ಬೆಳಗಾವಿ | ಕಂಟೋನ್ಮೆಂಟ್ ರಸ್ತೆಗಳನ್ನು ಸೇನೆಗೆ ವರ್ಗಾಯಿಸಲು ವಿರೋಧ: ನಿವಾಸಿಗಳಿಂದ ಸಹಿ ಸಂಗ್ರಹ

Date:

ಬೆಳಗಾವಿ ಕಂಟೋನ್ಮೆಂಟ್‌ ರಸ್ತೆಗಳನ್ನು ಸೇನೆಗೆ ವರ್ಗಾಯಿಸುವ ಪ್ರಸ್ತಾಪನೆಗೆ ಇಲ್ಲಿ ವಾಸಿಸುವ ಸಾವಿರಾರು ನಿವಾಸಿಗಳು ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಕಂಟೋನ್ಮೆಂಟ್ ನಿವಾಸಿಗಳ ಕಲ್ಯಾಣ ಸಂಘದ ಸದಸ್ಯರು 14,136ಕ್ಕೂ ಹೆಚ್ಚು ನಿವಾಸಿಗಳ ಸಹಿಗಳನ್ನು ಒಳಗೊಂಡ ಜ್ಞಾಪಕ ಪತ್ರವನ್ನು ಕಂಟೋನ್ಮೆಂಟ್ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸುದಮ್ ಹರಿ ಮಂಚಲವಾರ್ ಅವರಿಗೆ ಸಲ್ಲಿಸಿದ್ದಾರೆ.

- Advertisement -

ಈ ಜ್ಞಾಪಕ ಪತ್ರದಲ್ಲಿ ಆಲ್ಬರ್ಟ್ ಎಕ್ಕಾ ರಸ್ತೆ, ಸ್ಮಾರ್ಟ್ ರಸ್ತೆ ಮತ್ತು ಕ್ವೀನ್ಸ್ ಗಾರ್ಡನ್ ರಸ್ತೆಯನ್ನು ಸೇನೆಗೆ ವರ್ಗಾಯಿಸುವ ಪ್ರಸ್ತಾವನೆಯನ್ನು ವಿರೋಧಿಸಲಾಗಿದೆ. ಜೊತೆಗೆ ಇಂಡಿಪೆಂಡೆನ್ಸ್ ರಸ್ತೆ ಮತ್ತು ಜಿಮ್ಖಾನಾ ರಸ್ತೆಯಲ್ಲಿ ಎತ್ತರದ ಬ್ಯಾರಿಕೇಡ್‌ಗಳನ್ನು ಅಳವಡಿಸುವ ಯೋಜನೆಯನ್ನೂ ನಿವಾಸಿಗಳು ತೀವ್ರವಾಗಿ ವಿರೋಧಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ನಿವಾಸಿಗಳ ಪ್ರಕಾರ, ಈ ರಸ್ತೆಗಳು ಸಾಮಾನ್ಯ ಜನರ ದೈನಂದಿನ ಸಂಚಾರಕ್ಕೆ ಮುಖ್ಯವಾಗಿವೆ. ಅವುಗಳನ್ನು ಸೇನೆಗೆ ವರ್ಗಾಯಿಸಿದರೆ ಅಥವಾ ಎತ್ತರದ ಬ್ಯಾರಿಕೇಡ್‌ಗಳನ್ನು ಹಾಕಿದರೆ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಲಿದೆ ಮತ್ತು ಸ್ಥಳೀಯರ ಜೀವನಶೈಲಿಗೆ ಪರಿಣಾಮ ಬೀರಲಿದೆ ಎಂಬುದು ಅವರ ವಾದ.

ಮಾಜಿ ಶಾಸಕ ಅನಿಲ್ ಬೆಣಕೆ ಈ ಪ್ರಸ್ತಾವನೆಗಳನ್ನು ಟೀಕಿಸಿ, ಕಂಟೋನ್ಮೆಂಟ್‌ನಲ್ಲಿ ಮೂರು ಮುಖ್ಯ ರಸ್ತೆಗಳನ್ನು ಮುಚ್ಚುವುದು ಮತ್ತು ಬ್ಯಾರಿಕೇಡ್‌ಗಳನ್ನು ಅಳವಡಿಸುವುದರಿಂದ ಇಲ್ಲಿನ ನಿವಾಸಿಗಳಿಗೆ ಅನ್ಯಾಯವಾಗುತ್ತದೆ. ನಾಗರಿಕರು ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳುವ ಸಲುವಾಗಿ ಈ ಹಿಂದೆ ಎರಡು ಬಾರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂಬುದನ್ನು ಜ್ಞಾಪನೆಗೆ ತಂದುಕೊಂಡರು. ಇತ್ತೀಚಿನ ಜ್ಞಾಪಕ ಪತ್ರವನ್ನು ಗಂಭೀರವಾಗಿ ಪರಿಗಣಿಸಿ, ರಸ್ತೆಗಳನ್ನು ಸಾರ್ವಜನಿಕರಿಗೆ ಮುಕ್ತವಾಗಿ ಇಡುವಂತೆ ಮತ್ತು ನಿವಾಸಿಗಳಿಗೆ ಪರಿಹಾರ ನೀಡುವಂತೆ ಅಧಿಕಾರಿಗಳನ್ನು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ನನ್ನ ರಾಜಕೀಯ ಏಳಿಗೆಯಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾತ್ರ ದೊಡ್ಡದು | ಸಿದ್ದರಾಮಯ್ಯ

ನಗರದ ಶ್ರೀದೇವರಾಜ ಅರಸು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರ ಹಾಗೂ...

ಯಾದಗಿರಿ | ಸಮಾಜ ಪರಿವರ್ತನೆಗೆ ಸಂವಿಧಾನದ ಅರಿವು ಅಗತ್ಯ: ಭೀಮಣ್ಣ ಮೇಟಿ

ಸಂವಿಧಾನದ ಆಶಯಗಳನ್ನು ಅರಿತುಕೊಂಡು ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಯುವಜನರು ಸಮಾಜ ಸುಧಾರಣೆಯಲ್ಲಿ...

ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ವಾಹನ ಅಪಘಾತ,ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು...

ಬಳ್ಳಾರಿ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನ; ಸರ್ವಾಧ್ಯಕ್ಷರಾಗಿ ಸಿ.ಜಿ.ಹಂಪಣ್ಣ ಆಯ್ಕೆ

ಕನ್ನಡ ಸಾಹಿತ್ಯ ಪರಿಷತ್ತಿನ ಅಖಂಡ ಬಳ್ಳಾರಿ ಜಿಲ್ಲಾ ಘಟಕದ ವತಿಯಿಂದ ನಗರದ...