ಬೆಳಗಾವಿ | ಹೆಲಿಕಾಪ್ಟ‌ರ್ ದುರಂತದಲ್ಲಿ ಅಥಣಿ ಮೂಲದ ಸಿಸಿಬಿ ಇನ್ಸ್‌ಪೆಕ್ಟರ್‌ ಸೇರಿ ಆರು ಸಾವು

Date:

ಚಾ‌ರ್ ಧಾಮ್ ಯಾತ್ರೆಗೆ ತೆರಳಿದ್ದ ಬೆಂಗಳೂರಿನ ಸಿಸಿಬಿ ಇನ್ಸ್‌ಪೆಕ್ಟ‌ರ್ ಸೇರಿದಂತೆ ಆರು ಮಂದಿ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಪತನದಲ್ಲಿ ಮೃತಪಟ್ಟಿದ್ದಾರೆ.

- Advertisement -

ಬದರಿನಾಥದಿಂದ ಫಾಟಾ ಕಡೆಗೆ ತೆರಳುತ್ತಿದ್ದ ಹೆಲಿಕಾಪ್ಟ‌ರ್ ಜೋಶಿಮಠ ಸಮೀಪ ಪತನಗೊಂಡಿದೆ. ಹವಾಮಾನ ವೈಪರಿತ್ಯದಿಂದ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಕರ್ನಾಟಕದ ಐವರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಮೃತರನ್ನು ಬೆಂಗಳೂರಿನ ಸಿಸಿಬಿ ಇನ್ಸ್‌ಪೆಕ್ಟ‌ರ್ ಅರುಣ್ ಸಾಲಂಕೆ, ಶಂಕರ್ ಗೌಡ, ಕೆ. ಸುಧೀರ್, ಹೆಚ್‌.ಎಸ್‌. ನಟರಾಜ್ ಹಾಗೂ ಪ್ರತಾಪ್ ಎಂದು ಗುರುತಿಸಲಾಗಿದೆ.

ಮೃತ ಅರುಣ್‌ ಸಾಲಂಕೆ ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅರಟಾಳ ಗ್ರಾಮದ ಮೂಲದವರು. 2007ನೇ ಬ್ಯಾಚ್‌ನ ಪೊಲೀಸ್‌ ಅಧಿಕಾರಿಯಾಗಿದ್ದ ಅವರು ಬೆಂಗಳೂರಿನ ಅಪರಾಧ ವಿಭಾಗದ ಕೇಂದ್ರ ಅಪರಾಧ ಶಾಖೆ (ಸಿಸಿಬಿ)ಯಲ್ಲಿ ಇನ್ಸ್‌ಪೆಕ್ಟ‌ರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಚಾರ್ ಧಾಮ್ ಯಾತ್ರೆಗೆ ತೆರಳಿದ್ದ ಸಂದರ್ಭದಲ್ಲಿ ಸಂಭವಿಸಿದ ಈ ದುರಂತದಲ್ಲಿ ಅರುಣ್‌ ಸಾಲಂಕೆ ಮೃತಪಟ್ಟಿರುವ ಸುದ್ದಿ ಅವರ ಕುಟುಂಬಸ್ಥರು, ಬಂಧುಗಳು ಹಾಗೂ ಪೊಲೀಸ್‌ ಇಲಾಖೆಯಲ್ಲಿ ದುಃಖದ ಛಾಯೆ ಮೂಡಿಸಿದೆ.

IMG 20251111 WA0000
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಬ್ಬು ಬೆಳೆಗಾರರ ಸಭೆಯಿಂದ ಹೊರನಡೆದದ್ದು ಯಾಕೆ ಬಿಜೆಪಿ ಶಾಸಕರು?

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಸೋಮವಾರ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ...

ಬೆಳಗಾವಿ | ಅ. 29ರ ಸಭೆಯತ್ತ ಕಬ್ಬುಬೆಳೆಗಾರರ ಚಿತ್ತ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಸೋಮವಾರ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ...