ಬೆಳಗಾವಿ ನಗರದಲ್ಲಿ ನಾಳೆ ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಬೃಹತ್‌ ಸಮಾವೇಶ

Date:

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ಯುನೈಟೆಡ್ ಶುಗ‌ರ್ ವರ್ಕಸ್‌್ರ ಫೆಡರೇಷನ್ (KUSWF) ವತಿಯಿಂದ ಸೆ.27ರಂದು ಬೆಳಗಾವಿಯಲ್ಲಿ ರಾಜ್ಯಮಟ್ಟದ ಬೃಹತ್ ಸಮಾವೇಶ ಆಯೋಜಿಸಲಾಗಿದೆ.

- Advertisement -

ನಗರದ ಇಂಜಿನಿಯರ್ಸ್ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಸಮಾವೇಶ ನಡೆಯಲಿದ್ದು, ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭಾಗವಹಿಸಲಿದ್ದಾರೆ. AIUTUC ರಾಜ್ಯಾಧ್ಯಕ್ಷ ಕೆ. ಸೋಮಶೇಖ‌ರ್ ಉದ್ಘಾಟಿಸಲಿದ್ದು, KUSWF ಅಧ್ಯಕ್ಷ ಅರವಿ ಬಸವನಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಆರ್‌ಎಸ್‌ಎಸ್ ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನೂರು ಡಿ ಕೆ ಶಿವಕುಮಾರ್‌ ಹೆಗ್ಗಡೆಯವರೊಂದಿಗಿದ್ದಾರೆ- ಹಳೆಯ ಹೇಳಿಕೆಗೆ...

ಅಕ್ರಮ ಶವ ಹೂತ ಪ್ರಕರಣದ ಎಸ್‌ಐಟಿ ತನಿಖೆ ನಡೆಯುತ್ತಿದ್ದಾಗ "ಇದು ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ" ಎಂದು ಸದನದಲ್ಲಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದಾಗ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು "ಧರ್ಮಸ್ಥಳದ ವಿರುದ್ಧ ಯಾರೆಲ್ಲ...

7ನೇ ತ್ರಿಪಕ್ಷೀಯ ವೇತನ ಮಂಡಳಿ ಜಾರಿಗೆ ಇರುವ ನ್ಯಾಯಾಲಯದ ತಡೆಯಾಜ್ಞೆ ತೆರವು, 8ನೇ ವೇತನ ಮಂಡಳಿ ರಚಿಸಿ ಹಿಂಬಾಕಿ ಸಹಿತ ವೇತನ ಪರಿಷ್ಕರಣೆ ಜಾರಿ, ನೇರ ಉತ್ಪಾದನಾ ವಿಭಾಗಗಳಲ್ಲಿನ ಗುತ್ತಿಗೆ ಪದ್ಧತಿ ರದ್ದು ಹಾಗೂ ದೀರ್ಘಕಾಲದಿಂದ ದುಡಿಯುತ್ತಿರುವ ಗುತ್ತಿಗೆ ಮತ್ತು ಋತುಮಾನ ಕಾರ್ಮಿಕರ ಕಾಯಂಗೊಳಿಸುವಿಕೆ ಪ್ರಮುಖ ಬೇಡಿಕೆಗಳಾಗಿವೆ.

ಇದರ ಜತೆಗೆ ಸಮಾನ ಕೆಲಸಕ್ಕೆ ಸಮಾನ ವೇತನ, ಪಿಎಫ್‌-ಇಎಸ್‌ಐ ಸೌಲಭ್ಯ, ಸುರಕ್ಷಿತ ಕೆಲಸದ ವಾತಾವರಣ, ಕಾರ್ಮಿಕ ಸಂಘಟನೆಯ ಹಕ್ಕಿನ ರಕ್ಷಣೆ ಹಾಗೂ ಅಕ್ರಮ ವಜಾ ತಡೆ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಡಲು ಸಂಘಟನೆ ನಿರ್ಧರಿಸಿದೆ.

ಸಮಾವೇಶದ ಹಿನ್ನೆಲೆಯಲ್ಲಿ ಸೆ.18ರಿಂದ ಚಾಮರಾಜನಗರದಿಂದ ರಾಜ್ಯಾದ್ಯಂತ ಪ್ರಚಾರ ಜಾಥಾ ಆರಂಭಿಸಲಾಗಿದ್ದು, ಹಲವು ಜಿಲ್ಲೆಗಳಲ್ಲಿ ಸಂಚರಿಸಿ ಕಾರ್ಮಿಕರನ್ನು ಸಂಘಟಿಸಲಾಗುತ್ತಿದೆ. ರಾಜ್ಯದ ಎಲ್ಲ ಸಕ್ಕರೆ ಕಾರ್ಖಾನೆಗಳ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ KUSWF ಕರೆ ನೀಡಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬರ ವಿದ್ಯುತ್ ಸಮಸ್ಯೆ: ಸವದಿ ವಿರುದ್ದ ಕುಮಠಳ್ಳಿ ವ್ಯಂಗ್ಯ

ಬರ ಹಾಗೂ ವಿದ್ಯುತ್ ಸಮಸ್ಯೆ ಖಂಡಿಸಿ ಬೆಳಗಾವಿ ಜಿಲ್ಲೆಯ ಕಾಗವಾಡದಲ್ಲಿ ನಡೆದ...