ಬೆಳಗಾವಿ | ಕೃಷ್ಣಾ ಕಣಿವೆ ಜಲಾಶಯಗಳಿಗೆ ಭರ್ಜರಿ ಒಳಹರಿವು; ಘಟಪ್ರಭಾ, ಮಲಪ್ರಭಾದಲ್ಲಿ ನೀರಿನ ಮಟ್ಟ ಏರಿಕೆ

Date:

ಮಲೆನಾಡು ಹಾಗೂ ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ಕೃಷ್ಣಾ ಕಣಿವೆಯ ಪ್ರಮುಖ ಜಲಾಶಯಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಒಟ್ಟು ನೀರಿನ ಸಂಗ್ರಹ ಕಡಿಮೆಯಿದ್ದರೂ, ಕಳೆದ ಒಂದು ತಿಂಗಳಿನಲ್ಲಿ ಒಳಹರಿವು ಹೆಚ್ಚಾಗಿರುವುದು ರೈತರಲ್ಲಿ ಆಶಾಭಾವನೆ ಮೂಡಿಸಿದೆ.

- Advertisement -

ಕೃಷ್ಣಾ ಕಣಿವೆಯ ಪ್ರಮುಖ ಆರು ಜಲಾಶಯಗಳಲ್ಲಿ ಸದ್ಯ 287.40 ಟಿಎಂಸಿ ನೀರು ಸಂಗ್ರಹವಾಗಿದ್ದು, ಇದು ಒಟ್ಟು ಸಾಮರ್ಥ್ಯದ ಶೇ.68ರಷ್ಟು ಆಗಿದೆ. ಈ ಜಲಾಶಯಗಳ ಒಟ್ಟು ಸಂಗ್ರಹ ಸಾಮರ್ಥ್ಯ 422.45 ಟಿಎಂಸಿ. ಕಳೆದ ವರ್ಷ ಇದೇ ದಿನ 363.45 ಟಿಎಂಸಿ ನೀರು ಸಂಗ್ರಹವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬೆಳಗಾವಿ ಜಿಲ್ಲೆಯ ಘಟಪ್ರಭಾ ಜಲಾಶಯದಲ್ಲಿ ಪ್ರಸ್ತುತ 38.42 ಟಿಎಂಸಿ ನೀರು ಸಂಗ್ರಹವಾಗಿದ್ದು, ಇದು ಶೇ.75ರಷ್ಟು ಭರ್ತಿಯಾಗಿದೆ. ಜಲಾಶಯದ ಗರಿಷ್ಠ ಸಾಮರ್ಥ್ಯ 51 ಟಿಎಂಸಿ. ಕಳೆದ ವರ್ಷ ಇದೇ ದಿನ 47.96 ಟಿಎಂಸಿ ನೀರಿತ್ತು. ಸದ್ಯ ಜಲಾಶಯಕ್ಕೆ 20,782 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 1,765 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ.

ಮಲಪ್ರಭಾ ಜಲಾಶಯದಲ್ಲಿ 17.08 ಟಿಎಂಸಿ ನೀರು ಸಂಗ್ರಹವಾಗಿದ್ದು, ಶೇ.45ರಷ್ಟು ಭರ್ತಿಯಾಗಿದೆ. ಜಲಾಶಯದ ಗರಿಷ್ಠ ಸಾಮರ್ಥ್ಯ 37.73 ಟಿಎಂಸಿ. ಕಳೆದ ವರ್ಷ ಇದೇ ದಿನ 21.89 ಟಿಎಂಸಿ ನೀರಿತ್ತು. ಪ್ರಸ್ತುತ 11,703 ಕ್ಯೂಸೆಕ್ ನೀರು ಒಳಹರಿವಿದ್ದು, 1,194 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ.

ಇನ್ನೊಂದೆಡೆ, ಈಗಾಗಲೇ ಭರ್ತಿಯ ಹಂತ ತಲುಪಿರುವ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಗೆ ಒಂದು ಲಕ್ಷ ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಆಲಮಟ್ಟಿ ಜಲಾಶಯಕ್ಕೆ 1,25,855 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 1,28,783 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದಲ್ಲಿ 111.97 ಟಿಎಂಸಿ ನೀರು ಸಂಗ್ರಹವಾಗಿದ್ದು, ಇದು ಶೇ.91ರಷ್ಟು ಭರ್ತಿಯಾಗಿದೆ.

ಮಲೆನಾಡಿನಲ್ಲಿ ಮಳೆ ಮುಂದುವರಿದಿರುವುದರಿಂದ ತುಂಗಭದ್ರಾ ಜಲಾಶಯಕ್ಕೂ ಉತ್ತಮ ಒಳಹರಿವು ದಾಖಲಾಗಿದೆ. ಜಲಾಶಯಕ್ಕೆ 40,705 ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, 1,390 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಪ್ರಸ್ತುತ ಜಲಾಶಯದಲ್ಲಿ 44.81 ಟಿಎಂಸಿ ನೀರು ಸಂಗ್ರಹವಾಗಿದ್ದು, ಇದು ಶೇ.42ರಷ್ಟು ಭರ್ತಿಯಾಗಿದೆ. ಕಳೆದ ವರ್ಷ ಇದೇ ದಿನ 80 ಟಿಎಂಸಿ ನೀರು ಸಂಗ್ರಹವಾಗಿತ್ತು.

ಮಳೆ ಇದೇ ರೀತಿ ಮುಂದುವರಿದರೆ ಕೃಷ್ಣಾ ಕಣಿವೆಯ ಎಲ್ಲ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದ್ದು, ರೈತರಲ್ಲಿ ನೀರಾವರಿ ಹಾಗೂ ಕುಡಿಯುವ ನೀರಿನ ಲಭ್ಯತೆ ಕುರಿತು ವಿಶ್ವಾಸ ಹೆಚ್ಚಿಸಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮಲಪ್ರಭಾ ಜಲಾಶಯದಿಂದ ಸವದತ್ತಿ ಕೆರೆಗಳಿಗೆ ನೀರು ಬಿಡಿ: ಶಾಸಕ ವಿಶ್ವಾಸ ವೈದ್ಯ

ಮಲಪ್ರಭಾ ಅಣೆಕಟ್ಟಿನಿಂದ ಬೆಳಗಾವಿ ಜಿಲ್ಲೆಯ ಸವದತ್ತಿ ಭಾಗದ ಕೆರೆಗಳನ್ನು ತುಂಬಿಸಲು ಅಗತ್ಯ...

ಬೆಳಗಾವಿ | ಸೋಯಾಬಿನ್ ಬೆಳೆ ಸಮೀಕ್ಷೆ ನಡೆಸಿ: ಶಾಸಕ ಮಹಾಂತೇಶ ಕೌಜಲಗಿ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಯಾಬಿನ್ ಬೆಳೆಯಲಾಗಿದ್ದು, ಮಳೆ...

ಬೆಳಗಾವಿ | ಜೂನ್‌ವರೆಗೆ ಕುಡಿಯುವ ನೀರಿಗೆ ಕೊರತೆಯಾಗದಂತೆ ಕ್ರಮ: ಸಚಿವ ಸತೀಶ ಜಾರಕಿಹೊಳಿ

ಮುಂದಿನ ಜೂನ್‌ವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ...