ಬೆಳಗಾವಿ | ಐಪಿಎಲ್ ಪಂದ್ಯಗಳ ಬೆಟ್ಟಿಂಗ್ ದಂಧೆ: ಕುಖ್ಯಾತ ಬುಕ್ಕಿ ಬಂಧನ

Date:

ಇಂಡಿಯನ್ ಪ್ರಿಮಿಯರ್ ಲೀಗ್ ಪಂದ್ಯಗಳು ರೋಚಕ ಘಟ್ಟ ತಲುಪುತ್ತಿದ್ದಂತೆ ಅಕ್ರಮ ಬೆಟ್ಟಿಂಗ್ ಚಟುವಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಬೆಳಗಾವಿಯಲ್ಲಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಕುಖ್ಯಾತ ಬುಕ್ಕಿಯನ್ನು ಬಂಧಿಸಿದ್ದಾರೆ.

- Advertisement -

ಶಾಸ್ತ್ರಿ ನಗರ ನಿವಾಸಿ ಶಾಹೀಲ್ ಪಾಟೀಲ್ (23) ಬಂಧಿತ ಆರೋಪಿ. ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್‌ ನಡೆಸುತ್ತಾ ಹಲವರನ್ನು ತನ್ನ ಜಾಲಕ್ಕೆ ಸೆಳೆದು ಹಣಪಡೆಯುತ್ತಿದ್ದನೆಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ರಾಜಸ್ಥಾನ ರಾಯಲ್ಸ್ ಮತ್ತು ದೇಹಲಿ ಕ್ಯಾಪೀಟಲ್ಸ್ ನಡುವಿನ ಪಂದ್ಯ ನಡೆಯುತ್ತಿದ್ದ ವೇಳೆ ನಡೆದಿದೆ. ಮೊಬೈಲ್‌ ಮೂಲಕ ನೇರ ಸ್ಕೋರ್ ಹಾಗೂ ಪಂದ್ಯ ವೀಕ್ಷಿಸುತ್ತಾ ಬೆಟ್ಟಿಂಗ್ ನಡೆಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ದಾಳಿಯ ವೇಳೆ ನಗದು ಹಣವನ್ನು ಜಪ್ತಿ ಮಾಡಲಾಗಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಆತನಿಗಾಗಿ ಹುಡುಕಾಟ ಮುಂದುವರಿದಿದೆ.

ಈತನ ಬೆಟ್ಟಿಂಗ್ ಜಾಲದಲ್ಲಿ ಸಿಲುಕಿ ಹಲವರು ಹಣ ಕಳೆದುಕೊಂಡಿರುವ ಮಾಹಿತಿ ಲಭ್ಯವಾಗಿದ್ದು, ದಂಧೆಯ ವ್ಯಾಪ್ತಿ ಇನ್ನಷ್ಟು ದೊಡ್ಡದಾಗಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬೆಳಗಾವಿ ಕ್ಯಾಂಪ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ಬೆಟ್ಟಿಂಗ್ ಚಟುವಟಿಕೆಗಳಲ್ಲಿ ಭಾಗಿಯಾಗಬೇಡಿ. ಇಂತಹ ಕೃತ್ಯಗಳಲ್ಲಿ ತೊಡಗಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಸಾರ್ವಜನಿಕರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...

ಬೆಳಗಾವಿ | ಅಕ್ಟೋಬರ್ 4ರಂದು ಶಿವಾಜಿ ಕಾಗಣಿಕರ್ ಕುರಿತು ಮೂರು ಕೃತಿಗಳ ಲೋಕಾರ್ಪಣೆ

ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಸ್ಕೂಲ್ ಆಫ್‌ ಕಲ್ಟರ್‌ನ ಗೋಗಟೆ ಸಭಾಂಗಣದಲ್ಲಿ...