ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಬಿಲಕುಂದಿ ಬಳಿ ಗೊಡಚಿನಮಲ್ಕಿ-ಬಾದಾಮಿ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಕಲ್ಲೋಳಿಯ ಶಿವಪ್ಪ ಹುಕ್ಕೇರಿ (40) ಮತ್ತು ನಿಂಗಾಪುರದ ಕೆಂಚಪ್ಪ ಕರಿಗಾರ (35) ಎಂದು ಗುರುತಿಸಲಾಗಿದೆ.
ಗೋಕಾಕದಿಂದ ಕೌಜಲಗಿ ಕಡೆಗೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ಎದುರಿನಿಂದ ಬಂದ ಟಿಪ್ಪರ್ಗೆ ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಮಾಹಿತಿ ಪಡೆದ ಕುಲಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ಕುಲಗೋಡ ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಲಾಗಿದೆ.