ಸಮಾಜಕ್ಕೆ ತನ್ನಿಂದಾದ ಕೊಡುಗೆ ನೀಡಬೇಕು. ಯಾವುದೇ ಅಧಿಕಾರ, ಹುದ್ದೆಯ ನಿರೀಕ್ಷೆಯಿಲ್ಲದೆ ಜನರಿಗಾಗಿ ಕೆಲಸ ಮಾಡುವ ಮೂಲಕ ಸಮಾಜ ಸೇವೆ ಮಾಡುವುದು ನನ್ನ ಮುಖ್ಯ ಉದ್ದೇಶವಾಗಿದೆ ಎಂದು ಬರಹಗಾರ, ಸಮಾಜ ಸೇವಕ ಸಿದ್ದಾರ್ಥ ವಾಡೆನ್ನವರ ಹೇಳಿದರು.
ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಹಾರೂಗೇರಿ ಪಟ್ಟಣದ ಕಾಳಿಕಾ ಮಂದಿರದ ಸಭಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. “ಸಮಾಜದಲ್ಲಿ ಅನೇಕ ಸಮಸ್ಯೆಗಳಿವೆ. ಅವುಗಳನ್ನು ಗುರುತಿಸಿ ಪರಿಸಲು ಪ್ರಯತ್ನಿಸೋಣ ಸಮಾಜ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕಿ , ಜನರ ನೋವುಗಳಿಗೆ ಸ್ಪಂದಿಸುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಸಮಾಜದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬರೂ ತಮ್ಮದೇ ಆದ ಪಾತ್ರ ವಹಿಸಬೇಕು” ಎಂದರು.
ಅಧಿಕಾರ ಅಥವಾ ರಾಜಕೀಯ ಹುದ್ದೆ ಇದ್ದಾಗ ಮಾತ್ರ ಜನರ ಸೇವೆ ಮಾಡಬಹುದು ಎಂಬ ಭಾವನೆ ಸರಿಯಲ್ಲ. ಜನರೊಂದಿಗೆ ಬೆರೆತು, ಅವರ ಸಮಸ್ಯೆಗಳಿಗೆ ಸ್ಪಂದಿಸುವುದೇ ನಿಜವಾದ ಸಮಾಜ ಸೇವೆ. ಸಮಾಜದ ಹಿತಕ್ಕಾಗಿ ನಿರಂತರವಾಗಿ ಶ್ರಮಿಸುವ ಸಂಕಲ್ಪ ವನ್ನು ನಾನು ಹೊಂದಿದ್ದೇನೆ ಎಂದು ತಿಳಿಸಿದರು.
ಸಮಾಜಮುಖಿ ಚಿಂತನೆ, ಜನಪರ ಕಾಳಜಿ ಹಾಗೂ ಸೇವಾ ಮನೋಭಾವದ ಮೂಲಕ ಸಮಾಜಕ್ಕೆ ಅರ್ಥಪೂರ್ಣ ಕೊಡುಗೆ ನೀಡುವ ಆಶಯ ವ್ಯಕ್ತಪಡಿಸಿದ ಅವರು ನಾನು ನನ್ನ ದುಡಿಮೆಯ 30% ರಷ್ಟು ಸಮಾಜದ ವಿವಿಧ ಕಾರ್ಯಕ್ಕೆ ವಿನಿಯೋಗಿಸುತ್ತೇನೆ ಆ ಸಂತೃಪ್ತಿ ನನಗಿದೆ ಎಂದರು
ಒಂದು ವೇಳೆ ಕುಡಚಿ ಮತಕ್ಷೇತ್ರದ ಜನರ ಸೇವೆ ಮಾಡಲು ರಾಜಕೀಯ ಅಧಿಕಾರ ಸಿಕ್ಕರೆ ಮತ್ತಷ್ಟು ಜನರ ಸೇವೆ ಮಾಡುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಿದ್ದಾರ್ಥ ವಾಡೆನ್ನವರ ಅಭಿಮಾನಿಗಳು, ಯುವಕರು, ಪತ್ರಕರ್ತರು ಹಾಜರಿದ್ದರು



