ಬಹುಕೋಟಿ ರೂ. ವಂಚನೆ ಆರೋಪ ಎದುರಿಸುತ್ತಿರುವ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ್ ವಿರುದ್ಧದ ಪ್ರಕರಣವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಸಿಐಡಿ ತನಿಖೆಗೆ ವಹಿಸಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪ್ರಕರಣದ ತನಿಖೆಯನ್ನು ಈಗಾಗಲೇ ಸಿಐಡಿಗೆ ಒಪ್ಪಿಸಲಾಗಿದೆ. ಸಿಐಡಿ ಅಧಿಕಾರಿಗಳು ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಿದ ಬಳಿಕವೇ ಈ ಹಗರಣದ ಸಂಪೂರ್ಣ ಸತ್ಯಾಸತ್ಯತೆ ಹಾಗೂ ನಿಖರ ಮಾಹಿತಿ ಹೊರಬರಲಿದೆ” ಎಂದು ಹೇಳಿದರು.
ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. “ಇದು ಸಂಪೂರ್ಣವಾಗಿ ಸಾರ್ವಜನಿಕರ ಹಣಕಾಸು ವಂಚನೆಗೆ ಸಂಬಂಧಿಸಿದ ವಿಷಯವಾಗಿದೆ. ಕಾನೂನುಬಾಹಿರವಾಗಿ ಹಣ ಸಂಗ್ರಹಿಸಿ ಸಾರ್ವಜನಿಕರಿಗೆ ಮೋಸ ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪ ಅಥವಾ ಪ್ರೇರೇಪಣೆ ಇಲ್ಲ” ಎಂದು ತಿಳಿಸಿದರು.

ಹೆಚ್ಚಿನ ಬಡ್ಡಿದರದ ಆಮಿಷಕ್ಕೆ ಒಳಗಾಗಿ ಅನಧಿಕೃತ ಸಂಸ್ಥೆಗಳಲ್ಲಿ ಹಣ ಹೂಡಿಕೆ ಮಾಡಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ ಸಚಿವರು, “ಯಾವುದೇ ಸಂಸ್ಥೆಗಳು ನಿಯಮಬಾಹಿರವಾಗಿ ಅತಿಯಾದ ಲಾಭದ ಭರವಸೆ ನೀಡಿದಾಗ ಜನರು ಜಾಗರೂಕರಾಗಿರಬೇಕು. ಹಣ ಹೂಡಿಕೆ ಮಾಡುವ ಮೊದಲು ಸಂಸ್ಥೆಯ ವಿಶ್ವಾಸಾರ್ಹತೆ ಪರಿಶೀಲಿಸಬೇಕು. ಇಂತಹ ವಂಚನೆ ತಡೆಯಲು ಕಾನೂನು ಕ್ರಮದ ಜೊತೆಗೆ ಜನಜಾಗೃತಿಯೂ ಮುಖ್ಯ” ಎಂದು ಹೇಳಿದರು.