ಬೆಳಗಾವಿ | ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಶಾಸಕರ ವಿರುದ್ಧ ಸುಪ್ರಿಂ ಕೋರ್ಟ್‌ ಮೆಟ್ಟಿಲೇರಿದ ಸಾಮಾಜಿಕ ಕಾರ್ಯಕರ್ತ

Date:

Advertisements

ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸುಜಿತ್ ಮುಳಗುಂದ ಅವರು ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಸುಪ್ರಿಂ ಕೋರ್ಟ್ ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ್ದು, ಮುಂದಿನ ವಿಚಾರಣೆಯನ್ನು ಫೆಬ್ರವರಿ 19ಕ್ಕೆ ಮುಂದೂಡಿದೆ.

ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಶಾಸಕ ಅಭಯ್ ಪಾಟೀಲ್ ವಿರುದ್ಧ 2012ರಲ್ಲಿ ಬೆಳಗಾವಿ ಲೋಕಾಯುಕ್ತಕ್ಕೆ ದೂರು ನೀಡಿದ್ದೆ. ತನಿಖೆ ನಿಧಾನಗತಿಯಲ್ಲಿದ್ದು, ಈ ಬಗ್ಗೆ ಕರ್ನಾಟಕ ಲೋಕಾಯುಕ್ತರ ಗಮನ ಸೆಳೆಯಬೇಕಾಗಿತ್ತು. ತನಿಖೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಕರ್ನಾಟಕ ಲೋಕಾಯುಕ್ತರು ಆದೇಶಿಸಿದ್ದರು. ಆದರೆ ಇದು ಯಾವುದೇ ಫಲಿತಾಂಶವನ್ನು ನೀಡಲಿಲ್ಲ” ಎಂದು ಹೇಳಿದ್ದಾರೆ.

Advertisements

“ಕರ್ನಾಟಕ ಹೈಕೋಟ್‌ನಲ್ಲಿ ಪ್ರಕರಣ ದಾಖಲಿಸಬೇಕಾಯಿತು. ಆದರೆ ಪ್ರಕರಣ ದಾಖಲಾದ ವ್ಯವಸ್ಥೆ ಸೂಕ್ತವಲ್ಲ ಎಂಬ ಕಾರಣ ನೀಡಿ ನ್ಯಾಯಾಲಯ ಪ್ರಕರಣವನ್ನು ರದ್ದುಗೊಳಿಸಿದೆ. ಆದ್ದರಿಂದ ನಾನು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದೇನೆ” ಎಂದು ಸುಜಿತ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಗೋಮಾಳ ಜಮೀನು ವಿವಾದ; ಚುನಾವಣೆ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ

“ನನ್ನ ಹೋರಾಟ ಭ್ರಷ್ಟಾಚಾರದ ವಿರುದ್ಧವೇ ಹೊರತು ಯಾವುದೇ ವ್ಯಕ್ತಿಯ ವಿರುದ್ಧವಲ್ಲ” ಎಂದು ಸುಜಿತ್ ಸ್ಪಷ್ಟಪಡಿಸಿದ್ದು, ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ವಿಭಾಗೀಯ ಪೀಠವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಸುತ್ತಿದೆ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಬೆಳಗಾವಿ : ಬಸ್ ಲಾರಿ ಡಿಕ್ಕಿ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಹತ್ತಿರ ಭಾನುವಾರ ಬೆಳಿಗ್ಗೆ...

Download Eedina App Android / iOS

X