ಬೆಳಗಾವಿ | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುತ್ತಿರುವ ಸಾಲಾಪೂರ ಸರ್ಕಾರಿ ಶಾಲೆ

Date:

ಸರ್ಕಾರಿ ಶಾಲೆ ಎಂದರೆ ಮೂಗುಮುರಿಯುವವರೇ ಹೆಚ್ಚು. ಆದರೆ, ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ನಮ್ಮೂರ ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆ ಆ ಕಲ್ಪನೆಯನ್ನು ಸಂಪೂರ್ಣವಾಗಿ ಬದಲಿಸಿದೆ. ಗ್ರಾಮಸ್ಥರು, ಹಳೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಮೂಹದ ಶ್ರಮದಿಂದ ಈ ಶಾಲೆ ಇಂದು ಖಾಸಗಿ ಶಾಲೆಗಳಿಗೂ ಸವಾಲು ಹಾಕುವ ಮಟ್ಟಕ್ಕೆ ಬೆಳೆದಿದೆ.

- Advertisement -

ಶಾಲೆಯಲ್ಲಿ ಆಧುನಿಕ ಶೈಕ್ಷಣಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಸ್ಮಾರ್ಟ್‌ಬೋರ್ಡ್, ಇಂಪ್ಯಾಕ್ಟ್‌ಬೋರ್ಡ್ ಮತ್ತು ಟಿವಿಗಳ ಮೂಲಕ ಮಕ್ಕಳಿಗೆ ಬೋಧನೆ ನಡೆಯುತ್ತಿದೆ. ತರಗತಿ ಕೊಠಡಿಗಳ ಗೋಡೆಗಳ ಮೇಲೆ ಗಣಿತದ ಸೂತ್ರಗಳು, ಕನ್ನಡ ಹಾಗೂ ಇಂಗ್ಲಿಷ್ ವ್ಯಾಕರಣ, ವಿಜ್ಞಾನ, ಸಮಾಜ ವಿಜ್ಞಾನ ಮತ್ತು ಇತಿಹಾಸಕ್ಕೆ ಸಂಬಂಧಿಸಿದ ಬಣ್ಣಬಣ್ಣದ ಶೈಕ್ಷಣಿಕ ಚಿತ್ರಗಳನ್ನು ಅಳವಡಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳ ಕಲಿಕೆ ಹೆಚ್ಚು ಪರಿಣಾಮಕಾರಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಪ್ರಸ್ತುತ ಶಾಲೆಯಲ್ಲಿ 380 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಪ್ರತಿ ವರ್ಷ ನಡೆಯುವ ರಾಷ್ಟ್ರೀಯ ಆದಾಯ ಮತ್ತು ಅರ್ಹತಾ ವಿದ್ಯಾರ್ಥಿವೇತನ (ಎನ್‌ಎಂಎಂಎಸ್) ಪರೀಕ್ಷೆಯಲ್ಲಿ ರಾಮದುರ್ಗ ತಾಲೂಕಿನಲ್ಲೇ ಅತಿ ಹೆಚ್ಚು ವಿದ್ಯಾರ್ಥಿಗಳು ಈ ಶಾಲೆಯಿಂದ ಆಯ್ಕೆಯಾಗುತ್ತಿದ್ದಾರೆ. ಇದಕ್ಕಾಗಿ ಶಿಕ್ಷಕರು ನಿಯಮಿತವಾಗಿ ವಿಶೇಷ ತರಗತಿಗಳನ್ನು ನಡೆಸುತ್ತಿದ್ದಾರೆ.

9547528e 5aca 4181 a86e d4e0b4a9dac9

ಶಿಕ್ಷಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಸಾಲಾಪೂರ ಗ್ರಾಮದ ಜನತೆ ಹಾಗೂ ಹಳೆಯ ವಿದ್ಯಾರ್ಥಿಗಳು ಸೇರಿ ಸುಮಾರು ₹6 ಲಕ್ಷ ದೇಣಿಗೆ ನೀಡಿ ಶಾಲೆಯ ಅಭಿವೃದ್ಧಿಗೆ ಕೈಜೋಡಿಸಿದ್ದಾರೆ. ಶಾಲಾ ಆವರಣದಲ್ಲಿ ಹಸಿರು ವಾತಾವರಣ, ವಿಶಾಲ ಆಟದ ಮೈದಾನ ಹಾಗೂ ಮಕ್ಕಳಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

1002187815 1

ಪ್ರತಿ ಶನಿವಾರ ಕ್ವಿಜ್ ಸ್ಪರ್ಧೆ ಆಯೋಜಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸುವ ಮೂಲಕ ಸ್ಪರ್ಧಾತ್ಮಕ ಮನೋಭಾವ ಬೆಳೆಸಲಾಗುತ್ತಿದೆ. ಸುಸಜ್ಜಿತ ಕಂಪ್ಯೂಟರ್ ಲ್ಯಾಬ್‌ನಲ್ಲಿ ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ.

ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಶಾಲೆ ತನ್ನದೇ ಆದ ಹೆಸರನ್ನು ಗಳಿಸಿದೆ. ಶಾಲೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ.

ಸಾಲಾಪೂರ ಗ್ರಾಮದಷ್ಟೇ ಅಲ್ಲದೆ ಸುತ್ತಮುತ್ತಲಿನ ಹಲವು ಗ್ರಾಮಗಳ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನೂ ಆರಂಭಿಸಲಾಗಿದೆ.

ವಿದ್ಯಾರ್ಥಿಗಳು, ಶಿಕ್ಷಕರು, ಗ್ರಾಮಸ್ಥರು ಹಾಗೂ ಹಳೆಯ ವಿದ್ಯಾರ್ಥಿಗಳ ಒಗ್ಗಟ್ಟಿನ ಪ್ರಯತ್ನದಿಂದ ಸರ್ಕಾರಿ ಶಾಲೆಯೂ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡಬಲ್ಲದು ಎಂಬುದಕ್ಕೆ ಸಾಲಾಪೂರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಜೀವಂತ ಉದಾಹರಣೆಯಾಗಿದೆ.

1002187799

ಈ ಕುರಿತು ಈದಿನ.ಕಾಮ್‌ ಜೊತೆ ಮಾತನಾಡಿದ ವಿದ್ಯಾರ್ಥಿನಿ ಸೌಜನ್ಯ, “ನಮ್ಮ ಶಾಲೆಯಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳಿವೆ. ಪ್ರತಿಯೊಂದು ತರಗತಿಯ ಗೋಡೆಗಳ ಮೇಲೆ ವಿಜ್ಞಾನ, ಗಣಿತ, ಕನ್ನಡ, ಸಮಾಜ ವಿಜ್ಞಾನ ಹಾಗೂ ಇಂಗ್ಲಿಷ್ ವಿಷಯಗಳಿಗೆ ಸಂಬಂಧಿಸಿದ ಚಿತ್ರಗಳು, ಸೂತ್ರಗಳು ಮತ್ತು ಮಾಹಿತಿಯನ್ನು ಸುಂದರವಾಗಿ ಬರೆಯಲಾಗಿದೆ. ಇದರಿಂದ ಪಾಠಗಳನ್ನು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಕಂಪ್ಯೂಟರ್ ಲ್ಯಾಬ್‌ನಲ್ಲಿ ಕಂಪ್ಯೂಟರ್ ಶಾರ್ಟ್‌ಕಟ್ ಕೀಗಳ ಮಾಹಿತಿಯೂ ಇದೆ. ಶಿಕ್ಷಕರು ಸ್ಮಾರ್ಟ್‌ಬೋರ್ಡ್ ಮೂಲಕ ಪಾಠ ಮಾಡುವುದರಿಂದ ಕಲಿಕೆ ಇನ್ನಷ್ಟು ಆಸಕ್ತಿದಾಯಕವಾಗುತ್ತದೆ. ಶಾಲೆಯ ಗೋಡೆಗಳ ಮೇಲೆ ದೇಶ ಹಾಗೂ ರಾಜ್ಯದ ಸಂಸ್ಕೃತಿ, ಪರಂಪರೆ ಮತ್ತು ಮಹನೀಯರ ಚಿತ್ರಗಳನ್ನು ಬಿಡಿಸಿರುವುದು ಶಾಲೆಯ ಅಂದವನ್ನು ಹೆಚ್ಚಿಸಿದೆ. ನಮ್ಮ ಶಾಲೆಯ ವಾತಾವರಣ ತುಂಬಾ ಚೆನ್ನಾಗಿರುವುದರಿಂದ ಶಾಲೆಗೆ ಬಂದರೆ ಮರಳಿ ಮನೆಗೆ ಹೋಗಲು ಮನಸ್ಸೇ ಆಗುವುದಿಲ್ಲ” ಎಂದು ಹೇಳಿದರು.

