ಬೆಳಗಾವಿ | ರೈತರಿಗೆ ಸಬ್ಸಿಡಿ ದರದಲ್ಲಿ 20,000 ಹಸುಗಳ ವಿತರಣೆ

Date:

ವಿಶ್ವ ಪಶುವೈದ್ಯಕೀಯ ದಿನಾಚರಣೆಯ ಅಂಗವಾಗಿ ನಗರದಲ್ಲಿ ಕಾಲು-ಬಾಯಿ ರೋಗ (FMD) ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ರೈತರಿಗೆ ಅನುಕೂಲವಾಗುವ ಮಹತ್ವದ ಯೋಜನೆಯನ್ನು ಘೋಷಿಸಿದೆ.

- Advertisement -

ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಮಾತನಾಡಿ, ಬೆಳಗಾವಿ ಮತ್ತು ಕಲಬುರಗಿ ಜಿಲ್ಲೆಗಳ ರೈತರಿಗೆ ಶೇ.25ರ ಸಬ್ಸಿಡಿಯೊಂದಿಗೆ ಸುಮಾರು 20 ಸಾವಿರ ಹಸುಗಳನ್ನು ವಿತರಿಸುವ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು. ಗ್ರಾಮೀಣ ಭಾಗದ ಜನರಿಗೆ ಹೈನುಗಾರಿಕೆ ಪ್ರಮುಖ ಆದಾಯ ಮೂಲವಾಗಿದ್ದು, ಈ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಸಹಕಾರ ಮುಂದುವರಿಯಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಮಹಾಂತೇಶ ನಗರದ ಸ್ಪೇಷಾಲಿಟಿ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಕಾರ್ಯಕ್ರಮ ನಡೆಯಿತು. ಈ ವೇಳೆ 9ನೇ ಸುತ್ತಿನ ಕಾಲು-ಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಜಾನುವಾರುಗಳ ಆರೋಗ್ಯ ಕಾಪಾಡಲು ಲಸಿಕೆ ಅತ್ಯಂತ ಅಗತ್ಯವಾಗಿದ್ದು, ಪ್ರತಿಯೊಂದು ಗ್ರಾಮ ಮತ್ತು ಕುಟುಂಬಕ್ಕೂ ಇದರ ಪ್ರಯೋಜನ ತಲುಪಬೇಕು ಎಂದು ಕರೆ ನೀಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿ, ಹೈನುಗಾರಿಕೆ ಮಹಿಳೆಯರೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಸರ್ಕಾರದ ಯೋಜನೆಗಳು ನೇರವಾಗಿ ಜನರಿಗೆ ತಲುಪಬೇಕು. ಎಲ್ಲಾ ಜಾನುವಾರುಗಳಿಗೆ ಲಸಿಕೆ ನೀಡುವಂತೆ ಅವರು ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಸಕ ಆಸೀಫ್ ಸೇರ್, ಪಶುಸಂಗೋಪನೆಯನ್ನು ಉತ್ತೇಜಿಸಿ ಜಾನುವಾರುಗಳ ಸಮರ್ಪಕ ಆರೈಕೆ ಮಾಡಬೇಕು ಎಂದು ಹೇಳಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬಸವರಾಜ ಕಟ್ಟಿಮನಿ ಬದುಕು-ಬರಹ ಮಲಾಮರಡಿಗೆ ಅಸ್ಮಿತೆ: ಡಾ. ಗುರುಪಾದ ಮರೇಗುದ್ದಿ

ಕುವೆಂಪು ಅವರಿಂದ ಕುಪ್ಪಳಿ, ಬೇಂದ್ರೆ ಅವರಿಂದ ಧಾರವಾಡ ಹೆಸರುವಾಸಿಯಾದಂತೆ, ಬಸವರಾಜ ಕಟ್ಟಿಮನಿಯವರಿಂಧ...