ಬೆಳಗಾವಿಯ ನಗರೀಕರಣಕ್ಕೆ ಹೊಸ ಮುಖ : ನಾಲ್ಕು ಗ್ರಾಮಗಳಿಗೆ ಪಟ್ಟಣ ಪಂಚಾಯತಿ ಹುದ್ದೆ, ಪುರಸಭೆಗೆ ನಗರಸಭೆಯ ಗೌರವ

Date:

ರಾಜ್ಯದ ನಗರೀಕರಣ ಪ್ರಕ್ರಿಯೆಗೆ ಗತಿಯೊದಗಿಸುವಂತೆ, ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. 6 ಜಿಲ್ಲೆಗಳ 12 ಗ್ರಾಮ ಪಂಚಾಯತಿಗಳನ್ನು ಪಟ್ಟಣ ಪಂಚಾಯತಿಗಳಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ ದೊರೆತಿದ್ದು, ಬೆಳಗಾವಿ ಜಿಲ್ಲೆಯ ನಾಲ್ಕು ಗ್ರಾಮಗಳು— ಅಂಕಲಿ, ಸುರೇಬಾನ, ಮನಿಹಾಳ ಮತ್ತು ಕಟಕೋಳ — ಹೊಸ ಪಟ್ಟಣ ಪಂಚಾಯತಿಗಳಾಗಿ ಘೋಷಿಸಲ್ಪಟ್ಟಿವೆ.

- Advertisement -

ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆಯನ್ನೂ ನಗರಸಭೆ (City Municipality)ಯಾಗಿ ಮೇಲ್ದರ್ಜೆಗೇರಿಸಲಾಗಿದ್ದು, ಇದರೊಂದಿಗೆ ನಗರಾಭಿವೃದ್ಧಿಗೆ ಹೆಚ್ಚಿನ ಅನುದಾನ, ಸುಧಾರಿತ ಮೂಲಸೌಕರ್ಯ ಹಾಗೂ ಉತ್ತಮ ನಗರಾಡಳಿತದ ಅವಕಾಶ ಉಂಟಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಸಚಿವ ಸಂಪುಟ ಸಭೆಯಲ್ಲಿ ಔಷಧ ಮತ್ತು ಸೌಂದರ್ಯವರ್ಧಕ ತಿದ್ದುಪಡಿ ವಿಧೇಯಕ ಹಾಗೂ ಸಿನಿ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ತಿದ್ದುಪಡಿ ವಿಧೇಯಕಗಳಿಗೂ ಮಂಜೂರು ದೊರೆತಿದೆ. ಸಂಬಂಧಿತ ಇಲಾಖೆಗಳಲ್ಲಿ ಆಡಳಿತ ಮತ್ತು ನಿಯಂತ್ರಣ ಬಲಪಡಿಸುವ ಉದ್ದೇಶ ಇದಾಗಿದೆ.

ಹೊಸ ಪಟ್ಟಣ ಪಂಚಾಯತಿಗಳಾಗಿ ಘೋಷಿಸಲ್ಪಟ್ಟ ಪ್ರದೇಶಗಳಲ್ಲಿ ಸಾರ್ವಜನಿಕರು ಸಂತೋಷ ವ್ಯಕ್ತಪಡಿಸಿದ್ದು, ನಗರ ಮಟ್ಟದ ಸೌಲಭ್ಯ ಮತ್ತು ಅಭಿವೃದ್ಧಿ ಈಗ ವೇಗ ಪಡೆಯುತ್ತದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬೈಕ್ EMI ಹಣ ಕೊಡದಿದ್ದಕ್ಕೆ ಪ್ರಿಯಕರನಿಂದ ಗೃಹಿಣಿ ಕೊಲೆ

ಕಳೆದ ಎರಡು ತಿಂಗಳ ಹಿಂದೆ ನಿಗೂಢವಾಗಿ ಕಾಣೆಯಾಗಿದ್ದ ಬೆಳಗಾವಿ ಜಿಲ್ಲೆಯ ಮೂಡಲಗಿ...

ಬೆಳಗಾವಿ | ಬಸ್‌ಗೆ ಬೈಕ್ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಸವದತ್ತಿ ನಗರದ ಹೊರವಲಯದ ಧಾರವಾಡ ರಸ್ತೆಯಲ್ಲಿ ಸೋಮವಾರ ರಾತ್ರಿ...

ಬೆಳಗಾವಿ | ಭೀಕರ ಅಗ್ನಿ ದುರಂತ:ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು,...

ಬೆಳಗಾವಿ | ಕಾಲುವೆಗೆ ನೀರು ಹರಿಸದ ಆಕ್ರೋಶ: ಟವ‌ರ್ ಏರಿ ರೈತನ ಪ್ರತಿಭಟನೆ

ಕಾಲುವೆಗೆ ನೀರು ಹರಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರೊಬ್ಬರು ಟವರ್ ಏರಿ ಪ್ರತಿಭಟನೆ...