ಕರ್ನಾಟಕ ರಾಜ್ಯೋತ್ಸವದ ಸಂಭ್ರಮದ ನಡುವೆ ಬೆಳಗಾವಿಯಲ್ಲಿ ಎಂಇಎಸ್‌ನಿಂದ ಕರಾಳ ದಿನಾಚರಣೆ

Date:

ಇಡೀ ಕರ್ನಾಟಕ ಸಡಗರದಿಂದ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದರೆ, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾಡಳಿತ ಹಾಗೂ ನಗರ ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ನಿಷೇಧ ಹಾಗೂ ಅನುಮತಿ ನಿರಾಕರಣೆಯ ನಡುವೆಯೂ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರು ನವೆಂಬರ್ 1 ರಂದು ಕರಾಳ ದಿನ ಆಚರಿಸಿ ಪುಂಡಾಟಿಕೆ ನಡೆಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

- Advertisement -

ಅನುಮತಿ ನಿರಾಕರಿಸಿದ್ದ ಜಿಲ್ಲಾಡಳಿತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಪೊಲೀಸ್‌ ಇಲಾಖೆಯು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಎಂಇಎಸ್‌ನ ಕರಾಳ ದಿನಾಚರಣೆ ಮತ್ತು ರ್ಬ್ಯಾಲಿಗೆ ಅಧಿಕೃತವಾಗಿ ಅನುಮತಿ ನಿರಾಕರಿಸಿತ್ತು. ಅಷ್ಟೇ ಅಲ್ಲದೆ, ಗಡಿಯಲ್ಲಿ ಉದ್ವೇಗ ಸೃಷ್ಟಿಯಾಗದಂತೆ ತಡೆಯಲು ನೆರೆಯ ಮಹಾರಾಷ್ಟ್ರದ ಶಿವಸೇನಾ ಹಾಗೂ ಎಂಇಎಸ್‌ನ ಪ್ರಮುಖ ನಾಯಕರು ಜಿಲ್ಲೆ ಪ್ರವೇಶಿಸದಂತೆ ನಿಷೇಧಾಜ್ಞೆ ಹೇರಲಾಗಿತ್ತು.

ಈ ಎಲ್ಲಾ ಕಟ್ಟುನಿಟ್ಟಿನ ಆದೇಶಗಳನ್ನು ಮೀರಿ, ಎಂಇಎಸ್ ಕಾರ್ಯಕರ್ತರು ಬೆಳಗಾವಿಯ ಸಂಭಾಜಿ ಉದ್ಯಾನದ ಬಳಿ ಕಪ್ಪು ಬಟ್ಟೆ ಧರಿಸಿ ಒಟ್ಟುಗೂಡಿದರು. ಅಲ್ಲಿಂದ ಮರಾಠಾ ಮಂದಿರದವರೆಗೆ ಕರಾಳ ದಿನದ ಮೆರವಣಿಗೆ ನಡೆಸಿದ ಪುಂಡರು, ಪೊಲೀಸರ ಸಮ್ಮುಖದಲ್ಲೇ “ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದ‌ರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಬೇಕು” ಎಂದು ನಾಡವಿರೋಧಿ ಘೋಷಣೆಗಳನ್ನು ಕೂಗಿದರು.

ಏತನ್ಮಧ್ಯೆ, ಎಂಇಎಸ್ ಕಾರ್ಯಕರ್ತರ ಈ ಕೃತ್ಯವನ್ನು ಖಂಡಿಸಿ, ಸ್ಥಳದಲ್ಲೇ ಪ್ರತಿಭಟನೆ ನಡೆಸಿ ಅವರ ರ್ಯಾಲಿಗೆ ನುಗ್ಗಲು ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಮುಂಜಾಗ್ರತಾ ಕ್ರಮವಾಗಿ ಗಡಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಹಾಗೂ ಪೊಲೀಸ್‌ ಇಲಾಖೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಎಂಇಎಸ್‌ನ ಕರಾಳ ದಿನಾಚರಣೆ ಮತ್ತು ರ್ಯಾಲಿಗೆ ಅಧಿಕೃತವಾಗಿ ಅನುಮತಿ ನಿರಾಕರಿಸಿತ್ತು. ಅಷ್ಟೇ ಅಲ್ಲದೆ, ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗದಂತೆ ತಡೆಯಲು ನೆರೆಯ ಮಹಾರಾಷ್ಟ್ರದ ಶಿವಸೇನೆ ಹಾಗೂ ಎಂಇಎಸ್‌ನ ಪ್ರಮುಖ ನಾಯಕರು ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿತ್ತು.

ಆದರೆ, ಜಿಲ್ಲಾಡಳಿತದ ಈ ಎಲ್ಲ ಕಟ್ಟುನಿಟ್ಟಿನ ಆದೇಶಗಳನ್ನು ಮೀರಿ ಎಂಇಎಸ್ ಕಾರ್ಯಕರ್ತರು ಬೆಳಗಾವಿಯ ಸಂಭಾಜಿ ಉದ್ಯಾನದ ಬಳಿ ಕಪ್ಪು ಬಟ್ಟೆ ಧರಿಸಿ ಒಟ್ಟುಗೂಡಿದರು. ಅಲ್ಲಿಂದ ಮರಾಠಾ ಮಂದಿರದವರೆಗೆ ಕರಾಳ ದಿನದ ಮೆರವಣಿಗೆ ನಡೆಸಿದರು.

ಈ ವೇಳೆ ಪೊಲೀಸರ ಸಮ್ಮುಖದಲ್ಲೇ “ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದ‌ರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಬೇಕು” ಎಂದು ಘೋಷಣೆಗಳನ್ನು ಕೂಗಿದರು.

ಇನ್ನೊಂದೆಡೆ, ಎಂಇಎಸ್‌ನ ಕರಾಳ ದಿನಾಚರಣೆಯನ್ನು ಖಂಡಿಸಿ ಸ್ಥಳದಲ್ಲೇ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕಾರ್ಯಕರ್ತರು, ಎಂಇಎಸ್‌ ರ್ಯಾಲಿಯತ್ತ ನುಗ್ಗಲು ಯತ್ನಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಬಿಗಿ ಪೊಲೀಸ್ ಬಂದೋಬಸ್ತ್

ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಗಡಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್ ಕಲ್ಪಿಸಲಾಗಿತ್ತು. ಜಿಲ್ಲಾಡಳಿತದ ನಿರ್ಬಂಧದ ನಡುವೆಯೂ ಎಂಇಎಸ್ ಕಾರ್ಯಕರ್ತರು ಕರಾಳ ದಿನಾಚರಣೆ ನಡೆಸಿರುವುದು ಮತ್ತೊಮ್ಮೆ ಬೆಳಗಾವಿಯ ಗಡಿ ವಿವಾದದ ವಿಚಾರ ಮುನ್ನೆಲೆಗೆ ಬರುವಂತೆ ಮಾಡಿದೆ.

IMG 20251111 WA0000
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಭೀಕರ ಅಪಘಾತ: ದಂಪತಿ ಸೇರಿ ಮೂವರ ಸಾವು ಟಾಟಾ ಏಸ್‌ ಡಿಕ್ಕಿಯಾಗಿ ದುರಂತ

ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ದೇಮಟ್ಟಿ-ಮಲ್ಲಾಪುರ ಬಳಿ ಸೋಮವಾರ ಮಧ್ಯರಾತ್ರಿ...