ಬೆಳಗಾವಿ | ಪ್ರಾಮಾಣಿಕತೆ ಮೆರೆದ ಅಥಣಿ ‘108 ಆ್ಯಂಬುಲೆನ್ಸ್‌’ ಸಿಬ್ಬಂದಿ

Date:

ಅಪಘಾತದಲ್ಲಿ ಮೃತಪಟ್ಟಿದ್ದ ವ್ಯಕ್ತಿಯೊಬ್ಬರ ಹಣವನ್ನು ಅವರ ಕುಟುಂಬಕ್ಕೆ ಮರಳಿಸಿ ಅಥಣಿಯ ‘108 ಆ್ಯಂಬುಲೆನ್ಸ್‌’ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ. ಗ್ರಾಮಸ್ಥರು ಮತ್ತು ಆಸ್ಪತ್ರೆ ಸಿಬ್ಬಂದಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

- Advertisement -

ಡಿಸೆಂಬರ್ 27ರಂದು ವ್ಯಕ್ತಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ಮೃತದೇಹವನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ವೇಳೆ, ಅವರ ಕುಟುಂಬಸ್ಥರು ಯಾರೂ ಇಲ್ಲದ ಕಾರಣ, ಅವರ ಜೇಬಿನಲ್ಲಿದ್ದ 30,500 ರೂ. ಹಣವನ್ನು ಆ್ಯಂಬುಲೆನ್ಸ್‌ ಸಿಬ್ಬಂದಿ ನಿರ್ಮಲಾ ಬನಸೋಡೆ ಮತ್ತು ಚಾಲಕ ವಿಜಯಕುಮಾರ್ ಎತ್ತಿಟ್ಟಿದ್ದರು. ಅವರ ಕಟುಂಬಸ್ಥರು ಬಂದ ಬಳಿಕ ಹಣವನ್ನು ಅವರಿಗೆ ಮರಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮತ್ತೊಂದು ಪ್ರಕರಣದಲ್ಲಿ, ಅನಾರೋಗ್ಯಕ್ಕೀಡಾಗಿದ್ದ ವೃದ್ಧ ಮಹಿಳೆ ಪಾರ್ವತೆವ್ವ ಪವಾರ ಎಂಬವರನ್ನು ಆ್ಯಂಬುಲೆನ್ಸ್‌ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ, ಆಕೆ ಮೃತಪಟ್ಟಿದ್ದರು. ಆಕೆಯ ಬಳಿಯಿದ್ದ ಬಂಗಾರದ ಒಡವೆಗಳನ್ನು ಎತ್ತಿಟ್ಟಿದ್ದ ಇದೇ ಸಿಬ್ಬಂದಿಗಳು, ಒಡವೆಗಳನ್ನು ಆಕೆಯ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ಎರಡು ಪ್ರತ್ಯೆಕ ಪ್ರಕರಣಗಳಲ್ಲಿ ಹಣ ಮತ್ತು ಆಭರಣಗಳನ್ನು ಮರಳಿ ಕುಟುಂಬಕ್ಕೆ ಹಣ ನೀಡಿ ಆ್ಯಂಬುಲೆನ್ಸ್‌ ಸಿಬ್ಬಂದಿಗಳಾದ ನಿರ್ಮಲಾ ಬನಸೋಡೆ ಹಾಗೂ ಡ್ರೈವರ ವಿಜಯ ಕುಮಾರ್ ಅವರ ಪ್ರಾಮಾಣಿಕತೆಗೆ ಆಸ್ಪತ್ರೆಯ ಸಿಬ್ಬಂದಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...