ನಾಡು-ನುಡಿಗೆ ದ್ರೋಹ: ಬೆಳಗಾವಿ ಡಿಸಿಯನ್ನು ಕರ್ನಾಟಕದಿಂದಲೇ ವರ್ಗಾಯಿಸಿ

Date:

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಗಡಿಭಾಗದಲ್ಲಿ ಕನ್ನಡಿಗರ ಹಿತ ಕಾಪಾಡುವ ಬದಲು ಎಂಇಎಸ್ ಪರವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು, ಅವರನ್ನು ಕರ್ನಾಟಕ ರಾಜ್ಯದಿಂದಲೇ ಹೊರಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು.

- Advertisement -

ಸಂಭಾಜಿ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಚನ್ನಮ್ಮ ವೃತ್ತದ ಮೂಲಕ ಪ್ರಾದೇಶಿಕ ಆಯುಕ್ತರ ಕಚೇರಿಗೆ ತಲುಪಿತು. ಬಳಿಕ ಪ್ರಾದೇಶಿಕ ಆಯುಕ್ತ ಜಾನಕಿ ಅವರ ಮೂಲಕ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಕರವೇ ಮುಖಂಡರು ಮಾತನಾಡಿ, ಕಳೆದ ಸೋಮವಾರ ಎಂಇಎಸ್ ಪ್ರತಿಭಟನೆಗೆ ಪೊಲೀಸ್ ಆಯುಕ್ತರು ಅನುಮತಿ ನಿರಾಕರಿಸಿದ್ದರೂ, ಜಿಲ್ಲಾಧಿಕಾರಿಗಳೇ ಮಧ್ಯಪ್ರವೇಶಿಸಿ ನೂರಾರು ಎಂಇಎಸ್ ಕಾರ್ಯಕರ್ತರಿಗೆ ಡಿಸಿ ಕಚೇರಿಗೆ ಪ್ರವೇಶ ಕಲ್ಪಿಸಿದ್ದಾರೆ ಎಂದು ಆರೋಪಿಸಿದರು.

ಮರಾಠಿ ಭಾಷಿಕರ ಸಮಸ್ಯೆ ಪರಿಹಾರಕ್ಕೆ ಜಿಲ್ಲಾ
ಮಟ್ಟದ ಸಮಿತಿ ರಚಿಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿರುವುದು ಕನ್ನಡ ನಾಡು, ನುಡಿ ಹಾಗೂ ಗಡಿ ಹಿತಾಸಕ್ತಿಗೆ ವಿರುದ್ಧವಾದ ಕ್ರಮವಾಗಿದೆ. ಭಾಷೆ ಮತ್ತು ಗಡಿ ವಿಚಾರದಲ್ಲಿ ಯಾವುದೇ ನೀತಿ ನಿರ್ಧಾರ ಕೈಗೊಳ್ಳುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ಇಲ್ಲ. ಆದರೂ ಅಂತಹ ಭರವಸೆ ನೀಡಿರುವುದು ಅಧಿಕಾರ ದುರುಪಯೋಗದ ಪರಮಾವಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಸಂಘಟನೆಗಳೊಂದಿಗೆ ಎಂಇಎಸ್ ನಾಯಕರ ಜಂಟಿ ಸಭೆ ನಡೆಸುವುದಾಗಿ ಜಿಲ್ಲಾಧಿಕಾರಿಗಳು ಹೇಳಿರುವುದು ನಾಡದ್ರೋಹಿ ಶಕ್ತಿಗಳಿಗೆ ಪರೋಕ್ಷ ಬೆಂಬಲ ನೀಡಿದಂತಾಗಿದೆ ಎಂದು ಕರವೇ ಆರೋಪಿಸಿತು.

ಕರ್ನಾಟಕ ರಾಜ್ಯೋತ್ಸವ ಅನುದಾನದ ದುರುಪಯೋಗ ಪ್ರಕರಣದ ವಿಚಾರಣೆಗೆ ಜಿಲ್ಲಾಧಿಕಾರಿಗಳು ಹಾಜರಾಗದೇ, ಅಗತ್ಯ ದಾಖಲೆಗಳನ್ನು ಸಲ್ಲಿಸಿಲ್ಲ ಎಂಬುದನ್ನು ಪ್ರಾದೇಶಿಕ ಆಯುಕ್ತರ ವರದಿಯೇ ಬಹಿರಂಗಪಡಿಸಿದೆ ಎಂದು ಪ್ರತಿಭಟನಾಕಾರರು ಹೇಳಿದರು.

“ಇಂತಹ ಅಧಿಕಾರಿಯನ್ನು ಬೆಳಗಾವಿಯಲ್ಲಿ ಮುಂದುವರಿಸುವುದು ಗಡಿ ಜಿಲ್ಲೆಯ ಹಿತಾಸಕ್ತಿಗೆ ಅಪಾಯ. ಅವರನ್ನು ತಕ್ಷಣವೇ ಕರ್ನಾಟಕದಿಂದ ಹೊರರಾಜ್ಯಕ್ಕೆ ವರ್ಗಾಯಿಸಿ” ಎಂದು ಕರವೇ ಸರ್ಕಾರವನ್ನು ಒತ್ತಾಯಿಸಿತು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಬೆಳಗಾವಿ ನಗರದಲ್ಲಿ ನಾಳೆ ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಬೃಹತ್‌ ಸಮಾವೇಶ

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ಯುನೈಟೆಡ್...