ಬೆಳಗಾವಿ | ರಾಜ್ಯೋತ್ಸವದಂದು ಕೌಜಲಗಿ ನೂತನ ತಾಲ್ಲೂಕು ಕೇಂದ್ರ ಘೋಷಿಸಿ

Date:

ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಕೌಜಲಗಿ ಪಟ್ಟಣವನ್ನು ನವೆಂಬ‌ರ್ 1ರ ಕನ್ನಡ ರಾಜ್ಯೋತ್ಸವದಂದು ನೂತನ ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಬೇಕು ಎಂದು ಉತ್ತರ ಕರ್ನಾಟಕ ಯುವ ಅಹಿಂದ ಘಟಕದ ಅಧ್ಯಕ್ಷ ವಿಠಲ ಖಾನಟ್ಟಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

- Advertisement -

ಅರಭಾವಿ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ಕೌಜಲಗಿ ಪ್ರಸ್ತುತ ಹೋಬಳಿ ಕೇಂದ್ರವಾಗಿದ್ದು, ತಾಲ್ಲೂಕು ಕೇಂದ್ರವಾಗಲು ಅಗತ್ಯವಿರುವ ಎಲ್ಲ ಅರ್ಹತೆಗಳನ್ನು ಹೊಂದಿದೆ. 60ಕ್ಕೂ ಹೆಚ್ಚು ಹಳ್ಳಿಗಳಿಗೆ ಕೇಂದ್ರ ಸ್ಥಾನವಾಗಿರುವ ಈ ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂಬ ಬೇಡಿಕೆ ಕಳೆದ ನಾಲ್ಕು ದಶಕಗಳಿಂದ ಮುಂದುವರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕೌಜಲಗಿ ದೇಶಗತಿ ಸಂಸ್ಥಾನದ ಕೇಂದ್ರ ಸ್ಥಳವಾಗಿದ್ದು, ಪ್ರೊ. ಕೆ.ಜಿ. ಕುಂದಣಗಾರ ಹಾಗೂ ಕೌಜಲಗಿ ನಿಂಗಮ್ಮ ಅವರ ಜನ್ಮಸ್ಥಳವಾಗಿದೆ. ಈ ಪಟ್ಟಣದ ಐತಿಹಾಸಿಕ ಹಾಗೂ ಸಾಹಿತ್ಯಕ ಮಹತ್ವದ ಜೊತೆಗೆ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಆಡಳಿತಾತ್ಮಕವಾಗಿ ಅನುಕೂಲ ಕಲ್ಪಿಸುವ ದೃಷ್ಟಿಯಿಂದಲೂ ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸುವುದು ಅಗತ್ಯವಾಗಿದೆ.

ರಾಜ್ಯ ಸರ್ಕಾರವು ಕಾಲಕಾಲಕ್ಕೆ ರಚಿಸಿರುವ ತಾಲ್ಲೂಕು ಮತ್ತು ಜಿಲ್ಲಾ ಪುನರ್‌ವಿಂಗಡಣಾ ಸಮಿತಿಗಳು ಸಹ ಕೌಜಲಗಿಯನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡುವ ಕುರಿತು ಶಿಫಾರಸು ಮಾಡಿವೆ. ಆದರೂ ನಾಲ್ಕು ದಶಕಗಳಿಂದ ಬೇಡಿಕೆ ಈಡೇರದಿರುವುದು ಈ ಭಾಗದ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ಸರ್ಕಾರವು ಈ ಭಾಗದ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ಕನ್ನಡ ರಾಜ್ಯೋತ್ಸವದಂದು ಕೌಜಲಗಿಯನ್ನು ನೂತನ ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಬೇಕು ಎಂದು ವಿಠಲ ಖಾನಟ್ಟಿ ಆಗ್ರಹಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕರ್ನಾಟಕ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಅವಕಾಶವಿಲ್ಲ

ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿ ಯಲ್ಲಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ...

ಬೆಳಗಾವಿ ಜಿಪಂ ಮೀಸಲಾತಿ ಪ್ರಕಟ: ರಾಜಕೀಯ ಚಟುವಟಿಕೆ ಜೋರು

ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...