b37aa586 8593 4540 820c 99d2ecc62d9a

ಸಮುದಾಯದ ಸಹಕಾರದಿಂದ ಮಾದರಿ ಶಾಲೆ ನಿರ್ಮಾಣ

ಈ ಕುರಿತು ಶಾಲೆಯ ಶಿಕ್ಷಕ ದಯಾನಂದ ಹುದ್ದಾರ ಮಾತನಾಡಿ, “ನಮ್ಮ ಶಾಲೆ ಆರಂಭದಲ್ಲಿ ಹಳೆಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಹೊಸ ಕಟ್ಟಡ ನಿರ್ಮಾಣವಾದ ಬಳಿಕ ಗ್ರಾಮದ ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸೇರಿ ಸುಮಾರು ₹6 ಲಕ್ಷ ದೇಣಿಗೆ ನೀಡಿದ್ದಾರೆ. ಆ ಹಣದಿಂದ ಶಾಲೆಯ ಗೋಡೆಗಳಿಗೆ ಬಣ್ಣ ಬಳಿದು, ವಿವಿಧ ವಿಷಯಗಳಿಗೆ ಸಂಬಂಧಿಸಿದ ಶೈಕ್ಷಣಿಕ ಚಿತ್ರಗಳು ಮತ್ತು ಮಾಹಿತಿಯನ್ನು ಅಳವಡಿಸಲಾಗಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ಮಾಡಲು ಎನ್‌ಎಂಎಂಎಸ್ ಪರೀಕ್ಷೆಗೆ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ಅದರ ಪರಿಣಾಮವಾಗಿ ರಾಮದುರ್ಗ ತಾಲೂಕಿನಲ್ಲೇ ನಮ್ಮ ಶಾಲೆಯಿಂದ ಅತಿ ಹೆಚ್ಚು ವಿದ್ಯಾರ್ಥಿಗಳು ಎನ್‌ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತಿದ್ದಾರೆ. ಶಾಲೆಯ ಅಭಿವೃದ್ಧಿಗೆ ಎಲ್ಲಾ ಶಿಕ್ಷಕರು ಶ್ರಮಿಸುತ್ತಿದ್ದು, ಶಾಲೆಯನ್ನು ಸ್ವಚ್ಛವಾಗಿಡುವ ಕೆಲಸದಲ್ಲಿಯೂ ನಾವೇ ಭಾಗವಹಿಸುತ್ತೇವೆ. ನಮ್ಮ ಶಾಲೆಯ ಅಭಿವೃದ್ಧಿಯನ್ನು ವೀಕ್ಷಿಸಲು ಇತರೆ ಶಾಲೆಗಳ ಶಿಕ್ಷಕರು ಭೇಟಿ ನೀಡಿ ಸಲಹೆಗಳನ್ನು ನೀಡಿದರೆ, ಅವುಗಳನ್ನು ಸ್ವಾಗತಿಸಿ ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ನಾವು ಸದಾ ಸಿದ್ಧರಿದ್ದೇವೆ” ಎಂದು ತಿಳಿಸಿದರು.

08b76a42 ed8b 438e bbed 6c6fe04bc908

ಸರ್ಕಾರಿ ಶಾಲೆಗಳೂ ಖಾಸಗಿ ಶಾಲೆಗಳಿಗಿಂತ ಯಾವುದೇ ವಿಷಯದಲ್ಲಿ ಕಡಿಮೆಯಿಲ್ಲ ಎಂಬುದನ್ನು ಸಾಲಾಪೂರ ನಮ್ಮೂರ ಮಾದರಿ ಪ್ರಾಥಮಿಕ ಶಾಲೆ ತನ್ನ ಸಾಧನೆಯ ಮೂಲಕ ಸಾಬೀತುಪಡಿಸಿದೆ. ಶಿಕ್ಷಕರ ನಿಸ್ವಾರ್ಥ ಸೇವೆ, ಗ್ರಾಮಸ್ಥರು ಮತ್ತು ಹಳೆಯ ವಿದ್ಯಾರ್ಥಿಗಳ ಸಹಕಾರ, ವಿದ್ಯಾರ್ಥಿಗಳ ಕಲಿಕೆಯ ಆಸಕ್ತಿ ಹಾಗೂ ಆಧುನಿಕ ಸೌಲಭ್ಯಗಳ ಸಮನ್ವಯದಿಂದ ಈ ಶಾಲೆ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮಾದರಿಯಾಗಿದೆ. ಇದೇ ರೀತಿಯ ಜನಸಹಭಾಗಿತ್ವ ಮತ್ತು ಬದ್ಧತೆ ರಾಜ್ಯದ ಇತರೆ ಸರ್ಕಾರಿ ಶಾಲೆಗಳಲ್ಲಿಯೂ ಮೂಡಿಬಂದರೆ, ಸರ್ಕಾರಿ ಶಾಲೆಗಳ ಮೇಲಿನ ಸಾರ್ವಜನಿಕರ ವಿಶ್ವಾಸ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅಂಬೇಡ್ಕರವರ ಅಧ್ಯಯನವೆಂದರೆ ಜಗತ್ತಿನ ಪ್ರಗತಿಯ ಅಧ್ಯಯನ : ಜಗನ್ನಾಥ ಹೆಬ್ಬಾಳೆ

ಡಾ.ಬಿ.ಆರ್.ಅಂಬೇಡ್ಕರ ಅವರು ಕೇವಲ ದಲಿತ ಸಮುದಾಯದ ನಾಯಕರಲ್ಲ. ಅವರು ಇಡೀ ಮನುಕುಲದ...

ಬೀದರ್‌ | ಸಂವಿಧಾನ ಮೌಲ್ಯಗಳಿಂದ ಸಾಮರಸ್ಯ ಸಮಾಜ ನಿರ್ಮಾಣ : ಸಚಿವ ಈಶ್ವರ ಖಂಡ್ರೆ

ವಿಶ್ವದಲ್ಲೇ ಅತ್ಯಂತ ಮಾದರಿಯಾದ ಹಾಗೂ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ...