ಬೆಳಗಾವಿ |ಹೋರಾಟಕ್ಕೆ ಮೊದಲ ಹಂತದ ಜಯ: ತಾತ್ಕಾಲಿಕವಾಗಿ ಚಳವಳಿ ಹಿಂಪಡೆದ ರೈತರು

Date:

ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ಮೊದಲ ಹಂತದ ಜಯ ದೊರೆತಿದೆ. ಪ್ರತಿ ಟನ್ ಕಬ್ಬಿಗೆ ₹3,600 ದರ ನೀಡಲು ಹಾಗೂ ಸಕ್ಕರೆಯ ಸಗಟು ಮಾರಾಟದಿಂದ ದೊರೆಯುವ ಹೆಚ್ಚುವರಿ ಲಾಭದಲ್ಲಿ ಶೇ.75ರಷ್ಟು ಪಾಲನ್ನು ರೈತರಿಗೆ ನೀಡುವ ಪ್ರಸ್ತಾಪಕ್ಕೆ ಸಕ್ಕರೆ ಕಾರ್ಖಾನೆಗಳ ಮಾಲೀಕರು ಒಪ್ಪಿಗೆ ಸೂಚಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ರೈತ ಮುಖಂಡ ಚೂನಪ್ಪ ಪೂಜಾರಿ ಘೋಷಿಸಿದರು.

- Advertisement -

ರೈತರ ಬೇಡಿಕೆಗಳಿಗೆ ಕಾರ್ಖಾನೆ ಮಾಲೀಕರು ಸ್ಪಂದಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ, ‘ಜೈ ಬರೋ ಚಳವಳಿ’ಯ ಭಾಗವಾಗಿ ಗುರುವಾರ ಜಿಲ್ಲೆಯಾದ್ಯಂತ ದಿನವಿಡೀ ನಡೆದ ಪ್ರತಿಭಟನೆಗೆ ತಾತ್ಕಾಲಿಕ ವಿರಾಮ ನೀಡಲಾಗಿದೆ.ಪೊಲೀಸರ ವಶದಿಂದ ಬಿಡುಗಡೆಯಾದ ಬಳಿಕ ನಗರದ ವೀರಭದ್ರ ನಗರದ ದೇವಸ್ಥಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚೂನಪ್ಪ ಪೂಜಾರಿ, “ಸದ್ಯಕ್ಕೆ ಹೋರಾಟವನ್ನು ನಿಲ್ಲಿಸೋಣ. ಕಬ್ಬು ಒಣಗುತ್ತಿದೆ. ರೈತರ ಹಿತದೃಷ್ಟಿಯಿಂದ ಇಂದಿನಿಂದ ಸಕ್ಕರೆ ಕಾರ್ಖಾನೆಗಳು ಆರಂಭವಾಗಲಿ. ಆದರೆ ನಮ್ಮ ಹೋರಾಟ ಇಲ್ಲಿಗೆ ಮುಗಿದಿಲ್ಲ. ಸಕ್ಕರೆಯ ಕನಿಷ್ಠ ಮಾರಾಟ ದರ ಹೆಚ್ಚಳ ಮತ್ತು ರಾಜ್ಯ ಸರ್ಕಾರದ ಪ್ರೋತ್ಸಾಹಧನ ದೊರೆಯುವವರೆಗೂ ಚಳವಳಿ ಮುಂದುವರಿಯಲಿದೆ” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಕೇಂದ್ರ ಸರ್ಕಾರ ಸಕ್ಕರೆಯ ಕನಿಷ್ಠ ಮಾರಾಟ ದರವನ್ನು ಪ್ರತಿ ಕೆ.ಜಿ.ಗೆ ₹31ರಿಂದ ₹60ಕ್ಕೆ ಹೆಚ್ಚಿಸಬೇಕು. ಎಥನಾಲ್ ಖರೀದಿ ಪ್ರಮಾಣವನ್ನು ಹೆಚ್ಚಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಗೆ ಆಗಮಿಸುವ ಸಂದರ್ಭದಲ್ಲಿ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹1,000 ಪ್ರೋತ್ಸಾಹಧನ ಘೋಷಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟಿದ್ದೇವೆ. ಈ ಬೇಡಿಕೆಗಳನ್ನು ಈಡೇರಿಸಲು ನವೆಂಬರ್ 20ರವರೆಗೆ ಸರ್ಕಾರಕ್ಕೆ ಗಡುವು ನೀಡಲಾಗಿದೆ ಎಂದು ತಿಳಿಸಿದರು.

ಕಳೆದ ವರ್ಷ ಗುರ್ಲಾಪುರ ಹೋರಾಟದ ಮೂಲಕ ಪ್ರತಿ ಟನ್ ಕಬ್ಬಿಗೆ ₹3,350 ದರ ಪಡೆಯಲಾಗಿತ್ತು. ಈ ಬಾರಿ ₹4,500 ದರದ ಬೇಡಿಕೆಯೊಂದಿಗೆ ನಿರಂತರ ಹೋರಾಟ ನಡೆಸಲಾಗಿದೆ. ಸಚಿವ ಸತೀಶ ಜಾರಕಿಹೊಳಿ ಅವರ ಮಧ್ಯಸ್ಥಿಕೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ನಡೆದ ಮಾತುಕತೆ ಫಲಪ್ರದವಾಗಿದೆ. ಈಗ ಒಪ್ಪಿಗೆಯಾಗಿರುವ ₹3,600 ದರ ಕೇವಲ ಬೆಳಗಾವಿ ಜಿಲ್ಲೆಗೆ ಸೀಮಿತವಾಗದೆ ರಾಜ್ಯದ ಎಲ್ಲ ಜಿಲ್ಲೆಗಳ ಕಬ್ಬು ಬೆಳೆಗಾರರಿಗೂ ಅನ್ವಯವಾಗಬೇಕು ಎಂದು ಒತ್ತಾಯಿಸಿದರು.

ರೈತ ನಾಯಕಿ ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ, “ಇದು ಕೇವಲ ಬೆಳಗಾವಿ ಜಿಲ್ಲೆಯ ರೈತರ ಹೋರಾಟವಲ್ಲ. ದೇಶದ ರೈತರಿಗೆ ನ್ಯಾಯ ದೊರಕಿಸಿಕೊಡುವ ಹೋರಾಟವಾಗಿದೆ. ಕರ್ನಾಟಕದ ರೈತ ಚಳವಳಿಗೆ ಹೊಸ ಚೈತನ್ಯ ತುಂಬುವುದರ ಜೊತೆಗೆ, ಬೇರೆ ಜಿಲ್ಲೆಗಳ ರೈತ ಹೋರಾಟಗಾರರಿಗೂ ಈ ಹೋರಾಟ ಪ್ರೇರಣೆಯಾಗಿದೆ. ಈಗ ದೊರೆತಿರುವುದು ಮೊದಲ ಹಂತದ ಜಯವಷ್ಟೇ.

ಸಕ್ಕರೆ ಮಾರಾಟದ ಲಾಭದಲ್ಲಿ ರೈತರಿಗೆ ಪಾಲು ನೀಡುವ ಪ್ರಸ್ತಾಪ ಅತ್ಯಂತ ಮಹತ್ವದ್ದಾಗಿದೆ. ಆ ಪಾಲು ರೈತರಿಗೆ ಸಿಗುವವರೆಗೂ ಹೋರಾಟದ ಕಿಚ್ಚು ಆರಬಾರದು” ಎಂದು ಹೇಳಿದರು.

ಒಟ್ಟಿನಲ್ಲಿ, ಕಬ್ಬಿಗೆ ₹3,600 ದರ ನೀಡುವ ಒಪ್ಪಂದದ ಹಿನ್ನೆಲೆಯಲ್ಲಿ ರೈತರು ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆದಿದ್ದರೂ, ಕನಿಷ್ಠ ಮಾರಾಟ ದರ ಹೆಚ್ಚಳ, ಎಥನಾಲ್ ಖರೀದಿ ಮತ್ತು ರಾಜ್ಯ ಸರ್ಕಾರದ ಪ್ರೋತ್ಸಾಹಧನದ ಬೇಡಿಕೆಗಳು ಇನ್ನೂ ಬಾಕಿ ಉಳಿದಿವೆ. ನವೆಂಬರ್ 20ರ ಗಡುವಿನೊಳಗೆ ಸರ್ಕಾರ ಈ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮತ್ತೆ ಹೋರಾಟ ತೀವ್ರಗೊಳ್ಳುವ ಸಾಧ್ಯತೆ ಇದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಾಲಿನ ಬೆಲೆ ಏರಿಕೆ: ಮಹಿಳೆಯರ ಅಡುಗೆ ಮನೆಯ ಲೆಕ್ಕಾಚಾರಕ್ಕೆ ಸರ್ಕಾರದ ಹೊಡೆತ !

ಬೆಲೆ ಏರಿಕೆಯ ಬಿಸಿ ಈಗ ಜನಸಾಮಾನ್ಯರ ಅಡುಗೆ ಮನೆಯನ್ನೂ ತಟ್ಟಿದೆ. ಅಡುಗೆ...

ಯಾದಗಿರಿ | ನ.30ರವರೆಗೆ ಕಾಲುವೆಗೆ ನಿರಂತರ ನೀರು ಹರಿಸಿ, ಎಕರೆಗೆ ₹50 ಸಾವಿರ ಪರಿಹಾರ ನೀಡಿ: ರೈತರ ಆಗ್ರಹ

ತೀವ್ರ ಬರ ಪರಿಸ್ಥಿತಿಯಿಂದ ಕಂಗೆಟ್ಟಿರುವ ರೈತರ ನೆರವಿಗೆ ಧಾವಿಸುವಂತೆ ಆಗ್ರಹಿಸಿ, ಎಕರೆಗೆ...

ಉಡುಪಿ | ಕಾಂಗ್ರೆಸ್ ಕಾರ್ಯಕರ್ತರಿಗೆ ಬೆದರಿಕೆ ಹಾಕಿದರೆ ಹೆದರುವುದಿಲ್ಲ, ಬಿಜೆಪಿಗೆ ತಾಕತ್ತಿದ್ದರೆ ಎದುರಿಸಿ: ಸುರೇಶ್ ಶೆಟ್ಟಿ ಬನ್ನಂಜೆ

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಅರಬ್ಬಿ ಸಮುದ್ರಕ್ಕೆ ಎಸೆಯುವ ಬೆದರಿಕೆಗಳಿಗೆ ಕಾಂಗ್ರೆಸ್ಸಿಗರು ಹೆದರುವುದಿಲ್ಲ....

ಧಾರವಾಡ | ಮುಖ್ಯ ಆಯುಕ್ತ ಜ್ಞಾನೇಶ ಕುಮಾರ್ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ ಕುಮಾರ್ ಅವರನ್ನು ಹುದ್ದೆಯಿಂದ...