ತಾಲ್ಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ವಾಯವ್ಯ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕ ಮತ್ತು ಚಾಲಕ ಮೇಲಿನ ಹಲ್ಲೆ ಪ್ರಕರಣದಿಂದಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಬಸ್‌ಗಳ ಸಂಚಾರ ವ್ಯತ್ಯಯವಾಗಿದೆ. ಶನಿವಾರ ಸಂಜೆ 7ರ ಬಳಿಕ ಎರಡೂ ಕಡೆಯ ಬಸ್‌ಗಳ ಸಂಚಾರ ಗಡಿಯವರೆಗೆ ಮಾತ್ರ ಸೀಮಿತಗೊಂಡಿದೆ.
ಬೆಳಗಾವಿಯಿಂದ ಮಹಾರಾಷ್ಟ್ರದ ವಿವಿಧ ನಗರಗಳಿಗೆ ನಿತ್ಯ 90 ಬಸ್ ಸಂಚರಿಸುತ್ತಿದ್ದವು. ಆದರೆ, ಪೊಲೀಸರ ಸೂಚನೆ ಮೇರೆಗೆ ವಾಯವ್ಯ ಸಾರಿಗೆ ಸಂಸ್ಥೆಯವರು ಸಂಜೆ 7ಕ್ಕೆ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಿದರು. ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿಯವರೆಗೆ (ಕರ್ನಾಟಕ–ಮಹಾರಾಷ್ಟ್ರ ಗಡಿಯವರೆಗೆ) ಮಾತ್ರ ಬಸ್ ಹೋಗುತ್ತಿವೆ.
ಬೆಳಗಾವಿ ವಿಭಾಗದಿಂದ ಒಟ್ಟು 90 ಮತ್ತು NWKRTC ಯ ಚಿಕ್ಕೋಡಿ ವಿಭಾಗದಿಂದ 125 ಬಸ್‌ಗಳು ಮಹಾರಾಷ್ಟ್ರಕ್ಕೆ ಸಂಚರಿಸುತ್ತವೆ. MSRTC ಯ ಇಪ್ಪತ್ತು ಬಸ್‌ಗಳು ಬೆಳಗಾವಿ ವಿಭಾಗಕ್ಕೆ ಮತ್ತು 70 ಬಸ್‌ಗಳು ಚಿಕ್ಕೋಡಿ ವಿಭಾಗಕ್ಕೆ ಚಲಿಸುತ್ತವೆ.
ಶುಕ್ರವಾರದಂದು, ಮಹಾರಾಷ್ಟ್ರದ ಗಡಿಯಲ್ಲಿರುವ ಬೆಳಗಾವಿ ಜಿಲ್ಲಾ ಕೇಂದ್ರ ಪಟ್ಟಣದ ಹೊರವಲಯದಲ್ಲಿ, ಮರಾಠಿಯಲ್ಲಿ ಪ್ರಯಾಣಿಕರೊಂದಿಗೆ ಮಾತನಾಡದಿದ್ದಕ್ಕಾಗಿ ಕರ್ನಾಟಕ ಸಾರಿಗೆ ನಿಗಮದ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಲಾಗಿತ್ತು ಎಂದು ಆರೋಪಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ದೇವರು ಬೇಕಿಲ್ಲ – ಇಚ್ಛಾಶಕ್ತಿ ಸಾಕು
‘ಮಹಾ’ ಬಸ್ ಚಾಲಕನಿಗೆ ಮಸಿ: 8 ಜನರ ಬಂಧನ
ಮರಾಠಿ ಮಾತನಾಡಲು ಬರುವುದಿಲ್ಲ ಎಂದು ಹೇಳಿದ್ದಕ್ಕೆ ಬೆಳಗಾವಿಯಲ್ಲಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ನವ ನಿರ್ಮಾಣ ಸೇನೆ ಕಾರ್ಯಕರ್ತರು ಶುಕ್ರವಾರ ರಾತ್ರಿ ಚಿತ್ರದುರ್ಗದ ಹಿರಿಯೂರಿನ ರಾಷ್ಟ್ರೀಯ ಹೆದ್ದಾರಿ– 48ರ ಗುಯಿಲಾಳ ಟೋಲ್ ಬಳಿ ಪ್ರತಿಭಟನೆ ನಡೆಸಿದರು.
ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ವಾಹನ ತಡೆದು, ಚಾಲಕ ಹರಿ ಜಾಧವ್ ಅವರ ಮುಖಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಇಡೀ ಬಸ್‌ಗೆ ಕಪ್ಪುಬಣ್ಣ ಸ್ಪ್ರೇ ಮಾಡಿದರು. ‘ಜೈ ಕರ್ನಾಟಕ, ಜೈ ಕನ್ನಡ, ಬೆಳಗಾವಿ ನಮ್ಮದು, ಮರಾಠಿಗರು ಪುಂಡಾಟಿಕೆ ನಿಲ್ಲಿಸಬೇಕು’ ಎಂದು ಬಸ್ ಮೇಲೆ ಬರೆದು ಪ್ರತಿಭಟಿ ಸಿದರು. ಈ ಸಂಬಂಧ ಚಾಲಕ ಹರಿ ಜಾಧವ್ ಅವರು, ಐಮಂಗಲ ಠಾಣೆಗೆ ದೂರು ನೀಡಿದ್ದರಿಂದ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪೇಸ್ವಾಮಿ ಹಾಗೂ ಮುಖಂಡ ಲಕ್ಷ್ಮಿಕಾಂತ್ ಸೇರಿ ಎಂಟು ಮಂದಿಯನ್ನು ಬಂಧಿಸಿದರು.
