ಬೆಳಗಾವಿ | ಕೊಲೆ ಪ್ರಕರಣದ ಆರೋಪಿ ಗಾಂಜಾ ಮಾರಾಟ ವೇಳೆ ಸಿಸಿಬಿ ಬಲೆಗೆ

Date:

ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಬೆಳಗಾವಿ ನಗರದ ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತನನ್ನು ಆಕಾಶ್ ದಿಲೀಪ್ ದೊಡಮನಿ ಎಂದು ಗುರುತಿಸಲಾಗಿದೆ. ಆತ ಕಾರ್ತಿಕ್ ಎಂಬಾತನಿಂದ ಗಾಂಜಾ ಪಡೆದು ಜಾಂಬೋಟಿ ರಸ್ತೆ ಮಾರ್ಗವಾಗಿ ಮಾರಾಟಕ್ಕೆ ತೆರಳುತ್ತಿದ್ದಾಗ, ಸಿಸಿಬಿ ವಿಭಾಗದ ಪಿಐ ಮಂಜುನಾಥ್‌ ನಾಯಕ್ ನೇತೃತ್ವದಲ್ಲಿ ಪಿಎಸ್‌ಐ ಮಂಜುನಾಥ್ ಭಜಂತ್ರಿ ಹಾಗೂ ಸಿಬ್ಬಂದಿ ದಾಳಿ ನಡೆಸಿ ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ದಾಳಿ ವೇಳೆ ಆರೋಪಿಯಿಂದ ₹80 ಸಾವಿರ ಮೌಲ್ಯದ 1 ಕೆಜಿ 704 ಗ್ರಾಂ ಗಾಂಜಾ ಹಾಗೂ ₹11 ಸಾವಿರ ಮೌಲ್ಯದ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ಸಂಖ್ಯೆ 184/2026 ದಾಖಲಿಸಲಾಗಿದ್ದು, 8(c) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಎನ್‌ಡಿಪಿಎಸ್‌ ಕಾಯ್ದೆಯ ಸೆಕ್ಷನ್ 20(b)(ii)(B) ಹಾಗೂ

ಪೊಲೀಸರ ಮಾಹಿತಿ ಪ್ರಕಾರ, ಬಂಧಿತ ಆರೋಪಿ ಆಕಾಶ್ ದಿಲೀಪ್‌ ದೊಡಮನಿ ಈ ಹಿಂದೆ ಬೆಳಗಾವಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ 137/2026ರಲ್ಲಿ ಪ್ರಮುಖ ಆರೋಪಿಯಾಗಿದ್ದು, ಕೃತ್ಯ ಎಸಗಿ ತಲೆಮರೆಸಿಕೊಂಡಿದ್ದನು.

ಗಾಂಜಾ ಮಾರಾಟದ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ, ಮಾದಕ ವಸ್ತು ವಶಪಡಿಸಿಕೊಳ್ಳುವುದರ ಜೊತೆಗೆ ಕೊಲೆ ಪ್ರಕರಣದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕುಡಿದ ಮತ್ತಿನಲ್ಲಿದ್ದ ಪತಿಯಿಂದ ಪತ್ನಿಯ ಕೊಲೆ

ಕುಡಿದ ಮತ್ತಿನಲ್ಲಿ ಪತಿಯೇ ಪತ್ನಿಯನ್ನು ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪದ...

ಬೆಳಗಾವಿ | ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದ ಜಾತ್ರೆಯಲ್ಲಿ...

ಬೆಳಗಾವಿ | ಮಾಹಿತಿ ನೀಡದ ಗ್ರಾಮ ಪಂಚಾಯಿತಿ ಅಧಿಕಾರಿ ಎಂ.ಡಿ. ಬಡಿಗೇರಗೆ ₹30 ಸಾವಿರ ದಂಡ

ಮಾಹಿತಿ ಹಕ್ಕು ಅಧಿನಿಯಮದಡಿ ಕೇಳಿದ ಮಾಹಿತಿಯನ್ನು ನೀಡದ ಪ್ರಕರಣದಲ್ಲಿ ಬೆಳಗಾವಿ ಜಿಲ್ಲೆಯ...