ನಿಜಗುಣಾನಂದರಿಗೆ ಮತ್ತೊಂದು ಜೀವ ಬೆದರಿಕೆ ಪತ್ರ; ಸಚಿವರು ಸೇರಿ ಹಲವರ ಹೆಸರು ಉಲ್ಲೇಖ

Date:

ಬೆಳಗಾವಿ ಜಿಲ್ಲೆಯ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದರಿಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿದೆ. ಈ ಹಿಂದೆಯೂ ಅನಾಮಧೇಯ ಜೀವ ಬೆದರಿಕೆ ಪತ್ರವೊಂದು ಬಂದಿತ್ತು. ಇದೀಗ, ಸೆಪ್ಟೆಂಬರ್ 20ರಂದು ಮತ್ತೊಂದು ಬೆದರಿಕೆ ಪತ್ರ ಬಂದಿದೆ. ಪತ್ರದಲ್ಲಿ ಸ್ವಾಮೀಜಿ ಮಾತ್ರವಲ್ಲದೆ, ಮೂವರು ಸಚಿವರ ಹೆಸರುಗಳು ಸೇರಿದಂತೆ ಹಲವರ ಹೆಸರನ್ನೂ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಪತ್ರದಲ್ಲಿ, “ನೀನು ಆಯೋಜಿಸುವ ಪಾಪದ ಕಾರ್ಯಕ್ರಮದಲ್ಲೇ ನಿನ್ನ ಕಣ್ಣೆದುರಿಗೆ ನಿನ್ನ ಸಾವು ಬರುತ್ತೆ” ಎಂದು ಬರೆಯಲಾಗಿದೆ. ಜೊತೆಗೆ, ಸಚಿವ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವರ ಹೆಸರನ್ನು ಉಲ್ಲೇಖಿಸಲಾಗಿದೆ.

“ನಿಜಗುಣಾನಂದ ನಾನು ಬರೆದಿರುವ ಪತ್ರ ಪ್ರೇಮ ಪತ್ರ ಅಂತಾದರೂ ತಿಳಿ ಅಥವಾ ಸಾವಿನ ಪತ್ರವಂತಾದರೂ ತಿಳಿ. ನಾನು ನಿನ್ನ ಜತೆ ತಮಾಷೆ‌ ಮಾಡುತ್ತಿಲ್ಲ. ನೀನು ಆಯೋಜಿಸುವ ಪಾಪದ ಕಾರ್ಯಕ್ರಮದಲ್ಲೇ ನಿನ್ನ ಕಣ್ಣೆದುರಿಗೆ ನಿನ್ನ ಸಾವು ಬರುತ್ತೆ” ಎಂದು ಪತ್ರದಲ್ಲಿ ಬೆದರಿಕೆ ಒಡ್ಡಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನೀನು ಮನುಷ್ಯ ರೂಪದಲ್ಲಿರುವ ರಾಕ್ಷಸ. ಹಿಂದೂ ಧರ್ಮ ದೇವತೆಗಳನ್ನು ನಿಂದಿಸುವ ನೀನು ರಾಕ್ಷಸನೇ ಸರಿ. ನಿನ್ನ ಜೀವನದ‌ ಕೊನೆಯ ಘಟ್ಟದಲ್ಲಿ ನೀನು ನಿಂತಿದ್ದಿಯಾ. ನಿನ್ನ ಹತ್ಯೆ ಬಿಟ್ಟರೆ ಬೇರೆ ದಾರಿ ಇಲ್ಲ. ನಿನ್ನಂಥ ದುಷ್ಟ ರಾಕ್ಷಸಿ ಸಂತತಿಯ ಸಂಹಾರವನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ” ಎಂದು ಬೆದರಿಕೆ ಹಾಕಲಾಗಿದೆ.

ಹಿರಿಯ ಸಾಹಿತಿಗಳಾದ ಎಸ್.ಜಿ ಸಿದ್ದರಾಮಯ್ಯ, ಕೆ.ಮರುಳಸಿದ್ದಪ್ಪ, ಬರಗೂರು ರಾಮಚಂದ್ರಪ್ಪ, ಬಂಜಗೆರೆ ಜಯಪ್ರಕಾಶ್, ಪ್ರೊ.ಭಗವಾನ್, ಪ್ರೊ.ಮಹೇಶ್ ಚಂದ್ರ, ಬಿ.ಟಿ ಲಲಿತಾನಾಯಕ್, ನಟ ಚೇತನ್, ನಟ ಪ್ರಕಾಶರಾಜ್, ಭಾಸ್ಕರ್ ಪ್ರಸಾದ್, ಸಚಿವ ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಸಿ. ಎಸ್ ದ್ವಾರಕಾನಾಥ್, ದೇವನೂರ ಮಹಾದೇವ, ಬಿ.ಎಲ್ ವೇಣು ಸೇರಿದಂತೆ ಹಲವರ ಹೆಸರನ್ನು ಪತ್ರದಲ್ಲಿ ಉಲ್ಲೇಖಿಸಿಲಾಗಿದ್ದು, “ನೀವು ನಿಮ್ಮ ತಂದೆ ತಾಯಿಗಳಿಗೆ ಹುಟ್ಟಿದ್ದರೆ ಕೇಳುವ ಪ್ರಶ್ನೆಗೆ ಉತ್ತರ ಕೊಡಿ” ಎಂದು ಪತ್ರದಲ್ಲಿ ಸವಾಲು ಹಾಕಲಾಗಿದೆ.

“ಮತಾಂಧ ಮುಸ್ಲಿಮರು, ಪಾಕಿಸ್ತಾನಿಗಳು, ಭಯೋತ್ಪಾದಕರು ಮಾಡ್ತಿರೋದು ತಪ್ಪು ಎಂದು ಹೇಳುವ ತಾಕತ್ತು ನಿಮ್ಮಲ್ಲಿದೆಯೇ? ದೇಶದ ಒಳಗೆ ಇದ್ದುಕೊಂಡು ಪಾಕ್ ನಾಯಿಗಳು ಮಾಡ್ತಿರೋದು ತಪ್ಪು ‌ಎಂದು ಹೇಳುವ ಧೈರ್ಯ ನಿಮ್ಮಲ್ಲಿದೆಯೇ? ದೈರ್ಯವಿದ್ದರೆ ಹೇಳಿ ಇಲ್ಲವಾದರೆ ನಿಮ್ಮ ಕೊನೆಯ ‌ದಿನಗಳನ್ನು ಎಣಿಸಿ” ಎಂದು ಬೆದರಿಕೆ ಹಾಕಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪ್ರಧಾನಿ ಆಗಲು ಯೋಗ್ಯರಾದ ಸಾಕಷ್ಟು ಮುಖಂಡರು ಕಾಂಗ್ರೆಸ್‌ನಲ್ಲಿ ಇದ್ದಾರೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗಲು ಯಾರಿದ್ದಾರೆ? ನರೇಂದ್ರಮೋದಿ ಬಿಟ್ಟರೆ ಪ್ರಧಾನಿ ಆಗುವ ಅರ್ಹತೆ ಯಾರಿಗೂ...

ಹಾಸನ ಯುವ ನಾಯಕನ ಕಾಮಕೃತ್ಯದ ಪೆನ್‌ಡ್ರೈವ್ ಆರೋಪ; ಮೌನ ಮುರಿಯದ ಮಾಜಿ ಪ್ರಧಾನಿ

ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಪೆನ್‌ಡ್ರೈವ್ ಭಾರೀ ಸುದ್ದಿ ಮಾಡ್ತಾ...

ಕಾಂಗ್ರೆಸ್ ಪಕ್ಷ ಬೆಂಬಲಿಸಲು ಪಿಟಿಸಿಎಲ್ ಹೋರಾಟ ಸಮಿತಿ ನಿರ್ಧಾರ

ಬೆಂಗಳೂರು: ದಲಿತರು, ಸಂವಿಧಾನ ವಿರೋಧಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ...

‌ಶಿವಮೊಗ್ಗ | ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಪರ ಯೋಜನೆ ಜಾರಿ: ಗೀತಾ ಶಿವರಾಜ್‌ಕುಮಾರ್

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ ವಾರ್ಷಿಕ...