ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್)ಯ ಸಿಪಿಐ ಶ್ರೀಶೈಲ ಚೌಗಲೆ (37) ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ನಗರದ ಚನ್ನಮ್ಮ ನಗರದಲ್ಲಿ ನಡೆದಿದೆ.
ಮನೆಯ ಕೊಠಡಿಯಲ್ಲಿ ಬಾಗಿಲು ಹಾಕಿಕೊಂಡಿದ್ದ ಚೌಗಲೆ ಅವರು ಬಹಳ ಸಮಯವಾದರೂ ಹೊರಬರದ ಹಿನ್ನೆಲೆ ಅನುಮಾನಗೊಂಡ ಪತ್ನಿ ತಕ್ಷಣ ಎಸ್‌ಡಿಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಕೊಠಡಿಯ ಬಾಗಿಲು ಮುರಿದು ಅವರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದರು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಈ ಕುರಿತು ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮೃತರ ಆತ್ಮಹತ್ಯೆಗೆ ಕಾರಣವೇನು ಎಂಬುದು ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.



