ಬೆಳಗಾವಿ | ಸಮರ್ಪಕ ವಿದ್ಯುತ್ ಪೂರೈಕೆಗೆ ಸ್ವಾಭಿಮಾನಿ ರೈತ ಸಂಘ ಆಗ್ರಹ

Date:

ಸಮರ್ಪಕ ವಿದ್ಯುತ್ ನೀಡುವಂತೆ ಆಗ್ರಹಿಸಿ ಸ್ವಾಭಿಮಾನಿ ರೈತ ಸಂಘದ ಕಾರ್ಯಕರ್ತರು ಬೆಳಗಾವಿ ವಲಯ ಮುಖ್ಯ ಎಂಜಿನಿಯರ್‌ಗೆ ಮನವಿ ಸಲ್ಲಿಸಿದರು.

“ಬೆಳಗಾವಿ ಜಿಲ್ಲೆಯಲ್ಲಿ ಸರಿಯಾಗಿ ಮಳೆ ಆಗದಿರುವುದರಿಂದ ರೈತರು ಬೆಳೆದ ಬೆಳೆಯು ಒಣಗುತ್ತಿದ್ದು, ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಸರಿಯಾದ ಸಮಯಕ್ಕೆ ವಿದ್ಯುತ್ ನೀಡುವುದರಿಂದ ರೈತರಿಗೆ ಅನುಕೂಲವಾಗುತ್ತದೆ. ಆದ್ಧರಿಂದ ಸರಿಯಾಗಿ ವಿದ್ಯುತ್ ನೀಡಬೇಕು” ಎಂದು ಒತ್ತಾಯಿಸಿದರು.

“ರೈತರ ಹೊಲದ ಟಿ ಸಿಗಳು ಸುಟ್ಟಾಗ ಕೂಡಲೇ ಸರಿಪಡಿಸಿ ಹೊಸ ಟಿ ಸಿಗಳನ್ನು ಹಾಕಬೇಕು ಹಾಗೂ ಫ್ಯೂಜ್ ಹೋದಾಗ ರೈತರಿಂದ ಪ್ಯೂಜ್ ತರಿಸಿಕೊಳ್ಳುತ್ತಿದ್ಧಾರೆ‌. ಪ್ರಶ್ನೆ ಮಾಡಿದರೆ ಇಲಾಖೆಯಲ್ಲಿ ಪ್ಯೂಜ್ ಇಲ್ಲವೆಂದು ಉತ್ತರಿಸುತ್ತಿದ್ಧು, ಇದನ್ನು ನಿಲ್ಲಿಸಿ ರೈತರಿಗೆ ಅನೂಕೂಲ ಮಾಡಿಕೊಡಬೇಕು” ಎಂದು ಸ್ವಾಭಿಮಾನಿ ರೈತ ಸಂಘಟನೆಯ ಮುಖಂಡರು ಮನವಿ ಮಾಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ‘ಡ್ರಗ್ಸ್ ವಿರೋಧಿ ಜಾಗೃತಿ ಮಾಸ’ ಅಭಿಯಾನಕ್ಕೆ ಚಾಲನೆ

ರೈತ ಸಂಘಟನೆಯ ಮುಖಂಡ ಶಿವನಶಿಂಘ ಮೋಕಾಶಿ ಮಾತನಾಡಿ, “ರೈತರ ಬೇಡಿಕೆಗಳನ್ನು ಈಡೇರಿಸಬೇಕಾಗಿದೆ. ಅಧಿಕಾರಿಗಳೂ ರೈತರ ಬೇಡಿಕೆ ಈಡೇರಿಸುವುದಾಗಿ ಹೇಳಿದ್ಧಾರೆ. ಆದಷ್ಟು ಬೇಗನೆ ಬೇಡಿಕೆ ಈಡೇರಿಸಲಿ” ಎಂದು ಹೇಳಿದರು.

ಸಿದ್ಧಪ್ಪ ಜಳಕದ, ಈರಪ್ಪ ಗುಮ್ಮನಗೊಳ, ಪ್ರಸಾದ ಕುಲಕರ್ಣಿ, ವಿಶ್ವನಾಥ ಹಿಟ್ಟಿನ, ಯಲ್ಲಪ್ಪ ದೇವಲತ್ತಿ, ಮಂಜುನಾಥ, ಬೀರಪ್ಪ ದೇಶನೂರ, ಮಾರುತಿ ಕಮತಗಿ, ರಾಜು, ಕಲ್ಲಪ್ಪ, ವಿಶಾಲ, ನಾಗನಗೌಡ್ರ, ಚಂದ್ರಪ್ಪ, ನಾಗಪ್ಪ, ಸುರೇಶ ಸೇರಿದಂತೆ ಇತರರು ಇದ್ಧರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನೇಹಾ ಕೊಲೆ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಎಸ್‌ಎಫ್‌ಐ ಒತ್ತಾಯ 

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ವಿದ್ಯಾರ್ಥಿನಿ ನೇಹಾ ಎಂಬುವವರ ಹತ್ಯೆ ವಿರೋಧಿಸಿ, ತಪ್ಪಿತಸ್ಥ...

ವಿಜಯಪುರ | ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ ವಿದ್ಯಾರ್ಥಿ ಯುವಜನರ ಪ್ರಣಾಳಿಕೆ ಬಿಡುಗಡೆ 

ರಾಜ್ಯದಲ್ಲಿ ಒಟ್ಟು ಎಂಟು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ 2024ರ ಈ ಬಾರಿಯ...

ವಿಜಯಪುರ | ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಭೆ

ರಾಜ್ಯದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌ ಕೆ ಶಿವಕುಮಾರ್,...

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ: ಸದಾಶಿವ ಉಳ್ಳಾಲ್ ವಿಶ್ವಾಸ

ಉಳುವವನೇ ಭೂಮಿಯೊಡೆಯ, ಲೋನ್ ಮೇಳ, ಬ್ಯಾಂಕ್ ರಾಷ್ಟ್ರೀಕರಣ, ಮಂಗಳೂರಿಗೆ ಎನ್‌ಎಂಪಿಟಿ, ವಿಮಾನ...