ಬೆಳಗಾವಿ | ಜಿಲ್ಲೆಯಲ್ಲಿ ಮತ್ತೊಂದು ಮಕ್ಕಳ ಮಾರಾಟ ಜಾಲ ಪತ್ತೆ

Date:

ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಮಕ್ಕಳ ಮಾರಾಟ ಜಾಲ ಪತ್ತೆಯಾಗಿದ್ದು, ಹುಕ್ಕೇರಿ ಠಾಣೆಯ ಪೋಲಿಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಮಹಾರಾಷ್ಟ್ರ ಮೂಲದ ಆರೋಪಿಗಳಾದ ಸಂಗೀತಾ ಗೌಳಿ, ಸಂಗೀತಾ ತಾವಡೆ, ಮೋಹನ್ ತಾವಡೆ ಬಂಧಿತ ಆರೋಪಿಗಳಾಗಿದ್ದು, ಉಳಿದ ಆರೋಪಿಗಳಾದ ನಂದಕುಮಾರ ಡೋರಲೇಕರ, ನಂದಿನಿ ಡೋರಲೇಕರಿಗಾಗಿ ಪೋಲಿಸರು ಹುಡುಕಾಟ ನಡೆಸಿದ್ದಾರೆ.

- Advertisement -

ಮಕ್ಕಳ ಮಾರಾಟ ಗ್ಯಾಂಗ್ ​ವಿದವೆ ಮಹಿಳೆಯರನ್ನು ಟಾರ್ಗೆಟ್​ ಮಾಡುತ್ತದೆ. ಮಗು ಇದ್ದು ಗಂಡನಿಲ್ಲದ ಮಹಿಳೆಯರಿಗೆ ಎರಡನೇ ಮದುವೆ ಮಾಡಿಸುತ್ತಾರೆ. ಹುಕ್ಕೇರಿ ತಾಲೂಕಿನ ಸುಲ್ತಾನಪುರ ಗ್ರಾಮದ ಅರ್ಚನಾ ಎಂಬುವರನ್ನು ರಾಜು ಮಗ್ದುಮ‌ ಎನ್ನುವವರ ಜೊತೆ ಎರಡನೇ ಮದುವೆ ಮಾಡಿಸಿತ್ತು. ಅರ್ಚನಾ ಅವರ ಮೊದಲ ದಾಂಪತ್ಯದ ಸಾಕ್ಷಿಯಾಗಿ ಗಂಡು ಮಗು ಜನಿಸಿತ್ತು. ಈ ಗಂಡು ಮಗು ಅರ್ಚನಾ ಅವರ ಬಳಿ ಇದೆ. ಆದರೆ, ಈ ಮಗು ಅನಾರೋಗ್ಯದಿಂದ ಬಳಲುತ್ತಿತ್ತು ಮಗುವಿಗೆ ಚಿಕಿತ್ಸೆ ಕೊಡಿಸುವುದಾಗಿ ಹೇಳಿ ಆರೋಪಿಗಳಾದ ತಾವಡೆ ದಂಪತಿ ಮಗುವನ್ನು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಗಡಹಿಂಗ್ಲಜ್​ಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ, ಸಂಗೀತಾ ಗೌಳಿ ಮನೆಯಲ್ಲಿ ನಂದಕುಮಾರ ಡೋರಲೇಕರ ದಂಪತಿಗೆ 3 ಲಕ್ಷ ರೂ.ಗೆ ಮಗು ಮಾರಾಟ ಮಾಡಿದ್ದರು. ಮಗು ಮಾರಾಟದಿಂದ ಬಂದ ಹಣವನ್ನು ಮೂವರು ಆರೋಪಿಗಳು ಹಂಚಿಕೊಂಡಿದ್ದರು. ಈ ಸಂಬಂಧ ಹುಕ್ಕೇರಿ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಮೂವರನ್ನು ಬಂಧಿಸಿದ್ದಾರೆ. ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ವಾರದ ಹಿಂದೆ ಇದೇ ಊರಲ್ಲಿ ಸಂಗೀತಾ ಎಂಬುವರ ಮಗು ಮಾರಾಟವಾಗಿತ್ತು. ಸಂಗೀತಾ ಅವರಿಗೂ ಕೂಡ ಎರಡನೇ ಮದುವೆ ಮಾಡಿಸಿ, ಅವರ ಮೊದಲ ಮಗುವನ್ನು 4 ಲಕ್ಷ ರೂ.ಗೆ ಮಾರಾಟ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಹುಕ್ಕೇರಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...