ಬೆಳಗಾವಿ | ಅಂಗಡಿ ಬೀಗ ಒಡೆದು 7 ಲಕ್ಷ ಮೌಲ್ಯದ ವಸ್ತು ಕಳ್ಳತನ

Date:

ಬೆಳಗಾವಿ ನಗರದ ನಿಪ್ಪಾಣಿಯ ಈದ್ದಾ ಮೈದಾನ ಪ್ರದೇಶದ ಪಂತ್‌ ಮಂದಿರದ ಪಕ್ಕದಲ್ಲಿರುವ ‘ಪೂಜಾ ಎಲೆಕ್ಟಿಕಲ್ ಮೋಟಾರ್ ಸೇಲ್ಸ್ ಆ್ಯಂಡ್‌ ಸರ್ವಿಸ್’ ಅಂಗಡಿಯ ಬೀಗ ಒಡೆದು ಕಳ್ಳರು ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ದೋಚಿರುವ ಘಟನೆ ನಡೆದಿದೆ. ಕಳ್ಳತನದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

- Advertisement -

ಯರನಾಳ ಗ್ರಾಮದ ನಿವಾಸಿಯಾದ ಮಹಾವೀರ ಪತ್ರಾವಳೆ ಎಂಬುವರು ಪಂತ್ ಮಂದಿರದ ಬಳಿ ಈ ಅಂಗಡಿಯನ್ನು ಹೊಂದಿದ್ದಾರೆ. ಮಹಾವೀರ ಅವರು ಜನರೇಟ‌ರ್ ರಿಪೇರಿ, ವೈರಿಂಗ್, ಮೋಟಾರ್ ಹಾಗೂ ಪಂಪ್ ರಿಪೇರಿ ಮತ್ತು ಮಾರಾಟದ ಕೆಲಸವನ್ನು ಮಾಡುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ರಾತ್ರಿ ಮಹಾವೀರ ಅವರು ಎಂದಿನಂತೆ ಕೆಲಸ ಮುಗಿಸಿ ಅಂಗಡಿಯನ್ನು ಬಂದ್‌ ಮಾಡಿ ಮನೆಗೆ ಹೋಗಿದ್ದರು.ಮುಂಜಾನೆ ಕಳ್ಳರು ಅಂಗಡಿಯ ಹಿಂಭಾಗದ ಕಿಟಕಿಯ ಗಾಜನ್ನು ಒಡೆದು, ಕಬ್ಬಿಣದ ಸರಳುಗಳನ್ನು ಬಾಗಿಸಿ ಒಳಗೆ ನುಗ್ಗಿದ್ದಾರೆ.

ಅಂಗಡಿಯಲ್ಲಿದ್ದ ಹೊಸ ಮತ್ತು ಹಳೆಯ ತಾಮ್ರದ ವೈರುಗಳು,ರಿಪೇರಿ ಮಾಡಲಾಗಿದ್ದ ಮೋಟಾರ್‌ಗಳು, ಹೊಸ ಮೋಟಾರ್‌ಗಳು ಹಾಗೂ ಇತರ ಪರಿಕರಗಳು ಸೇರಿದಂತೆ ಒಟ್ಟು 7 ಲಕ್ಷ ರೂಪಾಯಿ ಮೌಲ್ಯದ ಸಾಮಗ್ರಿಗಳನ್ನು ಕಳ್ಳರು ದೋಚಿದ್ದಾರೆ. ಬೆಳಗ್ಗೆ ಮಹಾವೀರ ಅವರು ಅಂಗಡಿಗೆ ಬಂದಾಗ ಈ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ನಾಲ್ಕು ಚಕ್ರದ ವಾಹನದಲ್ಲಿ ಬಂದಿದ್ದ ಕಳ್ಳರು ಈ ಕೃತ್ಯ ಎಸಗಿದ್ದು, ಕಳ್ಳತನದ ಸಂಪೂರ್ಣ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಘಟನೆಗೆ ಸಂಬಂಧಿಸಿದಂತೆ ಮಹಾವೀರ ಪತ್ರಾವಳೆ ಅವರು ನಿಪ್ಪಾಣಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಬೆಳಗಾವಿ ನಗರದಲ್ಲಿ ನಾಳೆ ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಬೃಹತ್‌ ಸಮಾವೇಶ

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ಯುನೈಟೆಡ್...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...