ಬೆಳಗಾವಿ | ವಿಫಲತೆಯಿಂದ ಕುಗ್ಗದೆ ಯಶಸ್ಸಿನತ್ತ ಸಾಗಿರಿ: ರಾಜ್ಯಪಾಲ ಗೆಹ್ಲೋಟ್

Date:

ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದಾಗ ವಿನಯದಿಂದ ಇರಬೇಕು. ಕಷ್ಟಗಳು ಎದುರಾದಾಗ ತಾಳ್ಮೆ ಕಳೆದುಕೊಳ್ಳದೆ, ವೈಫಲ್ಯ ಎದುರಾದರೆ ಮತ್ತೆ ಯಶಸ್ಸಿನತ್ತ ಸಾಗಲು ನಿರಂತರ ಪ್ರಯತ್ನಿಸಬೇಕು ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಬೆಳಗಾವಿ ವಿಟಿಯು ಘಟಿಕೋತ್ಸವದಲ್ಲಿ ಸಲಹೆ ನೀಡಿದರು.

- Advertisement -

ವಿಟಿಯುನ 26ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬ ಗೊಂದಲ ಎದುರಾದಾಗ, ತಮ್ಮ ಜ್ಞಾನ ಮತ್ತು ಸಾಮರ್ಥ್ಯದಿಂದ ದೇಶ ಹಾಗೂ ಸಮಾಜಕ್ಕೆ ಏನು ಕೊಡುಗೆ ನೀಡಬಹುದು ಎಂಬುದನ್ನು ಆಲೋಚಿಸಿ ನಿರ್ಧಾರ ಕೈಗೊಳ್ಳಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಕರ್ನಾಟಕ ನವೋದ್ಯಮ ಮತ್ತು ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಕೇಂದ್ರವಾಗಿದೆ. ವಿಟಿಯು ವಿದ್ಯಾರ್ಥಿಗಳು ಉದ್ಯೋಗ ಹುಡುಕುವವರಾಗುವುದಕ್ಕಿಂತ ಉದ್ಯೋಗ ಸೃಷ್ಟಿಸುವವರಾಗಬೇಕು. ಯಶಸ್ವಿ ಸ್ಟಾರ್ಟ್‌ಅಪ್ ಸ್ಥಾಪಿಸಿ ಯುವಕರಿಗೆ ಉದ್ಯೋಗ ನೀಡುವುದರಿಂದ ವೈಯಕ್ತಿಕ ಯಶಸ್ಸಿನ ಜತೆಗೆ ದೇಶದ ಆರ್ಥಿಕ ಶಕ್ತಿಗೂ ಕೊಡುಗೆ ನೀಡಬಹುದು ಎಂದರು.

ಜಲ ಸಂರಕ್ಷಣೆ, ಸ್ವಚ್ಛ ಇಂಧನ, ಸುಸ್ಥಿರ ಕೃಷಿ, ಗ್ರಾಮೀಣ ತಂತ್ರಜ್ಞಾನ, ಆರೋಗ್ಯ ಸೇವೆ, ಸ್ಮಾರ್ಟ್ ಮೊಬಿಲಿಟಿ, ಸೈಬ‌ರ್ ಭದ್ರತೆ ಹಾಗೂ ಹವಾಮಾನ ಬದಲಾವಣೆ ಸೇರಿದಂತೆ ದೇಶದ ನೈಜ ಸಮಸ್ಯೆಗಳಿಗೆ ಪರಿಹಾರ ನೀಡುವ ಸಂಶೋಧನೆಗಳಿಗೆ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.

‘ರಿಸರ್ಚ್ ಪೇಪ‌ರ್ ಮುಖ್ಯ, ಆದರೆ ಸಂಶೋಧನೆಯ ನೈಜ ಜಗತ್ತಿನ ಮೇಲಿನ ಪರಿಣಾಮ ಅದಕ್ಕಿಂತಲೂ ಮುಖ್ಯ’ ಎಂದು ಗೆಹ್ಲೋಟ್ ಹೇಳಿದರು.

