ಬೆಳಗಾವಿ | ಗಡಿಗೆಯಲ್ಲಿ ಸಿಕ್ಕ 14 ಚಿನ್ನದ ನಾಣ್ಯಗಳು: ಅಧಿಕಾರಿಗಳಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಕೂಲಿ ಕಾರ್ಮಿಕರು

Date:

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ಕೂಲಿ ಕಾರ್ಮಿಕರಿಗೆ ಗಂಗರ ಕಾಲಕ್ಕೆ ಸೇರಿವೆ ಎನ್ನಲಾದ 14 ಚಿನ್ನದ ನಾಣ್ಯಗಳು ಪತ್ತೆಯಾಗಿದ್ದು, ಗ್ರಾಮದಲ್ಲಿ ಕುತೂಹಲ ಮೂಡಿಸಿದೆ.

- Advertisement -

ಬಿಸಿಎಂ ಹಾಸ್ಟೆಲ್‌ ಸಮೀಪ ಕೆಲಸ ಮಾಡುತ್ತಿದ್ದ ವೇಳೆ ಕೂಲಿ ಕಾರ್ಮಿಕರಿಗೆ ಗಡಿಗೆಯೊಂದು ಸಿಕ್ಕಿದೆ. ಗಡಿಗೆಯನ್ನು ಪರಿಶೀಲಿಸಿದಾಗ ಅದರೊಳಗೆ 14 ಚಿನ್ನದ ನಾಣ್ಯಗಳು ಪತ್ತೆಯಾಗಿವೆ. ಒಟ್ಟು 54.8 ಗ್ರಾಂ ತೂಕ ಹೊಂದಿರುವ ನಾಣ್ಯಗಳ ಮೌಲ್ಯ ಸುಮಾರು ₹8.27 ಲಕ್ಷ ಎಂದು ಅಂದಾಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ನಾಣ್ಯಗಳು ಸಿಕ್ಕ ಕೂಡಲೇ ಕಾರ್ಮಿಕರು ಅವುಗಳನ್ನು ತಮ್ಮಲ್ಲೇ ಇಟ್ಟುಕೊಳ್ಳದೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಪಿಡಿಒ ಹಾಗೂ ತಾಲೂಕು ಪಂಚಾಯಿತಿ ಸಿಬ್ಬಂದಿ ಸಮ್ಮುಖದಲ್ಲಿ ನಾಣ್ಯಗಳನ್ನು ಸವದತ್ತಿ ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ ಅವರಿಗೆ ಹಸ್ತಾಂತರಿಸಲಾಯಿತು. ಬಳಿಕ ತಹಶೀಲ್ದಾ‌ರ್ ಅವರು ನಾಣ್ಯಗಳನ್ನು ಖಜಾನೆಗೆ ಒಪ್ಪಿಸಿದ್ದಾರೆ.

ನಾಣ್ಯದ ಮೇಲಿರುವ ಆನೆಯ ಚಿತ್ರ!

ಪತ್ತೆಯಾದ ಚಿನ್ನದ ನಾಣ್ಯಗಳ ಮೇಲ್ಬಾಗದಲ್ಲಿ ಆನೆಯ ಚಿತ್ರವಿರುವುದು ಗಮನ ಸೆಳೆದಿದೆ. ತಲಕಾಡಿನ ಗಂಗರ ರಾಜಲಾಂಛನ ಆನೆಯಾಗಿದ್ದ ಹಿನ್ನೆಲೆಯಲ್ಲಿ, ಈ ನಾಣ್ಯಗಳು ಗಂಗರ ಕಾಲಕ್ಕೆ ಸಂಬಂಧಿಸಿರಬಹುದೇ ಎಂಬ ಚರ್ಚೆ ಆರಂಭವಾಗಿದೆ.

ನಾಣ್ಯಗಳು ಕ್ರಿ.ಶ. 10ರಿಂದ 15ನೇ ಶತಮಾನಕ್ಕೆ ಸೇರಿದವು ಎಂಬ ಮಾಹಿತಿ ಲಭ್ಯವಾಗಿದ್ದು, ಅವುಗಳ ನಿಖರ ಕಾಲಘಟ್ಟ ಮತ್ತು ಐತಿಹಾಸಿಕ ಹಿನ್ನೆಲೆಯನ್ನು ಖಚಿತಪಡಿಸಲು ಹೆಚ್ಚಿನ ಪರಿಶೀಲನೆ ಅಗತ್ಯವಿದೆ.

ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ನಾಣ್ಯಗಳು ಕೈಗೆ ಸಿಕ್ಕರೂ ಅವುಗಳನ್ನು ಅಧಿಕಾರಿಗಳಿಗೆ ಒಪ್ಪಿಸಿದ ಕೂಲಿ ಕಾರ್ಮಿಕರ ಪ್ರಾಮಾಣಿಕತೆಗೆ ತಾಲೂಕು ಆಡಳಿತ ಮೆಚ್ಚುಗೆ ವ್ಯಕ್ತಪಡಿಸಿದೆ. ಅಪರೂಪದ ಚಿನ್ನದ ನಾಣ್ಯಗಳ ಪತ್ತೆ ಇದೀಗ ಇಂಚಲ ಗ್ರಾಮ ಮಾತ್ರವಲ್ಲದೆ ಸವದತ್ತಿ ತಾಲೂಕಿನಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...