ಬೆಳಗಾವಿ | ಶಿವಾನಂದ ನೀಲಣ್ಣವರ ಪ್ರಕರಣ: ನಟಿ ಸನ್ನಿ ಲಿಯೋನ್‌ಗೆ ನೋಟಿಸ್‌, ಹಲವರಿಗೆ ಹಣ ವರ್ಗಾವಣೆ

Date:

ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧದ ಬಹುಕೋಟಿ ಹೂಡಿಕೆ ವಂಚನೆ ಪ್ರಕರಣದಲ್ಲಿ ಹೊಸ ಬೆಳವಣಿಗೆ ಬೆಳಕಿಗೆ ಬಂದಿದೆ. ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿ ಸಾವಿರಾರು ಜನರಿಂದ ಸಂಗ್ರಹಿಸಿದ ಹಣವನ್ನು ನಟಿ ಸನ್ನಿ ಲಿಯೋನ್‌ ಸೇರಿದಂತೆ ಹಲವು ನಟ-ನಟಿಯರಿಗೆ ನೀಡಿರುವುದು ಸಿಐಡಿ ತನಿಖೆಯಿಂದ ಬಹಿರಂಗವಾಗಿದೆ.

- Advertisement -

ಸಿಐಡಿ ಡಿಐಜಿ ಭೀಮಾಶಂಕರ ಗುಳೇದ ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸನ್ನಿ ಲಿಯೋನ್ ಸೇರಿದಂತೆ ಸಿನಿಮಾ ನಟರಿಗೆ ನೀಲಣ್ಣವರ ಹಣ ಕೊಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅವರಿಗೆಲ್ಲ ನೋಟಿಸ್‌ ನೀಡಿ ವಿಚಾರಣೆಗೆ ಕರೆಯಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಂ ಅಸೋಸಿಯೇಟ್ಸ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಸಿಐಡಿ ತನಿಖೆ ನಡೆಸುತ್ತಿದೆ. ಸಾಮಾನ್ಯವಾಗಿ ತನಿಖೆ ನಡೆಯುವಾಗ ಸುದ್ದಿಗೋಷ್ಠಿ ಮಾಡುವುದಿಲ್ಲ. ಆದರೆ ಪ್ರಕರಣದ ಕುರಿತು ವಿವಿಧ ಊಹಾಪೋಹಗಳು ಹರಡುತ್ತಿರುವುದರಿಂದ ಸತ್ಯಾಂಶ ತಿಳಿಸಲು ಸುದ್ದಿಗೋಷ್ಠಿ ನಡೆಸಲಾಗಿದೆ ಎಂದು ಅವರು ಹೇಳಿದರು.

ಇನ್ನೂ ಆಶ್ಚರ್ಯದ ಸಂಗತಿಯೆಂದರೆ, ನೀಲಣ್ಣವರ ಬಂಧನದ ಬಳಿಕವೂ ಜನರು ಅವರ ಖಾತೆಗಳಿಗೆ ಹಣ ವರ್ಗಾವಣೆ ಮಾಡುತ್ತಲೇ ಇದ್ದಾರೆ. ಕಳೆದ 20 ದಿನಗಳಲ್ಲಿ 5 ಕೋಟಿ ರೂಪಾಯಿಗೂ ಅಧಿಕ ಹಣವನ್ನು ಅವರ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾರೂ ಹಣ ಹೂಡಿಕೆ ಮಾಡಬಾರದು ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.

ಶಿವಾನಂದ ನೀಲಣ್ಣವರ ಹಾಗೂ ಆದಿತ್ಯರಾಜ್ ಪ್ರಕರಣಗಳಲ್ಲಿ ಠೇವಣಿ ಸಂಗ್ರಹಿಸಲು ಯಾವುದೇ ಅಧಿಕೃತ ಅನುಮತಿ ಪಡೆದಿರಲಿಲ್ಲ. ಭಾರತದಲ್ಲಿ ಎಲ್ಲಿಯೂ ಶೇ.30 ಕ್ಕಿಂತ ಹೆಚ್ಚಿನ ಲಾಭ ನೀಡುವ ಕಂಪನಿಗಳಿಲ್ಲ. ಆದ್ದರಿಂದ ಸಾರ್ವಜನಿಕರು ಅತಿಯಾದ ಲಾಭದ ಆಮಿಷಕ್ಕೆ ಒಳಗಾಗಬಾರದು ಎಂದು ಡಿಐಜಿ ಮನವಿ ಮಾಡಿದರು.

ಹೊಸದಾಗಿ ಹೂಡಿಕೆ ಆದ ಹಣವನ್ನು ಹಳೆಯ ಹೂಡಿಕೆದಾರರಿಗೆ ಬಡ್ಡಿಯಾಗಿ ನೀಡುವ ರೀತಿಯಲ್ಲಿ ನೀಲಣ್ಣವರ ವ್ಯವಹಾರ ನಡೆಸುತ್ತಿದ್ದ. ಹೊಸ ಹೂಡಿಕೆದಾರರಿಂದ ಬಂದ ಹಣವನ್ನು ಹಳೆಯವರಿಗೆ ಹಂಚುವ ಮೂಲಕ ವ್ಯವಸ್ಥೆ ಮುಂದುವರಿದಿತ್ತು. ಹೊಸ ಹೂಡಿಕೆಗಳು ಬರುತ್ತಿರುವವರೆಗೆ ಈ ಚಕ್ರ ನಡೆಯುತ್ತಿತ್ತು ಎಂದು ಅಧಿಕಾರಿಗಳು ವಿವರಿಸಿದರು.

