ಡಾ. ಬಿ.ಆರ್. ಅಂಬೇಡ್ಕರ್ ಅವರು ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಭೇಟಿ ನೀಡಿದ ಘಳಿಗೆಗೆ 100 ವರ್ಷಗಳು ಪೂರೈಸಿದ ಹಿನ್ನೆಲೆ, ರಾಜ್ಯ ಸರ್ಕಾರದಿಂದಲೂ ಶತಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೋಮವಾರ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮದ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಅಂಬೇಡ್ಕರ್ ಭೇಟಿ ಸ್ಮರಣಾರ್ಥವಾಗಿ ಬಿಜೆಪಿ ಸಮಾವೇಶ ನಡೆಸುತ್ತಿರುವುದಕ್ಕೆ ಸರಿಹೊಂದುವಂತೆ, ನಿಪ್ಪಾಣಿಯಲ್ಲಿ ಶತಮಾನೋತ್ಸವ ಆಚರಣೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ,” ಎಂದು ಸ್ಪಷ್ಟಪಡಿಸಿದರು.
ಸಂವಿಧಾನದ ಮೇಲೆ ನಂಬಿಕೆ:
“ಕಾಂಗ್ರೆಸ್ ಪಕ್ಷವು ಸಂವಿಧಾನದ ಮೇಲೆ ಪೂರ್ಣ ನಂಬಿಕೆ ಇಟ್ಟಿದೆ. ಅದನ್ನು ನಾವು ಭಕ್ತಿಯಿಂದ ಪಾಲಿಸುತ್ತಿದ್ದೇವೆ. ನಮ್ಮ ನಡತೆ, ನಿಟ್ಟಿನಲ್ಲಿ ಸಂವಿಧಾನ ಅಳವಡಿಸಿಕೊಳ್ಳಲಾಗಿದೆ,” ಎಂದು ಹೆಬ್ಬಾಳಕರ ಹೇಳಿದರು.
ಕಾನೂನು ಸುವ್ಯವಸ್ಥೆ ಬಗ್ಗೆ ಪ್ರತಿಕ್ರಿಯೆ:
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿಯವರ ಆರೋಪಕ್ಕೆ ಉತ್ತರಿಸಿದ ಅವರು, “ಹುಬ್ಬಳ್ಳಿ ಘಟನೆಯನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ಬೇರೆ ರಾಜ್ಯಗಳೊಂದಿಗೆ ಹೋಲಿಕೆ ಮಾಡುವ ಅವಶ್ಯಕತೆ ಇಲ್ಲ. ಆದರೆ, ಮಣಿಪುರದ ಸ್ಥಿತಿಗತಿ ನೋಡಿದರೆ ಪ್ರಧಾನಿ ಅಲ್ಲಿ ಒಮ್ಮೆಯೂ ಭೇಟಿ ನೀಡಿಲ್ಲ. ಈ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದು ಬಿಜೆಪಿಯವರಿಗೆ ಗೊತ್ತಿದೆಯೇ?” ಎಂದು ಪ್ರಶ್ನಿಸಿದರು.
ಬಿಜೆಪಿಯ ಜನಾಕ್ರೋಶ ಯಾತ್ರೆ ಬಗ್ಗೆ ತಿರುಗೇಟು:
“ಬಿಜೆಪಿಯವರು ಎರಡು ಅಲ್ಲ, ನಾಲ್ಕನೇ ಸುತ್ತಿನ ಜನಾಕ್ರೋಶ ಯಾತ್ರೆ ಮಾಡಿದರೂ ಜನರ ಆಕ್ರೋಶ BJP ಮೇಲಿಂದ ಕಡಿಮೆಯಾಗಲ್ಲ. ಜನತೆ ಈಗ ಬಹಳಷ್ಟು ಬುದ್ಧಿವಂತರಾಗಿದ್ದಾರೆ,” ಎಂದು ಅವರು ಉಲ್ಲೇಖಿಸಿದರು.