ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ನಾನಾಸಾಹೇಬ ಪಾಟೀಲ ಸ್ಪರ್ಧೆ

Date:

Advertisements

ಅಕ್ಟೋಬರ್ 19ರಂದು ನಡೆಯಲಿರುವ ಬೆಳಗಾವಿ ಜಿಲ್ಲಾ ಸಹಕಾರಿ (ಬಿಡಿಸಿಸಿ) ಬ್ಯಾಂಕ್‌ ಚುನಾವಣೆಗೆ ನಾನಾಸಾಹೇಬ ಪಾಟೀಲ ಸ್ಪರ್ಧಿಸಲಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಭಾನುವಾರ ಘೋಷಿಸಿದರು.

ಬೆಳಗಾವಿ ಜಿಲ್ಲೆಯ ಕಿತ್ತೂರ ಪಟ್ಟಣದ ಚನ್ನಬಸಪ್ಪ ಕಲ್ಯಾಣ ಮಂಟಪದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು, “32 ಸೊಸೈಟಿಗಳಲ್ಲಿ 18 ರಿಂದ 20 ಸೊಸೈಟಿಗಳ ಮತದಾರರು ನಮ್ಮ ಪರವಿದ್ದಾರೆ. ಎಲ್ಲರೂ ಒಟ್ಟಾಗಿ ಶ್ರಮಿಸಿದರೆ ನಾನಾಸಾಹೇಬರ ಗೆಲುವು ಖಚಿತ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅವರು ಮುಂದುವರೆದು, “ಕಿತ್ತೂರು ಕ್ಷೇತ್ರದ ಅಭಿವೃದ್ಧಿಗೆ ಪ್ರತಿ ವರ್ಷ ₹5 ಕೋಟಿ ಅನುದಾನ ನೀಡಲಾಗುತ್ತಿದೆ. ಈ ವರ್ಷವೂ ಅದೇ ಪ್ರಮಾಣದ ಅನುದಾನ ನೀಡಲಾಗುವುದು” ಎಂದು ಹೇಳಿದರು.

Advertisements

ಶಾಸಕ ಬಾಬಾಸಾಹೇಬ ಪಾಟೀಲ, “ಸೊಸೈಟಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಒತ್ತಾಯದ ಮೇರೆಗೆ ಸಹೋದರ ನಾನಾಸಾಹೇಬರು ಸ್ಪರ್ಧಿಸುತ್ತಿದ್ದಾರೆ. 20 ಕ್ಕೂ ಹೆಚ್ಚು ಸೊಸೈಟಿ ಮತದಾರರ ಬೆಂಬಲವಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ನಾನಾಸಾಹೇಬ ಪಾಟೀಲ, ಬ್ಲಾಕ್ ಅಧ್ಯಕ್ಷ ಸಂಗನಗೌಡ ಪಾಟೀಲ, ಶಿವನಗೌಡ ಪಾಟೀಲ, ದೇವೇಂದ್ರ ಪಾಟೀಲ ಅವರು ಮಾತನಾಡಿದರು.

ಈ ಸುದ್ದಿ ನೋಡಿದ್ದಿರಾ ? ಹೆಸರು ಕಾಳು ಬೆಳೆದ ರೈತರು ಸಂಕಷ್ಟದಲ್ಲಿ,   ರೈತರ ನೆರವಿಗೆ ಸರ್ಕಾರ ಬರಬೇಕಿದೆ

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷ ಜೈಸಿದ್ದರಾಮ ಮಾರಿಹಾಳ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಫ್. ಜಕಾತಿ, ಶಂಕರ ಹೊಳಿ, ಶೇಕಪ್ಪ ಯರಗೊಪ್ಪ, ರಾಜೇಂದ್ರ ಇನಾಮದಾರ, ಸಾವಂತ ಕಿರಬನವರ, ಬಸವರಾಜ ಹಳೆಮನಿ, ಸುನೀಲ ಘಿವಾರಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಅನಿಲ ಎಮ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು.

ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ : ನಾಳೆ ಶಾಲಾ ಕಾಲೇಜು ರಜೆ

ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಕಾರಣ ನಾಳೆ ಮಂಗಳವಾರ ರಜೆ...

ಬೆಳಗಾವಿ : ನೀವು ಎದ್ದೇಳುವ ಮುಂಚೆ ನಾವು ಕೆಲಸ ಮುಗಿಸಿಕೊಂಡು ಹೋಗಿರುತ್ತೇವೆ : ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ನೇಸರಿ ಡೆಲಕ್ಸ್‌ನಲ್ಲಿ ನಡೆದ ಹುಕ್ಕೇರಿ...

Download Eedina App Android / iOS

X