ಸಿಐಡಿ ತನಿಖೆಯ ಪ್ರಕಾರ, 40,700 ಹೂಡಿಕೆದಾರರಿಂದ ಸುಮಾರು ₹2,400 ಕೋಟಿ ಸಂಗ್ರಹಿಸಲಾಗಿದೆ. ಇದರಲ್ಲಿ ₹540 ಕೋಟಿ ಹಣವನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲಾಗಿದ್ದು, ಸುಮಾರು ₹170 ಕೋಟಿ ನಷ್ಟವಾಗಿದೆ. ₹660 ಕೋಟಿ ಹಣ ಶೇರಿಂಗ್ ಅಮೌಂಟ್ ರೂಪದಲ್ಲಿ ಹಾಗೂ ₹390 ಕೋಟಿ ಬೇರೆ ಮೂಲಗಳಿಂದ ವಾಪಸ್ ಪಡೆಯುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ನೀಲಣ್ಣವರ ಕಂಪನಿ ಹಣವನ್ನು ವೈಯಕ್ತಿಕ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದು, ಸುಮಾರು ₹55 ಕೋಟಿ ಹಣವನ್ನು ನೇರವಾಗಿ ವರ್ಗಾಯಿಸಲಾಗಿದೆ. ಎರಡು ಮರ್ಸಿಡಿಸ್, ಡಿಫೆಂಡರ್, ವರ್ನಾ ಹಾಗೂ 11 ವೋಲ್ಲೋ ಎಕ್ಸ್‌ಸಿ90 ಸೇರಿದಂತೆ ದುಬಾರಿ ವಾಹನಗಳನ್ನು ಖರೀದಿಸಲಾಗಿದೆ. ಕೆಲವು ವಾಹನಗಳು ಬೇರೆ ರಾಜ್ಯಗಳಲ್ಲಿ ನೋಂದಣಿಯಾಗಿದ್ದು, ಮಾಹಿತಿ ಕೋರಲಾಗಿದೆ. ವಶಪಡಿಸಿಕೊಂಡ ಆಸ್ತಿಗಳನ್ನು ಮಾರಾಟ ಮಾಡಿ ಹೂಡಿಕೆದಾರರಿಗೆ ಹಣ ಹಿಂತಿರುಗಿಸುವ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಲದೆ, ಕಂಪನಿಯಿಂದ ಹೆಚ್ಚುವರಿಯಾಗಿ ಲಾಭ ಪಡೆದವರಿಗೆ ಸಹ ನೋಟಿಸ್‌ ನೀಡಲಾಗುವುದು. ಸುಮಾರು ₹400 ಕೋಟಿ ಹಣ ಹೆಚ್ಚುವರಿಯಾಗಿ ಕೆಲವರಿಗೆ ಪಾವತಿಯಾಗಿರುವುದು ಪತ್ತೆಯಾಗಿದ್ದು, ಆ ಮೊತ್ತವನ್ನು ವಸೂಲಿ ಮಾಡುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಿಐಡಿ ತಿಳಿಸಿದೆ.

ಈವರೆಗೆ 20 ಸಾವಿರ ಠೇವಣಿದಾರರ ದಾಖಲೆಗಳನ್ನು ಪರಿಶೀಲಿಸಲಾಗಿದ್ದು, ಅವರಲ್ಲಿ ಸುಮಾರು 10 ಸಾವಿರ ಮಂದಿ ಮಹಾರಾಷ್ಟ್ರದವರಾಗಿದ್ದಾರೆ. ನೀಲಣ್ಣವರಿಗೆ ಸಂಬಂಧಿಸಿದ 30 ಬ್ಯಾಂಕ್ ಖಾತೆಗಳು ಪತ್ತೆಯಾಗಿದ್ದು, ಅವುಗಳಲ್ಲಿ 7 ಖಾತೆಗಳಲ್ಲಿ ಹೆಚ್ಚಿನ ಪ್ರಮಾಣದ ವಹಿವಾಟು ನಡೆದಿದೆ. ಒಂದು ಖಾತೆಯಲ್ಲೇ 36,200 ಪುಟಗಳಷ್ಟು ವಹಿವಾಟಿನ ದಾಖಲೆ ಪತ್ತೆಯಾಗಿದೆ ಎಂದು ಸಿಐಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಿತ್ತೂರು ತಲುಪುವ ಮುನ್ನವೇ ರೈತರೊಂದಿಗೆ ಡಿ.ಕೆ.ಶಿವಕುಮಾರ ಮಾತುಕತೆ

ಕಬ್ಬಿಗೆ ಸೂಕ್ತ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...