ಬೆಳಗಾವಿ : ಅಯ್ಯಪ್ಪ ಸ್ವಾಮಿ ಮಾಲೆ ಧರಿಸಲು ಅವಕಾಶ ನೀಡಲಿಲ್ಲವೆಂದು 14 ವರ್ಷದ ಬಾಲಕ ಆತ್ಮಹತ್ಯೆ

Date:

ಅಯ್ಯಪ್ಪ ಸ್ವಾಮಿ ಮಾಲೆ ಧರಿಸಲು ಮನೆಯವರು ಒಪ್ಪಿಗೆ ನೀಡಲಿಲ್ಲವೆಂದು ಮನನೊಂದು 14 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗಡದ ಕೇರಿ ಗ್ರಾಮದಲ್ಲಿ ನಡೆದಿದೆ.

- Advertisement -

ಧರಣೇಶ ಹಲಗೆ (14) ಮೃತ ಬಾಲಕ. ಅಯ್ಯಪ್ಪ ಸ್ವಾಮಿ ವೃತ ಆಚರಿಸುವ ಆಸೆಯಿಂದ ಈ ಬಾರಿ ಮಾಲೆ ಧರಿಸುವುದಾಗಿ ಮನೆಯವರಲ್ಲಿ ಕೇಳಿಕೊಂಡಿದ್ದ. ಆದರೆ ಬಾಲಕ ಹಾಸ್ಟೆಲ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವುದರಿಂದ ಹಾಗೂ ಚಿಕ್ಕ ವಯಸ್ಸಿನಲ್ಲಿ ಕಠಿಣ ವೃತ ಆಚರಣೆ ಕಷ್ಟಕರವೆಂದು ತಾಯಿ ನಿರಾಕರಿಸಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಕಳೆದ ವರ್ಷ ಧರಣೇಶ ತನ್ನ ತಂದೆಯ ಜೊತೆಗೆ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ್ದ. ಆದರೆ ದುರದೃಷ್ಟವಶಾತ್ ಬಾಲಕನ ತಂದೆ ಮೃತಪಟ್ಟಿದ್ದು ಇನ್ನೂ ವರ್ಷವೂ ಪೂರೈಸಿಲ್ಲ. ಈ ವರ್ಷ ಶಬರಿಮಲೆಗೆ ಕರೆದೊಯ್ಯಲು ಯಾರೂ ಇಲ್ಲದೆ ಇರುವ ಕಾರಣ ಮಾಲೆ ಧರಿಸುವುದು ಬೇಡವೆಂದು ತಾಯಿ ಬುದ್ಧಿವಾದ ಹೇಳಿದ್ದಾಳೆ ಎನ್ನಲಾಗಿದೆ.

ಬೆಳಗಾವಿ : ಸೆಂಟ್ರಲ್ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ

ಮನೆಯವರಿಂದ ಅನುಮತಿ ಸಿಗಲಿಲ್ಲವೆಂದು ಮನನೊಂದ ಧರಣೇಶ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳೀಯರು ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮನೆಯವರ ಆಕ್ರಂದನ ಮುಗಿಲು ಮುಟ್ಟಿದ್ದು, “ಮಾಲೆ ಹಾಕಬೇಡ ಎಂದಿದ್ದಕ್ಕೆ ಮಗ ಇಂತಹ ನಿರ್ಧಾರ ತೆಗೆದುಕೊಳ್ಳುತ್ತಾನೆ ಎಂದು ಕನಸಲ್ಲೂ ಊಹಿಸಿರಲಿಲ್ಲ” ಎಂದು ತಾಯಿ ಕಣ್ಣೀರಿಟ್ಟ ದೃಶ್ಯ ಮನ ಕಲಕುವಂತಿತ್ತು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...