ಸರ್ ಎಂ. ವಿಶ್ವೇಶ್ವರಯ್ಯ, ಡಾ. ಎ.ಪಿ.ಜೆ. ಅಬ್ದುಲ್ ಕಲಾಂ, ಸ್ವಾಮಿ ವಿವೇಕಾನಂದ ಹಾಗೂ ಡಾ. ಬಿ.ಆ‌ರ್. ಅಂಬೇಡ್ಕ‌ರ್ ಅವರ ಆದರ್ಶಗಳಿಂದ ವಿದ್ಯಾರ್ಥಿಗಳು ಪ್ರೇರಣೆ ಪಡೆದು ಜ್ಞಾನ, ಆತ್ಮವಿಶ್ವಾಸ ಹಾಗೂ ಜವಾಬ್ದಾರಿಯೊಂದಿಗೆ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.

ಜಲ ಸಂರಕ್ಷಣೆ, ಸ್ವಚ್ಛ ಇಂಧನ, ಸುಸ್ಥಿರ ಕೃಷಿ, ಗ್ರಾಮೀಣ ತಂತ್ರಜ್ಞಾನ, ಆರೋಗ್ಯ ಸೇವೆ, ಸ್ಮಾರ್ಟ್ ಮೊಬಿಲಿಟಿ, ಸೈಬ‌ರ್ ಭದ್ರತೆ ಹಾಗೂ ಹವಾಮಾನ ಬದಲಾವಣೆ ಸೇರಿದಂತೆ ದೇಶದ ನೈಜ ಸಮಸ್ಯೆಗಳಿಗೆ ಪರಿಹಾರ ನೀಡುವ ಸಂಶೋಧನೆಗಳಿಗೆ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.

‘ರಿಸರ್ಚ್ ಪೇಪ‌ರ್ ಮುಖ್ಯ, ಆದರೆ ಸಂಶೋಧನೆಯ ನೈಜ ಜಗತ್ತಿನ ಮೇಲಿನ ಪರಿಣಾಮ ಅದಕ್ಕಿಂತಲೂ ಮುಖ್ಯ’ ಎಂದು ಗೆಹೋಟ್ ಹೇಳಿದರು.

ಸರ್ ಎಂ. ವಿಶ್ವೇಶ್ವರಯ್ಯ, ಡಾ. ಎ.ಪಿ.ಜೆ. ಅಬ್ದುಲ್ ಕಲಾಂ, ಸ್ವಾಮಿ ವಿವೇಕಾನಂದ ಹಾಗೂ ಡಾ. ಬಿ.ಆ‌ರ್. ಅಂಬೇಡ್ಕ‌ರ್ ಅವರ ಆದರ್ಶಗಳಿಂದ ವಿದ್ಯಾರ್ಥಿಗಳು ಪ್ರೇರಣೆ ಪಡೆದು ಜ್ಞಾನ, ಆತ್ಮವಿಶ್ವಾಸ ಹಾಗೂ ಜವಾಬ್ದಾರಿಯೊಂದಿಗೆ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...

ಬೆಳಗಾವಿ | ಅಕ್ಟೋಬರ್ 4ರಂದು ಶಿವಾಜಿ ಕಾಗಣಿಕರ್ ಕುರಿತು ಮೂರು ಕೃತಿಗಳ ಲೋಕಾರ್ಪಣೆ

ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಸ್ಕೂಲ್ ಆಫ್‌ ಕಲ್ಟರ್‌ನ ಗೋಗಟೆ ಸಭಾಂಗಣದಲ್ಲಿ...

ಬೆಳಗಾವಿ | ವಿದ್ಯುತ್‌ ಸಂಪರ್ಕ ಕಡಿತ: ಹೆಸ್ಕಾಂ ಅಧಿಕಾರಿಗಳ ಮೇಲೆ ಚನ್ನರಾಜ ಹಟ್ಟಿಹೊಳಿ ಹಲ್ಲೆ ಆರೋಪ

ವಿದ್ಯುತ್‌ ಬಿಲ್ ಬಾಕಿ ಕಾರಣ ಸಂಪರ್ಕ ಕಡಿತಗೊಳಿಸಿದ್ದನ್ನು ಪ್ರಶ್ನಿಸಿ ಹೆಸ್ಕಾಂ ಅಧಿಕಾರಿಗಳ...