ಮರಾಠಿ ಪುಂಡರನ್ನು ಬಂಧಿಸದಿದ್ದರೆ ಪರಿಣಾಮ ಭೀಕರ: ಕರವೇ ಅಧ್ಯಕ್ಷ ನಾರಾಯಣಗೌಡ ಎಚ್ಚರಿಕೆ

Date:

Advertisements

ಕನ್ನಡದಲ್ಲಿ ಮಾತನಾಡಿದ್ದಕ್ಕೆ, ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಮಹದೇವ ಎಂಬ ಬಸ್ ನಿರ್ವಾಹಕರ ಮೇಲೆ ಮರಾಠಿ ಪುಂಡರು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿ ಪೊಲೀಸರು ಮಹದೇವ ಅವರ ಮೇಲೆ ಹಲ್ಲೆ ನಡೆಸಿದ ಪ್ರತಿಯೊಬ್ಬನನ್ನೂ ಬಂಧಿಸಿ ಜೈಲಿಗೆ ಕಳುಹಿಸಬೇಕು. ಇಲ್ಲವಾದಲ್ಲಿ ಇದರ ಪರಿಣಾಮ ಭೀಕರವಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಎಚ್ಚರಿಸಿದ್ದಾರೆ.

ಕನ್ನಡಿಗರು ಸೌಹಾರ್ದಪ್ರಿಯರು, ಶಾಂತಿಪ್ರಿಯರು. ಹಾಗಂದ ಮಾತ್ರಕ್ಕೆ ನಮ್ಮ ಮೇಲೆ ವಿನಾಕಾರಣ ಹಲ್ಲೆ ನಡೆಸುವ ಭಾಷಾಂಧರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿಯನ್ನು ಕಿತ್ತುಕೊಳ್ಳಲು ನಡೆಸಿದ ಪ್ರಯತ್ನಗಳೆಲ್ಲ ವಿಫಲವಾದ ಮೇಲೆ ಹತಾಶರಾಗಿರುವ ಭಾಷಾಂಧ ಮರಾಠಿಪುಂಡರು ಈಗ ಕನ್ನಡಿಗರ ಮೇಲೆ ಕೈಮಾಡುವ ನೀಚ ಕೃತ್ಯಕ್ಕೆ ಇಳಿದಿದ್ದಾರೆ. ಪೊಲೀಸರು ಇವರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಕನ್ನಡಿಗರ ಸಿಟ್ಟು ರಟ್ಟೆಗೆ ಬರುತ್ತದೆ. ಅಂಥ‌ ಸಂಘರ್ಷಕ್ಕೆ ಎಡೆ ಮಾಡಿಕೊಡದೇ ಪುಂಡರನ್ನು ಮೊದಲು ಬಂಧಿಸಲಿ” ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

“ಹಲ್ಲೆಗೊಳಗಾದ ಮಹದೇವ ಅವರು ಬೇಗ ಗುಣಮುಖರಾಗಲಿ, ಅವರೊಂದಿಗೆ ಕರ್ನಾಟಕ ರಕ್ಷಣಾ‌ ವೇದಿಕೆ ಇರುತ್ತದೆ. ಈಗಾಗಲೇ ನಮ್ಕ ಕರವೇ ಬೆಳಗಾವಿ ಜಿಲ್ಲಾಧ್ಯಕ್ಷರಾದ ದೀಪಕ್ ಗುಡಗನಟ್ಟಿ ಸೇರಿದಂತೆ ನಮ್ಮ ಪದಾಧಿಕಾರಿಗಳು ಮಹದೇವ ಅವರನ್ನು ಭೇಟಿ ಮಾಡಿ ಸಾಂತ್ವನ‌ ಹೇಳಿದ್ದಾರೆ, ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಕೆಎಸ್ ಆರ್ ಟಿಸಿ ಚಾಲಕರು, ನಿರ್ವಾಹಕರು ಈ ಘಟನೆಯಿಂದ ಧೃತಿಗೆಡುವ ಅವಶ್ಯಕತೆ ಇಲ್ಲ. ಇಂಥ ಹೇಡಿಗಳಿಗೆ ಬೆದರುವ ಅಗತ್ಯವೂ ಇಲ್ಲ” ಎಂದಿದ್ದಾರೆ.

Advertisements

“ಕರ್ನಾಟಕದ ನೆಲದಲ್ಲಿ ಬದುಕುವವರು ಕನ್ನಡ ಕಲಿತು ಕನ್ನಡಿಗರಾಗಿ ಬಾಳಬೇಕು. ಅದನ್ನು ಹೊರತುಪಡಿಸಿ ತಮ್ಮ ಭಾಷೆ ಕಲಿಯಿರಿ ಎಂದು ತಾಕೀತು ಮಾಡಿ ದೌರ್ಜನ್ಯ ನಡೆಸಲು ಹೊರಟರೆ ಅಂಥವರಿಗೆ ಕರ್ನಾಟಕ ರಕ್ಷಣಾ‌ ವೇದಿಕೆ ತಕ್ಕ ಪಾಠ ಕಲಿಸಲಿದೆ. ಇದು ನನ್ನ ನೇರವಾದ ಎಚ್ಚರಿಕೆ” ಎಂದು ತಿಳಿಸಿದ್ದಾರೆ.

ಏನಿದು ಘಟನೆ

ಟಿಕೆಟ್ ಕೊಡುವಾಗ ಮರಾಠಿ ಬರಲ್ಲ, ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಬಸ್ ಕಂಡಕ್ಟರ್ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ತಾಲೂಕಿನ ಸುಳೇಬಾವಿ ಬಾಳೇಕುಂದ್ರಿ ಗ್ರಾಮದ ಬಳಿ ನಡೆದಿದೆ.

ಬಸ್ ಕಂಡಕ್ಟರ್ ಮಹದೇವ್ ಮೇಲೆ ಮರಾಠಿ ಯುವಕರ ಗುಂಪಿನಿಂದ ಹಲ್ಲೆ ನಡೆದಿದೆ. ಬಸ್‌ನಲ್ಲಿದ್ದ ಯುವತಿ, ಕಂಡಕ್ಟರ್ ಮಹದೇವಗೆ ಟಿಕೆಟ್ ಕೊಡುವಂತೆ ಮರಾಠಿಯಲ್ಲಿ ಹೇಳಿದ್ದಾಳೆ. ಯುವತಿಯೊಂದಿಗೆ ಯುವಕನೊಬ್ಬ ಪ್ರಯಾಣ ಮಾಡುತ್ತಿದ್ದರಿಂದ ಎರಡು ಟಿಕೆಟ್ ಕೇಳಿದ್ದಾಳೆ. ಮರಾಠಿ ಬರುವುದಿಲ್ಲ ನನಗೆ ಕನ್ನಡದಲ್ಲಿ ಹೇಳುವಂತೆ ಕಂಡಕ್ಟರ್ ಹೇಳಿದ್ದಾನೆ. ಇಷ್ಟಕ್ಕೆ ಜನರನ್ನ ಕರೆಸಿ ಚಲಿಸುತ್ತಿರುವ ಬಸ್ ನಿಲ್ಲಿಸಿ ಹಲ್ಲೆ ಮಾಡಿಸಿದ್ದಾರೆ.

ಹಲ್ಲೆಗೆ ಒಳಗಾದ ಕಂಡಕ್ಟರ್ ಪೊಲೀಸ್ ಠಾಣೆಗೆ ಹೋಗಿ ದೂರು ಕೊಟ್ಟಿದ್ದಾರೆ. ಹಲ್ಲೆಗೊಳಗಾದ ಕಂಡಕ್ಟರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X