ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಹಲವು ಗ್ರಾಮಗಳಲ್ಲಿ ಪರಿಶಿಷ್ಟ ಪಂಗಡ (ಎಸ್ಟಿ) ಸಮುದಾಯಕ್ಕೆ ಸೇರದವರಿಗೆ ಜಾತಿ ಪ್ರಮಾಣಪತ್ರ ನೀಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ವಾಲ್ಮೀಕಿ ಸಮಾಜದವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಕಾಗವಾಡ ಪಟ್ಟಣದ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಈ ವಿಚಾರ ಗಂಭೀರವಾಗಿ ಪ್ರತಿಧ್ವನಿಸಿತು.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಕಾಗವಾಡದಲ್ಲಿ ನಕಲಿ ಎಸ್ಟಿ ಜಾತಿ ಪ್ರಮಾಣಪತ್ರ ಪ್ರಕರಣ: ವಾಲ್ಮೀಕಿ ಸಮಾಜದ ಆಕ್ರೋಶ
ವಾಲ್ಮೀಕಿ ಸಮಾಜದ ತಾಲೂಕು ಅಧ್ಯಕ್ಷ ರಮೇಶ್ ನಾಯಿಕ ಮಾತನಾಡಿ, “ತಹಶೀಲ್ದಾರ್ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಿ ಧರಣಿ ನಡೆಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ನಮ್ಮ ಸಮುದಾಯಕ್ಕೆ ಸಿಗಬೇಕಾದ ಮೀಸಲಾತಿ ಸೌಲಭ್ಯಗಳು ಅನ್ಯರ ಪಾಲಾಗುತ್ತಿವೆ” ಎಂದು ಆರೋಪಿಸಿದರು.



