ಬೆಳಗಾವಿ : ಗುರ್ಲಾಪೂರ ಕಬ್ಬು ಬೆಳೆಗಾರರ ಹೋರಾಟಕ್ಕೆ ಬಿಜೆಪಿ ಬೆಂಬಲ : ವಿಜಯೇಂದ್ರ ಭೇಟಿ

Date:

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರ ಕ್ರಾಸ್‌ನಲ್ಲಿ ನಡೆಯುತ್ತಿರುವ ಕಬ್ಬು ರೈತರ ಧರಣಿ ಪ್ರತಿಭಟನೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಬುಧವಾರ ಭೇಟಿ ನೀಡಿ ಬೆಂಬಲ ಘೋಷಿಸಿದರು.

- Advertisement -

ರೈತರು ಹಲವು ದಿನಗಳಿಂದ ಪ್ರತಿ ಟನ್‌ ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯೇಂದ್ರ ಮಾತನಾಡಿ, “ಗುರ್ಲಾಪೂರದಲ್ಲಿ ರೈತರು ನ್ಯಾಯಸಮ್ಮತ ಬೇಡಿಕೆಗಳನ್ನು ಮುಂದಿರಿಸಿದ್ದಾರೆ. ಆದರೆ ರಾಜ್ಯ ಸರ್ಕಾರ ಸ್ಪಂದಿಸದಿರುವುದು ವಿಷಾದನೀಯ. ವಿರೋಧ ಪಕ್ಷವಾಗಿ ನಾವು ರೈತರ ಪರ ನಿಲ್ಲುತ್ತೇವೆ. ಪಕ್ಷದ ಎಲ್ಲಾ ಮುಖಂಡರ ಜೊತೆ ಚರ್ಚೆ ಮಾಡಿ ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲು ಬಂದಿದ್ದೇನೆ,” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಅವರು ಮುಂದುವರೆದು, “ಅತಿವೃಷ್ಟಿಯಿಂದ ಕಲ್ಯಾಣ ಕರ್ನಾಟಕ ಭಾಗದ ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ. ಆದರೆ ಉಸ್ತುವಾರಿ ಸಚಿವರಾಗಲಿ, ಕಂದಾಯ ಸಚಿವರಾಗಲಿ, ಕೃಷಿ ಸಚಿವರಾಗಲಿ ಯಾರೂ ಆ ಭಾಗಕ್ಕೆ ಭೇಟಿ ನೀಡಿಲ್ಲ. ರೈತರು ವರ್ಷಕ್ಕೆ ಸುಮಾರು ಆರು ಮಿಲಿಯನ್ ಟನ್‌ ಕಬ್ಬು ಕಾರ್ಖಾನೆಗಳಿಗೆ ಒದಗಿಸುತ್ತಾರೆ. ಅದರಿಂದ ಸರ್ಕಾರಕ್ಕೆ 50ರಿಂದ 60 ಸಾವಿರ ಕೋಟಿ ಆದಾಯ ಬರುತ್ತದೆ. ಆದರೆ ಇದೇ ರೈತರು ಸಂಕಷ್ಟದಲ್ಲಿರುವಾಗ ಅವರ ಪರಿಸ್ಥಿತಿ ಕೇಳಲು ಸರ್ಕಾರ ಮುಂದೆ ಬರದಿರುವುದು ನಾಚಿಕೆಗೆ ಕಾರಣ,” ಎಂದು ಟೀಕಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...