ಬೆಳಗಾವಿ | ನೀರಾವರಿ ಹೋರಾಟಕ್ಕೆ ಶಾಸಕ ನಿಖಿಲ ಕತ್ತಿ ಬೆಂಬಲ

Date:

ರೈತ ಸಂಘಟನೆಗಳು ನೀರಾವರಿ ಯೋಜನೆಗಳ ಜಾರಿಗೆ ಆಗ್ರಹಿಸಿ ಮೇ 20ರಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ತಮ್ಮ ಬೆಂಬಲವಿದ್ದು, ತಾವೂ ಪ್ರತಿಭಟನೆಯಲ್ಲಿ ಭಾಗಿಯಾಗುವುದಾಗಿ ಶಾಸಕ ನಿಖಿಲ ಕತ್ತಿ ಹೇಳಿದರು.

- Advertisement -

ತಾಲೂಕಿನ ಎಲಿಮುನ್ನೋಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ತಂದೆ, ಮಾಜಿ ಸಚಿವ ಉಮೇಶ ಕತ್ತಿ ಅವರು ಹುಕ್ಕೇರಿ ತಾಲೂಕಿನ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕೊಟಬಾಗಿ ಏತ ನೀರಾವರಿ ಯೋಜನೆಯ ಕ್ರಿಯಾಯೋಜನೆ ರೂಪಿಸಿ ಮಂಜೂರಾತಿ ಪಡೆದುಕೊಂಡಿದ್ದರು. ಆದರೆ ಕಾಮಗಾರಿ ಆರಂಭವಾಗುವ ಮುನ್ನವೇ ಚುನಾವಣೆಯಲ್ಲಿ ಸೋಲು ಕಂಡರು. ಬಳಿಕ ಆಗಿನ ಶಾಸಕ ಶಶಿಕಾಂತ ನಾಯಿಕ ಅವರು ಕಾಮಗಾರಿಗೆ ಚಾಲನೆ ನೀಡಿದರು. ಈ ವಿಷಯ ಎಲ್ಲರಿಗೂ ತಿಳಿದಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ತಾಲೂಕಿನ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವುದು ಅತ್ಯಗತ್ಯವಾಗಿದ್ದು, ರೈತರ ಪರ ನಡೆಯುವ ಹೋರಾಟಗಳಿಗೆ ತಮ್ಮ ಬೆಂಬಲ ಮುಂದುವರಿಯಲಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಸತ್ಯಪ್ಪ ನಾಯಿಕ, ಗುರುರಾಜ ಕುಲಕರ್ಣಿ, ಕೆಂಪಣ್ಣ ವಾಸೇದಾರ (ದೇಸಾಯಿ), ಶಶಿಕಾಂತ ದೊಡ್ಡಲಿಂಗನವರ, ಭೀಮಗೌಡ ಗಿರಿಗೌಡನವರ, ಮಾರುತಿ ರಾಚನ್ನವರ, ಮಹಾಂತೇಶ ನಾಗನೂರಿ, ದುಂಡಪ್ಪ ಮಾಂಡೇಕರ, ಈರಣ್ಣ ಅಮ್ಮಣಗಿ, ಪ್ರಕಾಶ ಬೆನಿವಾಡ, ಶಂಕರ ಮರಡಿ, ಮಲ್ಲಪ್ಪ ಮರಡಿ ಹಾಗೂ ಶಶಿಕಾಂತ ಬೋನಿ ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಗಾಳಿಪಟದ ಮಾಂಜಾ ದಾರ ಬೈಕ್‌ ಚಲಾಯಿಸುತ್ತಿದ್ದ ಯುವಕನ ಕೊರಳಿಗೆ ಸಿಲುಕಿ ಸ್ಥಳದಲ್ಲೇ...

ಬೆಳಗಾವಿ | ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಮೂಲಕ ಯುವಕನ ಕೊಲೆ: ನಾಲ್ವರ ಬಂಧನ

ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದ್ದು, ಹಳೆ ಹಣಕಾಸಿನ...

ಬೆಳಗಾವಿ | ಮತಕಳ್ಳತನ ಆರೋಪಕ್ಕೆ ಸಾಕ್ಷ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಲಿ: ಜಗದೀಶ್ ಶೆಟ್ಟರ್

ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು...