ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

Date:

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ ಸರ್ಕಾರ ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ನವೆಂಬರ್ 16ರಂದು ಬೆಳಗಾವಿಗೆ ತೆರಳಿ ಬೃಹತ್ ಹೋರಾಟ ನಡೆಸಲಾಗುವುದು ಎಂದು ಅಕ್ಷರ ದಾಸೋಹ ನೌಕರ ಸಂಘದ ಕಾರ್ಯದರ್ಶಿ ಗೈಬು ಜೈನೆಖಾನ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

- Advertisement -

ಬೆಳಾಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದ ಅತ್ಯಂತ ಕಡಿಮೆ ವೇತನದಲ್ಲಿ ದುಡಿಯುತ್ತಿರುವ ಅಕ್ಷರ ದಾಸೋಹ ಕಾರ್ಯಕರ್ತರ ಉದ್ಯೋಗ ಮತ್ತು ಬದುಕಿಗೆ ಕ್ಲಸ್ಟರ್ ಕಿಚನ್ ಯೋಜನೆ ಗಂಭೀರ ಹೊಡೆತ ನೀಡಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ರಾಜ್ಯದಲ್ಲಿ ಸುಮಾರು 1.30 ಲಕ್ಷ ಮಹಿಳೆಯರು ಬಿಸಿಯೂಟ ತಯಾರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸರ್ಕಾರ ಕ್ಲಸ್ಟರ್ ಮಟ್ಟದಲ್ಲಿ ಆಹಾರ ತಯಾರಿಸಿ ಶಾಲೆಗಳಿಗೆ ವಿತರಿಸುವ ಯೋಜನೆ ಜಾರಿಗೆ ತಂದರೆ, ಇಷ್ಟು ದೊಡ್ಡ ಸಂಖ್ಯೆಯ ಬಡ ಮಹಿಳಾ ಕಾರ್ಮಿಕರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಮಕ್ಕಳಿಗೆ ಪ್ರೀತಿಯಿಂದ ಅಡುಗೆ ಮಾಡಿ ಉಣಬಡಿಸುತ್ತಿರುವ ಕಾರ್ಯಕರ್ತರ ದುಡಿಮೆಯನ್ನು ಕಡೆಗಣಿಸುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಲವು ವರ್ಷಗಳ ಕಾಲ ಕೇವಲ ₹300 ಗೌರವಧನಕ್ಕೆ ಕೆಲಸ ಮಾಡಿರುವ ಅಕ್ಷರ ದಾಸೋಹ ಕಾರ್ಯಕರ್ತರು, ನಿರಂತರ ಹೋರಾಟದ ಮೂಲಕ ಈಗ ₹4,600 ವೇತನ ಪಡೆಯುವಂತಾಗಿದೆ. ಇಷ್ಟೊಂದು ಕಡಿಮೆ ವೇತನದಲ್ಲಿಯೇ ಕುಟುಂಬ ನಿರ್ವಹಣೆ ಮಾಡುತ್ತಿರುವ ಮಹಿಳೆಯರ ಉದ್ಯೋಗ ಕಸಿದುಕೊಳ್ಳುವ ಯೋಜನೆಯನ್ನು ಸರ್ಕಾರ ಜಾರಿಗೆ ತರಲು ಮುಂದಾಗಿರುವುದು ಖಂಡನೀಯ ಎಂದರು.

ಸರ್ಕಾರ ಕೂಡಲೇ ಕ್ಲಸ್ಟರ್ ಕಿಚನ್ ಯೋಜನೆಯನ್ನು ಕೈಬಿಟ್ಟು, ಈಗಿರುವ ಅಕ್ಷರ ದಾಸೋಹ ಕಾರ್ಯಕರ್ತರ ಉದ್ಯೋಗ ಭದ್ರತೆ ಕಾಪಾಡಬೇಕು. ಇಲ್ಲದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು. ಮುಂದಿನ ದಿನಗಳಲ್ಲಿ ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿಯೂ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಗೈಬು ಜೈನೆಖಾನ್ ಎಚ್ಚರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ದ್ವೇಷ ಭಾಷಣ, ಕೋಮುವಾದಿ ಪ್ರಚೋದನೆ ತಡೆಗೆ ಸಮಗ್ರ ನೀತಿ ರೂಪಿಸಿ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ)...

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...