ಬೆಳಗಾವಿ | ಅಪ್ರಾಪ್ತ ವಯಸ್ಸಿನ ಮಗನಿಗೆ ಬೈಕ್ ನೀಡಿದ ಪೋಷಕರಿಗೆ ₹25,500 ದಂಡ

Date:

ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಪೋಷಕರಿಗೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ JMFC ನ್ಯಾಯಾಲಯವು ₹25,500 ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಈ ತೀರ್ಪು ಮಾದರಿಯಾಗಿದೆ.

- Advertisement -

ಬೆಳಗಾವಿ ಜಿಲ್ಲಾ ಪೊಲೀಸರು ಬಳಸುತ್ತಿರುವ ಆಧುನಿಕ Automatic Number Plate Recognition (ANPR) ತಂತ್ರಜ್ಞಾನದ ಮೂಲಕ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಪತ್ತೆಯಾಗಿದೆ. ವಾಹನದ ನೋಂದಣಿ ಸಂಖ್ಯೆಯನ್ನು ಆಧರಿಸಿ ನಡೆಸಿದ ತನಿಖೆಯಲ್ಲಿ, ನಿಪ್ಪಾಣಿ ನಿವಾಸಿ ಮನಿಷಾ ಗೋಪಾಲ ಲೋಹಾರ್ ಅವರು ತಮ್ಮ ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿರುವುದು ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಪ.ಬಂಗಾಳ- SIR ಮೇಲ್ಮನವಿ | 19 ನ್ಯಾಯಾಧಿಕರಣಗಳ ದುರ್ಗತಿ-...

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ (ಎಸ್‌ಐಆರ್‌) ಮೇಲ್ಮನವಿಗಳ ಇತ್ಯರ್ಥಕ್ಕೆ ಸ್ಥಾಪಿಸಲಾದ 19 ನ್ಯಾಯಾಧಿಕರಣಗಳು ಸಾಲುಸಾಲು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿವೆ. ಕಾರ್ಯಭಾರ, ಕೆಂಪುಪಟ್ಟಿ ಆಡಳಿತದಿಂದ ನಿವೃತ್ತ ನ್ಯಾಯಮೂರ್ತಿಗಳ ರಾಜೀನಾಮೆ, ಸಿಬ್ಬಂದಿಯ ವೇತನ ವಿಳಂಬದ...

ಕೃಷಿಮೇಳ | ‘ಪ್ರಕೃತಿ ಕೊಡಾದೆಲ್ಲ ಒಳ್ಳೀದೆ ಇರ್ತೈತಿ, ಮನ್ಷಾನೇ...

"ಪ್ರಕೃತಿ ಮನುಷ್ಯನಿಗೆ ಕೊಡುವುದೆಲ್ಲವೂ ಒಳ್ಳೆಯದೇ ಇರುತ್ತದೆ, ಆದರೆ ಮನುಷ್ಯ ಪ್ರಕೃತಿಯನ್ನು ಮರೆತು ಏನೇನೋ ಹುಡುಕಿಕೊಂಡು ಹೊರಟಿದ್ದಾನೆ" ಇದು ತಲೆಮಾರುಗಳಿಂದ ಕಂಬಳಿ ನೇಯ್ದು ಬದುಕು ಕಟ್ಟಿಕೊಂಡಿರುವ ಕಂಬಳಿ ನೇಕಾರರ ಮನದಾಳ. ಅಜ್ಜ-ಮುತ್ತಜ್ಜರ ಕಾಲದಿಂದಲೂ ನಡೆದುಕೊಂಡು...

ಮಗನಿಗೆ ಚಾಲನಾ ಪರವಾನಗಿ ಪಡೆಯುವ ಕಾನೂನುಬದ್ಧ ವಯಸ್ಸಾಗಿಲ್ಲ ಎಂಬುದು ತಿಳಿದಿದ್ದರೂ ವಾಹನ ನೀಡಿರುವ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದರು.

ಪ್ರಕರಣದ ವಿಚಾರಣೆ ನಡೆಸಿದ ನಿಪ್ಪಾಣಿ JMFC ನ್ಯಾಯಾಲಯ, ಇದನ್ನು ಸಾಮಾನ್ಯ ಸಂಚಾರ ನಿಯಮ ಉಲ್ಲಂಘನೆ ಎಂದು ಪರಿಗಣಿಸದೆ, ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ಗಂಭೀರ ನಿರ್ಲಕ್ಷ್ಯ ಎಂದು ಅಭಿಪ್ರಾಯಪಟ್ಟಿತು. ಈ ಹಿನ್ನೆಲೆಯಲ್ಲಿ ಪೋಷಕರಿಗೆ ₹25,500 ದಂಡ ವಿಧಿಸಿ, ಅಪ್ರಾಪ್ತರಿಗೆ ವಾಹನ ನೀಡುವವರ ವಿರುದ್ಧ ಕಾನೂನು ಕಟ್ಟುನಿಟ್ಟಾಗಿ ಜಾರಿಯಾಗಲಿದೆ ಎಂಬ ಸ್ಪಷ್ಟ ಉತ್ತರ ನೀಡಿದೆ.

ನ್ಯಾಯಾಲಯದ ಈ ತೀರ್ಪು ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದ್ದು, ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನ ನೀಡುವ ಪೋಷಕರಿಗೆ ಎಚ್ಚರಿಕೆಯ ಗಂಟೆಯಾಗಿದೆ. ಸಂಚಾರ ನಿಯಮಗಳ ಪಾಲನೆ ಮತ್ತು ರಸ್ತೆ ಸುರಕ್ಷತೆ ಕಾಪಾಡುವಲ್ಲಿ ANPR ತಂತ್ರಜ್ಞಾನ ಪರಿಣಾಮಕಾರಿ ಸಾಧನವಾಗಿ ಕಾರ್ಯನಿರ್ವಹಿಸುತ್ತಿದೆ.

IMG 20251111 WA0000
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಇ-ಸ್ವತ್ತು ದಾಖಲೆ ನಿಯಮ ಸರಳೀಕರಣ; ತ್ವರಿತ ಸ್ಪಂದನೆಗೆ ಸೂಚನೆ

ಗ್ರಾಮೀಣ ಪ್ರದೇಶದ ಆಸ್ತಿ ಮಾಲೀಕರು ಇ-ಸ್ವತ್ತು ದಾಖಲೆ ಪಡೆಯಲು ಎದುರಿಸುತ್ತಿರುವ ತೊಡಕುಗಳನ್ನು...

ಬೆಳಗಾವಿ | ದರ್ಗಾ, ಬಹುಪಯೋಗಿ ಭವನಕ್ಕೆ ಶಂಕುಸ್ಥಾಪನೆ

ಬೆಳಗಾವಿ ಜಿಲ್ಲಾ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ದರ್ಗಾ ಎಸ್ಟೇಟ್ ವಕ್ಫ್...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...