ಬೆಳಗಾವಿ | ಜನಗಣತಿ ಬಳಿಕ ಜಿಲ್ಲಾ ವಿಭಜನೆ : ಲಕ್ಷ್ಮಣ ಸವದಿ

Date:

ಬಿಜೆಪಿಯಲ್ಲಿ 25 ವರ್ಷಗಳ ಕಾಲ ಕೆಲಸ ಮಾಡಿ ಬಳಿಕ ಕಾಂಗ್ರೆಸ್ ಸೇರ್ಪಡೆಯಾದ ತಮ್ಮನ್ನು ಅಥಣಿ ಕ್ಷೇತ್ರದ ಮತದಾರರು ಅಪ್ಪಿಕೊಂಡು, ಒಪ್ಪಿಕೊಂಡು ಗೆಲ್ಲಿಸಿದ್ದಾರೆ. ಕ್ಷೇತ್ರದ ಜನರ ವಿಶ್ವಾಸಕ್ಕೆ ಸದಾ ಕೃತಜ್ಞನಾಗಿರುತ್ತೇನೆ ಎಂದು ನೂತನ ಸಚಿವ ಲಕ್ಷ್ಮಣ ಸವದಿ ಹೇಳಿದರು.

- Advertisement -

ಅಥಣಿ ಕ್ಷೇತ್ರದ ಅಭಿವೃದ್ಧಿಗೆ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಯೋಜನೆಗಳನ್ನು ರೂಪಿಸಿಕೊಂಡು ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರನ್ನು ಒಗ್ಗೂಡಿಸಿಕೊಂಡು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

2028ರಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಪಕ್ಷದ ವರಿಷ್ಠರು ಸೂಚಿಸಿದ್ದಾರೆ. ಅದರಂತೆ ಎಲ್ಲ ಶಾಸಕರು ಹಾಗೂ ಪಕ್ಷದ ಕಾರ್ಯಕರ್ತರು ಒಮ್ಮತದಿಂದ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದರು.

ಯಾವ ಖಾತೆ ನೀಡುತ್ತಾರೆ ಎಂಬ ಚರ್ಚೆ ಬೇಡ.

ಯಾವುದೇ ಖಾತೆ ನೀಡಿದರೂ ಅದನ್ನು ಉತ್ತಮವಾಗಿ ನಿರ್ವಹಿಸಿದರೆ ಆ ಖಾತೆಗೆ ಬೆಲೆ ಬರುತ್ತದೆ. ನೀಡುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವುದೇ ಮುಖ್ಯ ಎಂದು ಲಕ್ಷ್ಮಣ ಸವದಿ ಹೇಳಿದರು.

ಕೃಷಿ ಮಹಾವಿದ್ಯಾಲಯಕ್ಕೆ ಜಾಗ ಮಂಜೂರು

ಅಥಣಿಯಲ್ಲಿ ಕೃಷಿ ಮಹಾವಿದ್ಯಾಲಯ ಸ್ಥಾಪನೆಗೆ ಜಾಗ ಮಂಜೂರಾಗಿದೆ. ಕಂದಾಯ ಇಲಾಖೆಯಿಂದ ಕೃಷಿ ಇಲಾಖೆಗೆ ಜಾಗ ಹಸ್ತಾಂತರವಾಗಬೇಕಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕೃಷಿ ಮಹಾವಿದ್ಯಾಲಯದ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

ಜನಗಣತಿ ಬಳಿಕ ಜಿಲ್ಲೆ ವಿಭಜನೆ

ದೇಶದಲ್ಲಿ ನಡೆಯುತ್ತಿರುವ ಜನಗಣತಿ ಪೂರ್ಣಗೊಳ್ಳುವವರೆಗೆ ಯಾವುದೇ ತಾಲ್ಲೂಕು ಅಥವಾ ಜಿಲ್ಲೆ ವಿಭಜನೆ ಸಾಧ್ಯವಿಲ್ಲ. ಜನಗಣತಿ ಮುಗಿದ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಮಾಡಲಾಗುವುದು. ಈ ವಿಚಾರದಲ್ಲಿ ನಮ್ಮಲ್ಲಿ ಒಮ್ಮತವಿದೆ ಎಂದು ಅವರು ಸ್ಪಷ್ಟಪಡಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಯರಗಟ್ಟಿ ಬಸ್‌ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಸಚಿವ ಸತೀಶ ಜಾರಕಿಹೊಳಿಯವರಿಗೆ ಕರವೇ ಮನವಿ

ಬೆಳಗಾವಿ ಜಿಲ್ಲೆಯ ಯರಗಟ್ಪಿ ಪಟ್ಟಣದ ಬಸ್‌ ನಿಲ್ದಾಣದಲ್ಲಿ ಮೂಲಸೌಕರ್ಯ ಕಲ್ಪಿಸಿ, ಸಾರ್ವಜನಿಕರು...

ಬೆಳಗಾವಿ | ರಾಣಿ ಚೆನ್ನಮ್ಮ ವಿವಿ ಶುಲ್ಕ ಹೆಚ್ಚಳ: ವಿದ್ಯಾರ್ಥಿಗಳ ಮೇಲೆ ಹೆಚ್ಚಿದ ಆರ್ಥಿಕ ಹೊರೆ

ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಕಾಲೇಜು ಪ್ರವೇಶಾತಿ ಹಾಗೂ ಸೆಮಿಸ್ಟರ್...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...