ಕಳನ್ನು ಮನೆಯ ಮಹಾಲಕ್ಷ್ಮೀಯಾಗಿ ಗೌರವಿಸಬೇಕು. ಬಾಲ್ಯವಿವಾಹ ತಡೆದು ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಬೇಕು. ಮದುವೆಗಳಲ್ಲಿ ಹಣ, ಚಿನ್ನ ಹಾಗೂ ದುಬಾರಿ ಉಡುಗೊರೆಗಳ ಬೇಡಿಕೆ ಮಾಡಬಾರದು ಎಂಬ ನಿರ್ಣಯವನ್ನು ಸಮಾಜ ಕೈಗೊಂಡಿದೆ.

ಸಭೆಯಲ್ಲಿ ಬಂಜಾರಾ ಸಮಾಜದ ಗುರು-ಹಿರಿಯರು ಸಂತ ಸೇವಾಲಾಲ್ ಮಹಾರಾಜ ಸೇರಿದಂತೆ ಸಮಾಜದ ಆರಾಧ್ಯ ದೇವರುಗಳ ಸನ್ನಿಧಿಯಲ್ಲಿ ಪ್ರತಿಜ್ಞೆ ಸ್ವೀಕರಿಸಿ, “ವರದಕ್ಷಿಣೆ ಕೊಡುವುದಿಲ್ಲ, ಪಡೆಯುವುದಿಲ್ಲ; ಸಭೆಯ ನಿರ್ಣಯವನ್ನು ಚಾಚೂ ತಪ್ಪದೆ ಪಾಲಿಸುತ್ತೇವೆ” ಎಂದು ಸಂಕಲ್ಪ ಮಾಡಿದರು.

ಕಾನೂನಿನ ಭಯಕ್ಕಿಂತ ಸಾಮಾಜಿಕ ಹೊಣೆಗಾರಿಕೆಯಿಂದ ವರದಕ್ಷಿಣೆ ನಿರ್ಮೂಲನೆ ಮಾಡಬೇಕು ಎಂಬ ಬಂಜಾರಾ ಸಮಾಜದ ಈ ನಿರ್ಧಾರ ಇದೀಗ ಜಿಲ್ಲೆಯಾದ್ಯಂತ ಗಮನ ಸೆಳೆದಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಯರಗಟ್ಟಿ ಬಸ್‌ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಸಚಿವ ಸತೀಶ ಜಾರಕಿಹೊಳಿಯವರಿಗೆ ಕರವೇ ಮನವಿ

ಬೆಳಗಾವಿ ಜಿಲ್ಲೆಯ ಯರಗಟ್ಪಿ ಪಟ್ಟಣದ ಬಸ್‌ ನಿಲ್ದಾಣದಲ್ಲಿ ಮೂಲಸೌಕರ್ಯ ಕಲ್ಪಿಸಿ, ಸಾರ್ವಜನಿಕರು...

ಬೆಳಗಾವಿ | ರಾಣಿ ಚೆನ್ನಮ್ಮ ವಿವಿ ಶುಲ್ಕ ಹೆಚ್ಚಳ: ವಿದ್ಯಾರ್ಥಿಗಳ ಮೇಲೆ ಹೆಚ್ಚಿದ ಆರ್ಥಿಕ ಹೊರೆ

ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಕಾಲೇಜು ಪ್ರವೇಶಾತಿ ಹಾಗೂ ಸೆಮಿಸ್ಟರ್...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...