ಬೆಳಗಾವಿ | ಕೈಗಾರಿಕಾ ಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ : ಲಕ್ಷಾಂತರ ಮೌಲ್ಯದ ಪ್ಲಾಸ್ಟಿಕ್ ವಸ್ತುಗಳು ಭಸ್ಮ

Date:

ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿರುವ ಡಾಂಗೆ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ವಸ್ತುಗಳು ಹಾಗೂ ಯಂತ್ರೋಪಕರಣಗಳು ಬೆಂಕಿಗೆ ಆಹುತಿಯಾಗಿವೆ.

- Advertisement -

ತಡರಾತ್ರಿ ಏಕಾಏಕಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ಲಾಸ್ಟಿಕ್ ಕಚ್ಚಾ ವಸ್ತುಗಳು ಹೆಚ್ಚಾಗಿದ್ದರಿಂದ ಬೆಂಕಿ ಕ್ಷಣಾರ್ಧದಲ್ಲಿ ಕಾರ್ಖಾನೆಯಾದ್ಯಂತ ವ್ಯಾಪಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್:...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ₹5ಕ್ಕೆ ಉಪಹಾರ, ₹10ಕ್ಕೆ ಊಟ ನೀಡುವ ಇಂದಿರಾ ಕ್ಯಾಂಟಿನ್ ಯೋಜನೆ ಜನಸಾಮಾನ್ಯರಿಗೆ ಬಹುದೊಡ್ಡ ಆಸರೆಯಾಗಿದೆ. ಆದರೆ...

ಹಾವೇರಿ | ಬರದ ಬೇಗೆಯಲ್ಲೂ ಕೈ ಹಿಡಿದ ಮೆಕ್ಕೆಜೋಳ;...

"ಯಾವುದೇ ರಸಗೊಬ್ಬರಗಳನ್ನು ಬಳಸದೇ, ಕೀಟನಾಶಕಗಳನ್ನು ಸಿಂಪಡಿಸದೆಯೇ ಸಹಜ ಸಮೃದ್ಧ ಬೆಳೆ ಬೆಳೆಯುವುದು ಸಾವಯವ ಕೃಷಿಯ ಪವಾಡ" ಎಂದು ಚಂ.ಸು ಪಾಟೀಲ್ ಸಾವಯವ ಕೃಷಿಯ ಅನುಕೂಲಗಳನ್ನು ವಿಶ್ಲೇಷಿಸುತ್ತಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ತೀವ್ರ...

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ಅಗ್ನಿಶಾಮಕ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಕಿ ಪಕ್ಕದ ಕಾರ್ಖಾನೆಗಳಿಗೆ ಹರಡುವುದು ತಪ್ಪಿದ್ದು, ಸಂಭವಿಸಬಹುದಾದ ಭಾರಿ ಅನಾಹುತವನ್ನು ತಡೆದಂತಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದಲೇ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾರ್ಖಾನೆಯಲ್ಲಿದ್ದ ಪ್ಲಾಸ್ಟಿಕ್ ಕಚ್ಚಾ ವಸ್ತುಗಳು, ಸಿದ್ಧ ಉತ್ಪನ್ನಗಳು ಹಾಗೂ ಯಂತ್ರೋಪಕರಣಗಳು ಸುಟ್ಟು ಕರಕಲಾಗಿವೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಘಟನೆ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಕಿಯಿಂದಾದ ನಿಖರ ಹಾನಿಯ ಪ್ರಮಾಣ ತನಿಖೆಯ ನಂತರ ತಿಳಿಯಬೇಕಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬರ ವಿದ್ಯುತ್ ಸಮಸ್ಯೆ: ಸವದಿ ವಿರುದ್ದ ಕುಮಠಳ್ಳಿ ವ್ಯಂಗ್ಯ

ಬರ ಹಾಗೂ ವಿದ್ಯುತ್ ಸಮಸ್ಯೆ ಖಂಡಿಸಿ ಬೆಳಗಾವಿ ಜಿಲ್ಲೆಯ ಕಾಗವಾಡದಲ್ಲಿ ನಡೆದ...

ಬೆಳಗಾವಿ | ಹಳೆಯ ವೈಷಮ್ಯಕ್ಕೆ ಯುವಕನ ಕೊಲೆ: ಇಬ್ಬರ ಬಂಧನ

ಹಳೆಯ ವೈಷಮ್ಯ ಹಾಗೂ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ...