ಬೆಳಗಾವಿ | “ಆಗುವದೆಲ್ಲ ಒಳ್ಳೆಯದಕ್ಕೆ” ಸಚಿವ ಸ್ಥಾನ ಸಿಗದಿರುವ ಕುರಿತು ಶಾಸಕ ಅಶೋಕ ಪಟ್ಟಣ ಪ್ರತಿಕ್ರೆಯೆ

Date:

ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಬೆಳಗಾವಿ ಜಿಲ್ಲೆಗೆ ಒಂದೇ ಸಚಿವ ಸ್ಥಾನ ದೊರೆತು, ಅದು ಲಕ್ಷ್ಮಣ ಸವದಿ ಅವರ ಪಾಲಾಗಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ರಾಮದುರ್ಗ ಶಾಸಕ ಅಶೋಕ ಪಟ್ಟಣ ಮೊದಲ ಬಾರಿಗೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

- Advertisement -

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಆಗುವದೆಲ್ಲ ಒಳ್ಳೆಯದಕ್ಕೆ. ಭವಿಷ್ಯದಲ್ಲಿ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸವಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿರುವ ಸಚಿವರಿಗಿಂತ ನಾನು ಹಿರಿಯ ಶಾಸಕ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ನನ್ನ ಸೇವೆ ಮತ್ತು ಪಕ್ಷದ ಮೇಲಿನ ನಿಷ್ಠೆ ಗೊತ್ತಿದೆ. ಆದರೂ ಸಚಿವ ಸ್ಥಾನ ಸಿಗದಿರುವುದು ಸಹಜವಾಗಿ ಬೇಸರ ತಂದಿದೆ. ಆದರೆ ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಪಕ್ಷವನ್ನು ಬಿಡುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದರು.

ದೇವರಾಜ ಅರಸು ಅವರ ಕಾಲದಿಂದಲೇ ಕಾಂಗ್ರೆಸ್‌ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇನೆ. ಸಚಿವ ಸ್ಥಾನ ಹಂಚಿಕೆಯಲ್ಲಿ ಜಿಲ್ಲಾವಾರು ಹಾಗೂ ಜಾತಿವಾರು ಸಮೀಕರಣಕ್ಕೆ ಆದ್ಯತೆ ನೀಡಲಾಗಿದೆ. ಶರಣಪ್ರಕಾಶ ಪಾಟೀಲ ಮತ್ತು ಈಶ್ವರ ಖಂಡ್ರೆ ಇಬ್ಬರೂ ಬಣಜಿಗ ಸಮುದಾಯದವರಾಗಿರುವ ಕಾರಣ, ಅದೇ ಸಮುದಾಯಕ್ಕೆ ಸೇರಿದ ನನಗೆ ಅವಕಾಶ ದೊರೆಯಲಿಲ್ಲ ಎಂದು ಭಾವಿಸುತ್ತೇನೆ ಎಂದು ಹೇಳಿದರು.

ಆದರೆ ಇದರಿಂದ ನಿರುತ್ಸಾಹಗೊಳ್ಳುವುದಿಲ್ಲ. 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್‌ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಕೆಲಸವನ್ನು ಮುಂದುವರಿಸುತ್ತೇನೆ ಎಂದು ಶಾಸಕ ಅಶೋಕ ಪಟ್ಟಣ ಹೇಳಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬಿರುಸಿನ ಮಳೆ; ಬಾಡುವ ಬೆಳೆಗಳಿಗೆ ಜೀವಕಳೆ

ಮಳೆಗಾಲದಲ್ಲಿಯೂ ಬೇಸಿಗೆಯ ಧಗೆಗೆ ತತ್ತರಿಸಿದ್ದ ಜನರಿಗೆ ಗುರುವಾರ ಸಂಜೆ ಜಿಲ್ಲೆಯ ವಿವಿಧೆಡೆ...

ಮಂಗಳೂರಿನಲ್ಲಿ ಸಚಿವ ಸಂಪುಟ; ಕರಾವಳಿ–ಮಲೆನಾಡಿಗೆ ಹೊಸ ರೂಪ: ಸಿಎಂ ಡಿಕೆಶಿ

ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಹೊಸ ರೂಪ ನೀಡುವ ಮೂಲಕ ಇಲ್ಲಿನ...

ಯುಪಿಐ ಪಾವತಿಗೆ ಶುಲ್ಕ; ಕೇಂದ್ರ ಸಚಿವರು ಪಿಕ್ ಪಾಕೆಟ್‌ನಲ್ಲಿ ಪಿಎಚ್‌ಡಿ: ಸಿಎಂ ಡಿ ಕೆ ಶಿವಕುಮಾರ್

"ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸಿರುವ ಕೇಂದ್ರ ಸರ್ಕಾರ ಪಿಕ್...