ಬೆಳಗಾವಿ | ಇನಾಂ ಭೂಹಗರಣ ವಿರೋಧಿಸಿ ಸುವರ್ಣಸೌಧ ಚಲೋ ಪಾದಯಾತ್ರೆ

Date:

ಬೆಳಗಾವಿ ಜಿಲ್ಲೆಯ ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಮರಣಹೂಳ ಗ್ರಾಮದಲ್ಲಿ 1400 ಎಕರೆ ಇನಾಂ ಜಮೀನಿನ ಭೂಹಗರಣದ ವಿರುದ್ಧ ಅಲ್ಲಿನ ಜನರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಮರಣಹೂಳ ಗ್ರಾಮದಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಮರಣಹೂಳ ಗ್ರಾಮಸ್ಥರ ಜೊತೆಗೂಡಿ ಕೆಆರ್‌ಎಸ್ ಪಕ್ಷವು ಇದೇ‌ ಡಿಸೆಂಬರ್‌ 6ರಿಂದ ಪಾದಯಾತ್ರೆ ಆರಂಭಿಸಿದೆ.

ಹಗರಣದ ವಿವರ

“ಇನಾಂ ಜಮೀನು ಕಾಯ್ದೆ ಪ್ರಕಾರ ಸದರಿ ಇನಾಂ ಭೂಮಿಯನ್ನು ಖರೀದಿ ಅಥವಾ ಮಾರಾಟ ಮಾಡುವುದಕ್ಕೆ ಬರುವುದಿಲ್ಲ. ಆದುದರಿಂದ 19 ಜನ ಬೇರೆ ಜಿಲ್ಲೆಯವರು ವಂಚಕರು, ಬೃಹತ್ ಉದ್ಯಮಿಗಳು, ವೈದ್ಯರು, ಶ್ರೀಮಂತರು, ಸದರಿ ಗ್ರಾಮದಲ್ಲಿ ಎಂದೆಂದಿಗೂ ಬಂದು ವಾಸ ಮಾಡಿರುವುದಿಲ್ಲ, ಸದರಿ ಭೂಮಿಯನ್ನು ಎಂದೆಂದಿಗೂ ಉಳುಮೆ ಮಾಡಿರುವುದಿಲ್ಲ. ಆದರೆ ಉಳುಮೆ ಮಾಡುತ್ತಿದ್ದೇವೆ ಎಂಬುದಾಗಿ ಸುಳ್ಳು ಹೇಳಿ, ಕಂದಾಯ ಅಧಿಕಾರಿಗಳು ಹಾಗೂ 19 ಜನ ವಂಚಕರಲ್ಲಿ ಕೆಲವರು ಸುಳ್ಳು ದಾಖಲಾತಿ ಸೃಷ್ಟಿ ಮಾಡಿ, ಮೂಲ ಕಾಗದ ಪತ್ರಗಳನ್ನು ಹರಿದು ಹಾಕಿ, ಇನಾಮದಾರರ ನಕಲಿ ಸಹಿಯನ್ನು ತಯಾರಿಸಿ, ಭೂ ಸುಧಾರಣಾ ಕಾಯ್ದೆಯ ಕಲಂ 63,79ಎ,79ಬಿ ಉಲ್ಲಂಘನೆ ಮಾಡಿ ಜಮೀನು ಮಂಜೂರು ಮಾಡಿಕೊಂಡಿರುತ್ತಾರೆ” ಎಂದು ಗ್ರಾಮಸ್ಥರು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘ ಆಗ್ರಹ

“ಮರಣಹೂಳ ಗ್ರಾಮದ 1400 ಇನಾಂ ಜಮೀನಿನ ಕುರಿತು ವಿಶೇಷ ತನಿಖಾ ತಂಡ ರಚನೆ ಮಾಡಿ ಅಥವಾ ನ್ಯಾಯಾಂಗ ತನಿಖೆ ಮಾಡಿ , ಸದರಿ 1‌,400 ಎಕರೆ ಸಂಪೂರ್ಣ ಇನಾಂ ಭೂಮಿಯನ್ನು ಸರ್ಕಾರದ ವಶಕ್ಕೆ ತೆಗೆದುಕೊಂಡು ರೈತರಿಗೆ ನೀಡಬೇಕು” ಎಂದು ಕೆಆರ್‌ಎಸ್‌ ಪಕ್ಷದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದು ಕಣಬುರಗಿ ಸರ್ಕಾರಕ್ಕೆ ಒತ್ತಾಯಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ...

ರಾಯಚೂರು | ಎಸ್‌ಯುಸಿಐ ಅಭ್ಯರ್ಥಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಕೆ

ರಾಯಚೂರು-ಯಾದಗಿರಿ ಒಳಗೊಂಡ ರಾಯಚೂರು ಲೋಕಸಭಾ (ಪ.ಪಂ) ಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ...

ಗದಗ | ತಾಲೂಕು ಆಡಳಿತದಿಂದ ‘ಮೇವು ಬ್ಯಾಂಕ್’ ಆರಂಭ; ಕೆ.ಜಿಗೆ 2 ರೂ. ದರ ನಿಗದಿ

ಕೊಣ್ಣೂರು : ಜಾನುವಾರುಗಳಿಗೆ ಮೇವು ಕೊರತೆ ನೀಗಿಸಲು ತಾಲೂಕು ಆಡಳಿತದಿಂದ ಮೇವು...