ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಕಾಮಗಾರಿಗಳ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿರುವ ಬೆಳಗಾವಿ ಜಿಲ್ಲಾ ಪಂಚಾಯತಿಗೆ ‘ಅಮೃತ ಸರೋವರ ಜಿಲ್ಲಾ ಪುರಸ್ಕಾರ’ ನೀಡಿ ಗೌರವಿಸಲಾಯಿತು.
ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್. ಅಂಬೇಡ್ಕರ್ ಮೆಮೋರಿಯಲ್ ಟ್ರಸ್ಟ್ ಅಂಬೇಡ್ಕರ್ ಭವನದಲ್ಲಿ ನಡೆದ ನರೇಗಾ ಹಬ್ಬ-2025 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗಿದೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಂಕಾ ಖರ್ಗೆಯವರು, ಬೆಳಗಾವಿ ಜಿಪಂ ಸಿಇಒ ರಾಹುಲ್ ಶಿಂಧೆ, ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರಪ್ಪ, ಎಡಿಪಿಸಿ ಬಸವರಾಜು, ಜಿಲ್ಲಾ ಐಇಸಿ ಸಂಯೋಜಕ ಪ್ರಮೋದ ಗೋಡೆಕರ್ ಅವರಿಗೆ ಅಮೃತ ಸರೋವರ ಜಿಲ್ಲಾ ಪುರಸ್ಕಾರ ನೀಡಿ ಗೌರವಿಸಿದರು.
ನರೇಗಾ ಯೋಜನೆಯಡಿ ಅಮೃತ ಸರೋವರ ಕಾಮಗಾರಿಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಬೆಳಗಾವಿ ಜಿಲ್ಲೆಗೆ ವಿಶೇಷ ಪ್ರಶಸ್ತಿ #RDPR #RDWSD #AMRUTA_SAROVAR_AWARD_2025 #CEO_ZP_BELAGAVI pic.twitter.com/moFj5iJDN4
— Belagavi Zilla Panchayat (@ZP_Belagavi) February 5, 2025
2023-24 ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿದ್ದಕ್ಕಾಗಿ, ನರೇಗಾ ಪ್ರಶಸ್ತಿಗೆ ಜಿಲ್ಲಾ ಪಂಚಾಯ ಹಾಗೂ ಗ್ರಾಮ ಪಂಚಾಯತಿ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಅತ್ಯುತ್ತಮ ಜಿಲ್ಲಾ ಒಗ್ಗೂಡಿಸುವಿಕೆ ಪುರಸ್ಕಾರ – ಅರಣ್ಯ ಹಾಗೂ ಕೃಷಿ ಮತ್ತು ಜಲಾನಯನ ಇಲಾಖೆ, ಅತ್ಯುತ್ತಮ ಗ್ರಾಮ ಪಂಚಾಯಿತಿ ಪುರಸ್ಕಾರ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮ ಪಂಚಾಯಿತಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು.