ಬೈಲಹೊಂಗಲ | ಕುಟುಂಬವನ್ನು ಎರಡು ದಿನ ಠಾಣೆಯಲ್ಲಿ ಇರಿಸಿದ ಪೋಲಿಸರು

Date:

ಆನಿಗೋಳ ಗ್ರಾಮದಲ್ಲಿ ಕುಡಿಯುವ ನೀರಿನ ನಳದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ನಡೆದ ಗಲಾಟೆ ಇದೀಗ ಹೊಸ ತಿರುವು ಪಡೆದಿದ್ದು, ನಗರ ಪೊಲೀಸ್‌ ಠಾಣೆ ಪೊಲೀಸರ ವಿರುದ್ಧ ಅಕ್ರಮ ಕಸ್ಟಡಿ ಹಾಗೂ ಕರ್ತವ್ಯಲೋಪದ ಆರೋಪಗಳು ಕೇಳಿಬಂದಿವೆ.

- Advertisement -

ಕೊಲೆ ಯತ್ನ ಪ್ರಕರಣದ ಹಿನ್ನೆಲೆಯಲ್ಲಿ ಮೇ 13ರ ಮಧ್ಯರಾತ್ರಿ ರಾಮವ್ವ ಎಂಬ ಮಹಿಳೆ, ಆಕೆಯ ಪತಿ ಹಾಗೂ ಮಗನನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆತಂದಿದ್ದರು. ಆದರೆ, ಮೂವರನ್ನೂ ಮೇ 15ರ ಮಧ್ಯಾಹ್ನದವರೆಗೆ ಕಾನೂನುಬಾಹಿರವಾಗಿ ಠಾಣೆಯಲ್ಲೇ ಇರಿಸಿಕೊಂಡಿದ್ದರು ಎಂಬ ಆರೋಪವನ್ನು ಕುಟುಂಬದವರು ಹಾಗೂ ಸಾಮಾಜಿಕ ಹೋರಾಟಗಾರರು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನ್ಯಾಯಾಲಯಕ್ಕೆ ಹಾಜರಾದ ವೇಳೆ ರಾಮವ್ವ ಅವರು ತಮ್ಮನ್ನು ಮೇ 13ರಿಂದಲೇ ಬಂಧಿಸಿ ಎರಡು ದಿನಗಳ ಕಾಲ ಠಾಣೆಯಲ್ಲಿ ಇರಿಸಲಾಗಿತ್ತು ಎಂದು ಹೇಳಿಕೆ ನೀಡಿದರು. ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ಪೊಲೀಸರಿಂದ ಲಿಖಿತ ವರದಿ ಹಾಗೂ ಮೇ 12ರಿಂದ 15ರವರೆಗೆ ಠಾಣೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಸಲ್ಲಿಸುವಂತೆ ಆದೇಶಿಸಿದರು.

ಮೇ 16ರಂದು ಪೊಲೀಸರು ಸಲ್ಲಿಸಿದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಬಂಧಿತರನ್ನು ಠಾಣೆಗೆ ಕರೆತಂದು ಬಳಿಕ ಸಿಸಿಟಿವಿ ವ್ಯಾಪ್ತಿಗೆ ಬಾರದ ಹಿಂಭಾಗದ ಪ್ರದೇಶಕ್ಕೆ ಕರೆದೊಯ್ಯುತ್ತಿರುವುದು ಕಂಡುಬಂದಿದೆ ಎಂದು ತಿಳಿದುಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ಶಿವಾನಂದ ಕೋಲಕಾರ ಹಾಗೂ ಸಾಮಾಜಿಕ ಹೋರಾಟಗಾರ ರಫೀಕ ಬಡೇಘ‌ರ್ ಪ್ರತಿಕ್ರಿಯಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಕರಣ ಇದೀಗ ನ್ಯಾಯಾಂಗ ಹಾಗೂ ಪೊಲೀಸ್‌ ವಲಯದಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...