ಬೆಳಗಾವಿ | ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ ಅಮಿತ ಕೋರೆ ಆಯ್ಕೆ

Date:

ಬೆಳಗಾವಿಯ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯ(ಕೆಎಲ್‌ಇ) ಸಂಸ್ಥೆಯ ನೂತನ ಕಾರ್ಯಾಧ್ಯಕ್ಷರಾಗಿ ಅಮಿತ ಪ್ರಭಾಕರ ಕೋರೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಜರುಗಿದ ನೂತನ ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

- Advertisement -

ಸುಮಾರು 42 ವರ್ಷಗಳ ಕಾಲ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ Prabhakar Kore ಅವರನ್ನು ಗೌರವಾನ್ವಿತ ಕಾರ್ಯಾಧ್ಯಕ್ಷರಾಗಿ ನೇಮಿಸಲಾಗಿದೆ. ಅವರ ದೀರ್ಘಕಾಲದ ನಾಯಕತ್ವದಲ್ಲಿ ಸಂಸ್ಥೆ ರಾಷ್ಟ್ರೀಯ ಮಟ್ಟದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ವಿಶಿಷ್ಟ ಸ್ಥಾನವನ್ನು ಗಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

46 ವರ್ಷದ ಅಮಿತ ಕೋರೆ ಅವರು 2010ರಿಂದ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದು, ಶಿಕ್ಷಣ, ಸಹಕಾರ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಅನುಭವ ಹೊಂದಿದ್ದಾರೆ. ವಿವಿಧ ಸಹಕಾರಿ ಮತ್ತು ಕೈಗಾರಿಕಾ ಸಂಸ್ಥೆಗಳಲ್ಲಿಯೂ ಅವರು ಪ್ರಮುಖ ಹುದ್ದೆಗಳನ್ನು ವಹಿಸಿಕೊಂಡಿದ್ದಾರೆ.

1916ರಲ್ಲಿ ಸ್ಥಾಪಿತವಾದ ಕೆಎಲ್‌ಇ ಸಂಸ್ಥೆ ದೇಶದ ಪ್ರಮುಖ ಶಿಕ್ಷಣ ಮತ್ತು ಆರೋಗ್ಯ ಸೇವಾ ಸಂಸ್ಥೆಗಳಲ್ಲೊಂದು. ಶಾಲೆಗಳು, ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳು, ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಸಂಸ್ಥೆಗಳು, ಆಸ್ಪತ್ರೆಗಳು ಸೇರಿದಂತೆ 317ಕ್ಕೂ ಹೆಚ್ಚು ಅಂಗಸಂಸ್ಥೆಗಳನ್ನು ಹೊಂದಿದೆ.

ಇತರ ಪದಾಧಿಕಾರಿಗಳು:

ಮಹಾಂತೇಶ ಶಿವಾನಂದ ಕೌಜಲಗಿ (ಅಧ್ಯಕ್ಷ), ಬಸವರಾಜ ಶಿವಲಿಂಗಪ್ಪ ತಟವಟಿ (ಉಪಾಧ್ಯಕ್ಷ) ಸೇರಿದಂತೆ ಹಲವರು ಆಡಳಿತ ಮಂಡಳಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಸಭೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಡಾ. ಬಿ.ಜಿ. ದೇಸಾಯಿ, ಜಂಟಿ ಕಾರ್ಯದರ್ಶಿ ಡಾ. ಎಸ್.ಎಸ್. ಜಲಾಲಪುರೆ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...