ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಮುಖ ಹುದ್ದೆಗಳಿಗೆ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ನೇಮಕಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ. ಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ನೇಮಕಾತಿ ಆದೇಶ ಹೊರಡಿಸಿದ್ದು, ಈ ಸಂಬಂಧ ಮುಖ್ಯಮಂತ್ರಿಗಳಿಗೆ ಅಧಿಕೃತ ಪತ್ರ ರವಾನಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ಕ್ಷೇತ್ರದ ಶಾಸಕ ಅಶೋಕ ಪಟ್ಟಣ ಅವರಿಗೆ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಬೈಲಹೊಂಗಲ ಕ್ಷೇತ್ರದ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ.
1.ಬಿ. ಶಿವಣ್ಣ – ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷರು.
2.ಕೆ. ಷಡಕ್ಷರಿ – ಕರ್ನಾಟಕ ರಾಜ್ಯ ಖನಿಜ ನಿಗಮ (KSMCL) ಅಧ್ಯಕ್ಷರು.
3.ಪಿ.ಎಂ. ಅಶೋಕ – ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಅಧ್ಯಕ್ಷರು.
4.ಎ.ಆರ್. ಕೃಷ್ಣಮೂರ್ತಿ -ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಅಧ್ಯಕ್ಷರು.
5.ಹಂಪನಗೌಡ ಬಾದರ್ಲಿ – ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರು.
6.ಡಿ.ಜಿ. ಶಾಂತನ ಗೌಡ – ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ (BSWML) ಅಧ್ಯಕ್ಷರು.
7.ಜಿ.ಎಚ್. ಶ್ರೀನಿವಾಸ್ – ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರು.
8.ಮಹಾಂತೇಶ್ ಕೌಜಲಗಿ – ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು.
9.ಎಸ್.ಎನ್. ಸುಬ್ಬಾರೆಡ್ಡಿ – ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (MSIL) ಅಧ್ಯಕ್ಷರು.
10.ಬೇಲೂರು ಗೋಪಾಲಕೃಷ್ಣ ವಿಧಾನಸಭೆಯ ಮುಖ್ಯ ಸಚೇತಕರು.
11.ತಸ್ವೀರ್ ಸೇರ್ – ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ.
12.ಎನ್.ಎಚ್. ಕೋನರೆಡ್ಡಿ – ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷರು.
13.ಬಸನಗೌಡ ದದ್ದಲ್ – ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (KKRDB) ಅಧ್ಯಕ್ಷರು.
14.ಮಂಜುನಾಥ್ ಭಂಡಾರಿ – ವಿಧಾನ ಪರಿಷತ್ತಿನ ಮುಖ್ಯ ಸಚೇತಕರು.
15.ಅಲ್ಲಂಪ್ರಭು ಪಾಟೀಲ್ – ಕರ್ನಾಟಕ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ (KSSIDC) ಅಧ್ಯಕ್ಷರು.
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ನಿಗಮ ಮಂಡಳಿ ಸ್ಥಾನ
ಸಚಿವ ಸಂಪುಟ ವಿಸ್ತರಣೆ ಹಾಗೂ ಪುನಾರಚನೆಯ ನಿರೀಕ್ಷೆಯಲ್ಲಿದ್ದ ಹಲವು ಕಾಂಗ್ರೆಸ್ ನಾಯಕರು ಇದೀಗ ನಿಗಮ-ಮಂಡಳಿಗಳಲ್ಲಿ ಪ್ರಮುಖ ಜವಾಬ್ದಾರಿ ಪಡೆದಿದ್ದಾರೆ.


