ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ: ರೈತಪರ ನಿರ್ಣಯಕ್ಕೆ ನಾಯಕರೊಂದಿಗೆ ಚರ್ಚೆ – ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸ್ಪಷ್ಟನೆ

Date:

ಡಿಸಿಸಿ (ಜಿಲ್ಲಾ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ) ಬ್ಯಾಂಕ್‌ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಗಂಭೀರ ಚರ್ಚೆ ನಡೆಸುತ್ತಿದ್ದು, ರೈತಪರವಾಗಿ ನಿರ್ಣಯ ಕೈಗೊಳ್ಳಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

- Advertisement -

ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಎಂಬ ಸುದ್ದಿಗಾರರ ಪ್ರಶ್ನೆಗೆ ಅವರು ನೇರ ಉತ್ತರ ನೀಡದೇ, “ರಾಜ್ಯದಲ್ಲಿ ಅಪೆಕ್ಸ್‌ ಬ್ಯಾಂಕ್ ಬಿಟ್ಟರೆ, ಡಿಸಿಸಿ ಬ್ಯಾಂಕ್ ದೊಡ್ಡದು. ಈ ಕುರಿತು ಸಚಿವ ಸತೀಶ ಜಾರಕಿಹೊಳಿ, ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಮತ್ತಿತರ ನಾಯಕರೊಂದಿಗೆ ಚರ್ಚಿಸಿ, ಮುಂದಿನ ಹೆಜ್ಜೆ ಇಡಲಾಗುವುದು. ನಮ್ಮ ನಿಲುವು ಸಂಪೂರ್ಣವಾಗಿ ರೈತಪರವಾಗಿರಲಿದೆ,” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಸುರ್ಜೇವಾಲಾ ಸಭೆ ಕುರಿತು ಸ್ಪಷ್ಟನೆ

ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅಧಿಕಾರಿಗಳ ಸಭೆ ನಡೆಸಿದ್ದಾರೆ ಎಂಬ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಅವರು ಯಾವುದೇ ಇಲಾಖೆ ಅಧಿಕಾರಿಗಳ ಸಭೆ ನಡೆಸಿಲ್ಲ. ಎಲ್ಲ ಶಾಸಕ ಮತ್ತು ಮಂತ್ರಿಗಳನ್ನು ಕರೆದು ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಚರ್ಚಿಸಿದರು. ಅನುದಾನದ ಬಳಕೆ, ಕಾಮಗಾರಿಗಳ ಉಸ್ತುವಾರಿ ಕುರಿತು ಪ್ರಶ್ನಿಸಿದರು. ಇದು ಮೂರು ತಿಂಗಳಿಗೆ ಒಂದು ಬಾರಿ ನಡೆಯುವ ರೂಟೀನ್ ಕಾರ್ಯವಷ್ಟೇ,” ಎಂದರು.

‘ಕ್ರಾಂತಿ’ ಹೇಳಿಕೆಗೆ ಪ್ರತಿಕ್ರಿಯೆ

ಸಚಿವ ರಾಜಣ್ಣ ನೀಡಿದ್ದ “ಸೆಪ್ಟೆಂಬರ್‌ನಲ್ಲಿ ರಾಜಕೀಯ ಕ್ರಾಂತಿ” ಸಂಭವಿಸುತ್ತದೆ ಎಂಬ ಹೇಳಿಕೆಯನ್ನು ಪ್ರಸ್ತಾಪಿಸಿದಾಗ, ಸಚಿವೆ ಹೇಳಿದರು, “ನಮ್ಮ ಪಕ್ಷವು ಹೈಕಮಾಂಡ್ ಹೇಳಿದಂತೆ ನಡೆಯುತ್ತದೆ. ಈ ಕುರಿತು ಮುಖ್ಯಮಂತ್ರಿ ಸಿಧ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ.”

ಮಹದಾಯಿ ಕುರಿತು ಬಿಜೆಪಿ ಮೇಲೆ ವಾಗ್ದಾಳಿ

ಮಹದಾಯಿ ನದೀ ಜಲ ಯೋಜನೆ ಕುರಿತು ಮಾತನಾಡಿದ ಅವರು, “ಈ ಯೋಜನೆಗಾಗಿ ಹಲವು ವರ್ಷಗಳಿಂದ ಹೋರಾಟ ನಡೆದಿದೆ. ನಾವು ಕುಡಿಯುವ ನೀರಿಗಾಗಿ ಕೇಳುತ್ತಿದ್ದೇವೆ, ನೀರಾವರಿಗಾಗಿ ಅಲ್ಲ. ಈ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಬಿಜೆಪಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಸಿಹಿ ಹಂಚಿತು. ಈಗ ಈ ಬಗ್ಗೆ ಮಾತನಾಡುತ್ತಿಲ್ಲ,” ಎಂದು ಬಿಜೆಪಿಯ ಆಚರಣೆ ಮೇಲೆ ಟೀಕೆ ಮಾಡಿದ ಸಚಿವೆ, “ಈ ಯೋಜನೆಯನ್ನು ಚುನಾವಣೆ ಅಸ್ತ್ರವಾಗಿ ಉಪಯೋಗಿಸಿದರು, ಆದರೆ ಅನುಷ್ಠಾನ ಬಗೆಗೆ ಕತ್ತಲೆಯೇ ಇದೆ” ಎಂದರು.

ಉತ್ತರ ಕರ್ನಾಟಕದ ಚಿತ್ರರಂಗಕ್ಕೆ ಹೊಸ ಆಶಾಕಿರಣ

ಸಿನಿಮಾ ಕ್ಷೇತ್ರದಲ್ಲಿ ಹೊಸ ಪ್ರಯತ್ನವನ್ನೂ ಪ್ರಸ್ತಾಪಿಸಿದ ಅವರು, “ಐರಾ ಪ್ರೊಡಕ್ಷನ್ ವರ್ಕ್ಸ್ ಅಡಿಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಡಾಲಿ ಧನಂಜಯ್ ನಾಯಕತ್ವದಲ್ಲಿ ಎರಡು ಚಿತ್ರಗಳನ್ನು ನಿರ್ಮಿಸುತ್ತಿದ್ದೇವೆ. ಈ ಸಿನಿಮಾಗಳಿಂದ ಉತ್ತರ ಕರ್ನಾಟಕವಷ್ಟೇ ಅಲ್ಲದೆ, ಇಡೀ ರಾಜ್ಯದ ಕಲಾವಿದರಿಗೆ ಅವಕಾಶ ಲಭ್ಯವಾಗಲಿದೆ,” ಎಂದು ಹೇಳಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...