ಬೆಳಗಾವಿ ಹಿಂಡಲಗಾ ಜೈಲಿನ 15 ಕತ್ತಲು ಕೋಣೆಗಳು ಖಾಲಿ: ದರ್ಶನ್ ಸ್ಥಳಾಂತರ ಸಾಧ್ಯತೆ

Date:

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಹಿನ್ನೆಲೆಯಲ್ಲಿ ನಟ ದರ್ಶನ್‌ನನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡುತ್ತಾರಾ ಎಂಬ ಮಾತು ಕೇಳಿ ಬರುತ್ತಿದೆ.

- Advertisement -

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿರುವ ಫೋಟೊ, ವಿಡಿಯೋ ವೈರಲ್ ಆಗಿರುವ ಬೆನ್ನಲ್ಲೇ ಬಂಧಿಖಾನೆ ಇಲಾಖೆ ಎಚ್ಚೆತ್ತುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ದರ್ಶನ್‌ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆ ಜೈಲಿಗೆ ಸ್ಥಳಾಂತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಹೀಗಾಗಿ ಬೆಳಗಾವಿ ಜೈಲಿಗೆ ದರ್ಶನ್‌ ಸ್ಥಳಾಂತರವಾಗಲಿದ್ದಾರೆ ಎನ್ನಲಾಗುತ್ತಿದೆ.

ಶತಮಾನಗಳ ಇತಿಹಾಸ ಇರುವ ಹಿಂಡಲಗಾ ಜೈಲಿನಲ್ಲಿ 15 ಕತ್ತಲು ಕೋಣೆಗಳು(ಅಂಧೇರಿ ಸೆಲ್‌ಗಳು) ಇವೆ. ಯಾವುದೇ ಕ್ಷಣದಲ್ಲಾದರೂ ಬಂಧಿಖಾನೆ ಮೇಲಧಿಕಾರಿಗಳಿಂದ ಕೋಣೆಗಳ ಮಾಹಿತಿ ಕೇಳುವ ಸಾಧ್ಯತೆ ಇದ್ದು, ಈ ಬಗ್ಗೆ ಅಧಿಕಾರಿಗಳೂ ಮಾಹಿತಿ ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ದರ್ಶನ್‌ ಫೋಟೊವನ್ನು ಬಹಿರಂಗಪಡಿಸಿದ್ದು ಜೈಲಿನಲ್ಲಿದ್ದ ಮತ್ತೊಬ್ಬ ಪಾತಕಿ

ನಟ ದರ್ಶನ್ ಬೆಳಗಾವಿ ಜೈಲಿಗೋ ಅಥವಾ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಳ್ಳುವ ಬಗ್ಗೆ ಇಂದು (ಸೋಮವಾರ) ಸಂಜೆಯೊಳಗೆ ಪ್ರಕಟವಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಅಧಿಕಾರಿಗಳು ಅಮಾನತು

ಕೊಲೆ ಆರೋಪಿ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ವಿಐಪಿ ಸೌಲಭ್ಯ ನಡೆಸುತ್ತಿರುವ ಫೋಟೋ ವಿಡಿಯೋಗಳು ವೈರಲ್ ಆದ ನಂತರ ಏಳು ಮಂದಿ ಜೈಲು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಗೃಹ ಸಚಿವ ಜಿ ಪರಮೇಶ್ವರ್ ಅವರು, ಘಟನೆ ಹೇಗೆ ನಡೆಯಿತು ಎಂದು ವರದಿ ಕೇಳಿದ್ದೇನೆ. ಇದರಲ್ಲಿ ಏಳು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ವರದಿ ಬಂದಿದೆ. ಶರಣ ಬಸವ ಅಮೀನಗಡ, ಪ್ರಭು, ತಿಪ್ಪೇಸ್ವಾಮಿ, ವೆಂಕಪ್ಪ ಕೊರ್ಟಿ, ಸಂಪತ್ ಕುಮಾರ್, ಶ್ರೀಕಾಂತ್ ತಲವಾರ್, ಬಸಪ್ಪ ತೇಲಿ ಇವರನ್ನು ಅಮಾನತು ಮಾಡಿದ್ದೇವೆ. ಜೈಲು ಸೂಪರಿಂಟೆಂಡೆಂಟ್ ಅವರನ್ನು ವರ್ಗಾವಣೆ ಮಾಡುತ್ತೇವೆ. ಈ ರೀತಿಯ ಘಟನೆ ನಡೆಯಬಾರದು. ಹಿರಿಯ ಅಧಿಕಾರಿಗಳು ತಪ್ಪು ಮಾಡಿದ್ದರೆ ಅವರ ಮೇಲೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...