ಬೆಳಗಾವಿ | ಟ್ರಕ್‌ಗೆ ಬೈಕ್‌ ಡಿಕ್ಕಿ, ಚಿಕ್ಕೋಡಿಯ ಇಬ್ಬರು ಯುವಕರ ದುರ್ಮರಣ

Date:

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ನಿಪ್ಪಾಣಿ ರಾಜ್ಯ ಹೆದ್ದಾರಿಯ ಚಿಂಚಣಿ ಟೋಲ್ ನಾಕಾ ಬಳಿ ಟ್ರಕ್‌ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಭಾನುವಾರ ನಡೆದಿದೆ.

- Advertisement -

ಅಪಘಾತದಲ್ಲಿ ಮೃತಪಟ್ಟವರನ್ನು ಚಿಕ್ಕೋಡಿ ನಗರದ ಓತಾರ ಗಲ್ಲಿಯ ನಿವಾಸಿಗಳಾದ ಸಿದ್ದು ಕುರಳೆ ಹಾಗೂ ಸ್ವರೂಪ್‌ ಮಾಳವದೆ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಮೃತ ಯುವಕರು ತಮ್ಮ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ, ಚಿಂಚಣಿ ಟೋಲ್ ನಾಕಾ ಬಳಿ ಚಿಕ್ಕೋಡಿ ಕಡೆಗೆ ಸಂಚರಿಸುತ್ತಿದ್ದ ಟ್ರಕ್‌ಗೆ ಹಿಂಬದಿಯಿಂದ ಬೈಕ್‌ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗಳಾಗಿ, ಅತಿಯಾದ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಮೃತರ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ನೇಹಿತರು ಸ್ಥಳಕ್ಕೆ ಧಾವಿಸಿ ದುಃಖದಲ್ಲಿ ಮುಳುಗಿದರು. ಯುವಕರ ಅಕಾಲಿಕ ಸಾವಿನಿಂದ ಚಿಕ್ಕೋಡಿ ನಗರದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ರಸ್ತೆ ಸುರಕ್ಷತೆ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ.

ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...