ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿಗೆ ಕಳುಹಿಸುವ ಕುರಿತು ಸಮಾಜ ಕಲ್ಯಾಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. 2025-26ನೇ ಸಾಲಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಒಟ್ಟು 7,700 ಅರ್ಹ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಿ ಅಕ್ಟೋಬರ್ 2ರಂದು (ವಿಜಯದಶಮಿ ದಿನ) ನಡೆಯಲಿರುವ ಪ್ರವರ್ತನಾ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ವ್ಯವಸ್ಥೆ ಮಾಡಲಾಗುತ್ತಿದೆ.
ಆಯ್ಕೆಯಾದ ಯಾತ್ರಾರ್ಥಿಗಳನ್ನು ಕೆ.ಎಸ್.ಆರ್.ಟಿ.ಸಿ., ಇತರೆ ಸಾರಿಗೆ ಬಸ್ಸುಗಳು ಹಾಗೂ ರೈಲುಗಳ ಮೂಲಕ ನಾಗಪುರಕ್ಕೆ ಕಳುಹಿಸಿ, ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ಪ್ರಯಾಣ ಹಾಗೂ ಹಿಂದಿರುಗುವ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ಮಾನವೀಯತೆ ಮರೆತು ರೋಗಿಯನ್ನು ಚಳಿಯಲ್ಲಿ ಬಿಟ್ಟು ಹೋದ ಸಿಬ್ಬಂದಿ
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆಗಸ್ಟ್ 25ರಿಂದ ಸೆಪ್ಟೆಂಬರ್ 9, 2025ರವರೆಗೆ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಜಾಲತಾಣ https://swd.karnataka.gov.in/ ಮೂಲಕ ಆನ್‌ಲೈನ್ ಮೂಲಕ ಸಲ್ಲಿಸಬಹುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
https://shorturl.fm/dKLzz