ಬೆಳಗಾವಿ | ದಿ ಹಿಂದೂ ಪತ್ರಿಕೆಯ ಹೃಷಿಕೇಶ ದೇಸಾಯಿ ಸೇರಿ ಜಿಲ್ಲೆಯ 13 ಮಾಧ್ಯಮ ಪ್ರತಿನಿಧಿಗಳಿಗೆ ರಾಜ್ಯೋತ್ಸವ ಸನ್ಮಾನ

Date:

ದಿ ಹಿಂದೂ ಪತ್ರಿಕೆಯ ಹಿರಿಯ ಸಹಾಯಕ ಸಂಪಾದಕರಾದ ಹೃಷಿಕೇಶ ಬಹದ್ದೂರ ದೇಸಾಯಿ ಸೇರಿದಂತೆ ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಜಿಲ್ಲೆಯ 13 ಜನ ಮಾಧ್ಯಮ ಪ್ರತಿನಿಧಿಗಳನ್ನು ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಬೆಳಗಾವಿ ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲು ನಿರ್ಧರಿಸಲಾಗಿದೆ.

- Advertisement -

ಸನ್ಮಾನಿತರ ವಿವರ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಮುದ್ರಣ ಮಾಧ್ಯಮ ವಿಭಾಗ: ದಿ ಹಿಂದೂ ಪತ್ರಿಕೆಯ ಹಿರಿಯ ಸಹಾಯಕ ಸಂಪಾದಕರಾದ ಹೃಷಿಕೇಶ ಬಹದ್ದೂರ ದೇಸಾಯಿ, ಕನ್ನಡಪ್ರಭ ದಿನಪತ್ರಿಕೆಯ ಸ್ಥಾನಿಕ ಸಂಪಾದಕರಾದ ಬ್ರಹ್ಮಾನಂದ ಹಡಗಲಿ, ಪ್ರಜಾವಾಣಿಯ ಜಿಲ್ಲಾ ವರದಿಗಾರರಾದ ಇಮಾಮಹುಸೇನ್ ಗೂಡುನವರ ಹಾಗೂ ಲೋಕದರ್ಶನ ದಿನಪತ್ರಿಕೆಯ ಛಾಯಾಗ್ರಾಹಕರಾದ ವಿಶ್ವನಾಥ ದೇಸಾಯಿ.

ವಿದ್ಯುನ್ಮಾನ ಮಾಧ್ಯಮ ವಿಭಾಗ: ಆರ್. ಕನ್ನಡದ
ಜಿಲ್ಲಾ ವರದಿಗಾರರಾದ ಮೈಲಾರಿ ಪಟಾತ್, ಚಿಕ್ಕೋಡಿಯ ನ್ಯೂಸ್ 18 ವರದಿಗಾರರಾದ ಲೋಹಿತ್ ಶಿರೋಳ, ಸುವರ್ಣ ನ್ಯೂಸ್ ಕ್ಯಾಮರಾಮನ್‌ ಅಡಿವೆಪ್ಪ ಪಾಟೀಲ ಹಾಗೂ ಟಿವಿ9 ಸಂಸ್ಥೆಯ ಕ್ಯಾಮರಾಮನ್‌ ಸದಾಶಿವ ಜಾಧವ.

ಪ್ರಾದೇಶಿಕ ದಿನಪತ್ರಿಕೆ ಸಂಪಾದಕರ ವಿಭಾಗ:

ಲೋಕದರ್ಶನ ದಿನಪತ್ರಿಕೆಯ ಸಂಪಾದಕರಾದ ಶರತಚಂದ್ರ ದೇಸಾಯಿ ಹಾಗೂ ಕನ್ನಡಮ್ಮ ದಿನಪತ್ರಿಕೆಯ ಸಂಪಾದಕರಾದ ರಾಜಕುಮಾ‌ರ್ ಟೋಪಣ್ಣವರ.

ತಾಲೂಕು ವರದಿಗಾರರ ವಿಭಾಗ: ವಿಜಯವಾಣಿ

ದಿನಪತ್ರಿಕೆಯ ಅಥಣಿ ವರದಿಗಾರರಾದ ರಾಜು ಗಾಲಿ ಹಾಗೂ ಕನ್ನಡಪ್ರಭ ದಿನಪತ್ರಿಕೆಯ ಯಮಕನಮರಡಿ ವರದಿಗಾರರಾದ ಕೆ.ಎಂ. ಕರ್ನಾಚಿ.

ಪತ್ರಿಕಾ ವಿತರಕರ ವಿಭಾಗ: ಯಮಕನಮರಡಿಯ ಪತ್ರಿಕಾ ವಿತರಕರಾದ ಭೀಮಪ್ಪ ಕೋತೆಕರ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರ ಅಧ್ಯಕ್ಷತೆಯಲ್ಲಿ ಹಿರಿಯ ಪತ್ರಕರ್ತರನ್ನು ಒಳಗೊಂಡ ಆಯ್ಕೆ ಸಮಿತಿಯು ಇತ್ತೀಚೆಗೆ ನಡೆದ ಸಭೆಯಲ್ಲಿ ಸನ್ಮಾನಿತರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದೆ.

ನವೆಂಬರ್ 1, 2026ರಂದು ಬೆಳಿಗ್ಗೆ 9 ಗಂಟೆಗೆ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಗಣ್ಯರು ಆಯ್ಕೆಯಾದ 13 ಮಾಧ್ಯಮ ಪ್ರತಿನಿಧಿಗಳನ್ನು ಸನ್ಮಾನಿಸಲಿದ್ದಾರೆ.

IMG 20251111 WA0000
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಭೀಕರ ಅಪಘಾತ: ದಂಪತಿ ಸೇರಿ ಮೂವರ ಸಾವು ಟಾಟಾ ಏಸ್‌ ಡಿಕ್ಕಿಯಾಗಿ ದುರಂತ

ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ದೇಮಟ್ಟಿ-ಮಲ್ಲಾಪುರ ಬಳಿ ಸೋಮವಾರ ಮಧ್ಯರಾತ್ರಿ...